

ಆಂಧ್ರಪ್ರದೇಶ: ಗುಂಟೂರು ಜಿಲ್ಲೆಯಲ್ಲಿ ವಟ್ಟಿಚೆರುಕೂರಿನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ಹಳ್ಳಕ್ಕೆ ನುಗ್ಗಿ ಪಲ್ಟಿಯಾಗಿದೆ. ಈ ದುರ್ಘಟನೆಯಲ್ಲಿ ಆರು ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ.
ಈ ದುರ್ಘಟನೆಯಲ್ಲಿ ಆರು ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಾಗ ಮೂವರು ಸಾವನ್ನಪ್ಪಿದ್ದಾರೆ. ಗುಂಟೂರು ಜಿಜಿಎಚ್‌ಗೆ ರವಾನಿಸಲಾಗಿದೆ. ಅಪಘಾತದ ವೇಳೆ ಟ್ರ್ಯಾಕ್ಟರ್‌ನಲ್ಲಿ 40 ಜನರಿದ್ದರು ಎನ್ನಲಾಗಿದೆ.
ಇವರೆಲ್ಲರೂ ಶುಭ ಕಾರ್ಯದ ನಿಮಿತ್ತ ಚೇಬ್ರೋಳು ಮಂಡಲದ ಜುಪುಡಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮೃತರನ್ನು ಪ್ರಟ್ಟಿಪಾಡು ಮಂಡಲದ ಕೊಂಡೆಪಾಡು ನಿವಾಸಿಗಳು ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.