ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್​​ ಪಲ್ಟಿ : ನಾಲ್ವರ ದುರ್ಮರಣ

ತೂಮಕೂರು: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್​​ಪಲ್ಟಿಯಾದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ.

ತಿಪಟೂರು ತಾಲೂಕಿನ ಹತ್ಯಾಳು ನರಸಿಂಹಸ್ವಾಮಿ ಬೆಟ್ಟದಲ್ಲಿ ಘಟನೆ ನಡೆದಿದ್ದು ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟರೆ, 12 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಚಿಕ್ಕನಾಯಕನಹಳ್ಳಿ ತಾಲೂಕಿನ‌ ಮಾದಾಪುರ ಗ್ರಾಮದ 20 ಜನ ನರಸಿಂಹಸ್ವಾಮಿ ದೇವಾಲಯಕ್ಕೆ ಹೋಗಿ ಬರುವ ವೇಳೆ ಬೆಟ್ಟ ಕಡಿದಾದ ಇಳಿಜಾರು ಇದ್ದರಿಂದ ಟ್ರ್ಯಾಕ್ಟರ್​​ಚಾಲಕನ ನಿಯಂತ್ರಣಕ್ಕೆ ಬಾರದ ಕಾರಣ ಏಕಾಏಕಿ ಪಲ್ಟಿಯಾಗಿದೆ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೆ.ಬಿ.ಕ್ರಾಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *