26.8 C
Bangalore
Friday, December 13, 2019

ಫುಟ್‌ಪಾತ್‌ನಲ್ಲೇ ವ್ಯಾಪಾರ ವಹಿವಾಟು

Latest News

ಶಬರಿಮಲೆ ವಿಚಾರದಲ್ಲಿ ಸದ್ಯ ಯಾವುದೇ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​

ನವದೆಹಲಿ: ಪೊಲೀಸ್​ ರಕ್ಷಣೆಯೊಂದಿಗೆ ಶಬರಿಮಲೆ ಅಯ್ಯಪ್ಪನ ಸನ್ನಿಧಿಯನ್ನು ಮಹಿಳೆಯರು ಸುರಕ್ಷಿತವಾಗಿ ಪ್ರವೇಶಿಸಲು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ...

ತುಮಕೂರು ಸ್ಮಾರ್ಟ್‌ಸಿಟಿ ಜೆಎಂಡಿ ಎತ್ತಂಗಡಿ!

ತುಮಕೂರು: ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 3 ತಿಂಗಳ ಹಿಂದೇ ಸ್ಮಾರ್ಟ್‌ಸಿಟಿ ಎಂಡಿ ಜವಾಬ್ದಾರಿ ಹೊಣೆ ಹೊತ್ತಿದ್ದ ಮಹಾನಗರ...

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಗುಂಡ್ಲುಪೇಟೆ: ಪಟ್ಟಣದ ಜನನಿಬಿಡ ರಸ್ತೆಗಳ ಫುಟ್‌ಪಾತ್‌ನಲ್ಲಿ ಹೂ, ಹಣ್ಣು ಹಾಗೂ ತರಕಾರಿ ವ್ಯಾಪಾರ ನಡೆಯುತ್ತಿದ್ದು, ಇದರಿಂದ ಪಾದಚಾರಿಗಳು ಕಿರಿಕಿರಿ ಅನುಭವಿಸುವಂತಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮಿಳುನಾಡಿನ ಊಟಿ ಹಾಗೂ ಕೇರಳದ ಸುಲ್ತಾನ್ ಬತ್ತೇರಿಗೆ ತೆರಳುವ ವಾಹನಗಳು ಕರ್ನಾಟಕದ ಗಡಿ ಭಾಗವಾದ ಗುಂಡ್ಲುಪೇಟೆ ತಾಲೂಕನ್ನು ಹಾದುಹೋಗಬೇಕು. ಹೀಗಾಗಿ ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಸದಾ ವಾಹನಗಳ ಸಂಚಾರ ಅಧಿಕವಾಗಿರುತ್ತದೆ. 4 ವರ್ಷಗಳ ಹಿಂದೆ ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ನಡೆಸಿದರೂ ಎಲ್ಲಿಯೂ ಸರ್ವೀಸ್ ರಸ್ತೆ ನಿರ್ಮಿಸಿಲ್ಲ. ಅಲ್ಲದೆ ಪಾದಚಾರಿ ಮಾರ್ಗವನ್ನೂ ಸಮರ್ಪಕವಾಗಿ ಮಾಡಿಲ್ಲ.

ಹೆದ್ದಾರಿಯ ಎರಡೂ ಬದಿಯಲ್ಲೂ ಬ್ಯಾಂಕುಗಳು, ತಾಲೂಕು ಕಚೇರಿ, ಪುರಸಭೆ, ಅಂಚೆ ಕಚೇರಿ, ಸೆಸ್ಕ್ ಕಚೇರಿ, ಇಂದಿರಾ ಕ್ಯಾಂಟೀನ್ ಹಾಗೂ ವಾಣಿಜ್ಯ ಮಳಿಗೆಗಳಿವೆ. ಹೀಗಾಗಿ ಈ ಭಾಗದಲ್ಲಿ ಜನಸಂದಣಿ ಅಧಿಕವಾಗಿರುತ್ತದೆ. ಸರ್ವೀಸ್ ರಸ್ತೆ ಇಲ್ಲದ ಕಾರಣ ಸವಾರರು ತಮ್ಮ ದ್ವಿಚಕ್ರ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುತ್ತಿದ್ದಾರೆ. ಇದರಿಂದ ಸುಗಮ ಸಂಚಾರಕ್ಕೆ ಅಡೆತಡೆಯಾಗುವ ಜತೆಗೆ ಪಾದಚಾರಿಗಳು ತೊಂದರೆ ಅನುಭವಿಸುವಂತಾಗಿದೆ.

ಪಟ್ಟಣದ ಡಿ.ದೇವರಾಜ ಅರಸು ಕ್ರೀಡಾಂಗಣದಿಂದ ಊಟಿ ವೃತ್ತದವರೆಗೂ ರಸ್ತೆಯ ಎರಡೂ ಬದಿಗಳಲ್ಲಿಯೂ ಫುಟ್‌ಪಾತ್ ಮೇಲೆ ಹಣ್ಣು, ಹೂ, ತರಕಾರಿ, ತಳ್ಳುಗಾಡಿಗಳು, ಸಂಜೆ ಫಾಸ್ಟ್‌ಫುಡ್ ಗಾಡಿಗಳು ನಿಲ್ಲುತ್ತಿದ್ದು, ಪಾದಚಾರಿಗಳು ಸಂಚರಿಸಲು ಸಾಧ್ಯವಾಗುತ್ತಿಲ್ಲ. ಪುರಸಭೆಯವರು ಪ್ರತಿದಿನ ತಳ್ಳುಗಾಡಿಗಳು ಹಾಗೂ ಮೊಬೈಲ್ ಕ್ಯಾಂಟೀನ್‌ಗಳಿಂದ 30 ರಿಂದ 50 ರೂ. ನೆಲಕಂದಾಯ ವಸೂಲಿ ಮಾಡುತ್ತಿದ್ದು, ಜನಸಂಚಾರಕ್ಕೆ ತೊಂದರೆಯಾಗದಂತೆ ಅವರಿಗೆ ಸ್ಥಳಾವಕಾಶ ಒದಗಿಸಿಲ್ಲ. ಇದರಿಂದ ಪಾದಚಾರಿಗಳು ರಸ್ತೆಯಲ್ಲಿಯೇ ಓಡಾಡುವಂತಾಗಿದೆ.

ಅಲ್ಲದೆ ರಸ್ತೆಯ ನಡುವೆ ಬೀಡಾಡಿ ದನಗಳು ನಿಂತು ಸಂಚಾರಕ್ಕೆ ಅಡ್ಡಿಯುಂಟು ಮಾಡುತ್ತಿದ್ದರೆ, ರಸ್ತೆ ಬದಿಗಳಲ್ಲಿ ವಾಹನಗಳ ನಿಲುಗಡೆಯಿಂದ ಹೊರರಾಜ್ಯಗಳಿಗೆ ತೆರಳುವ ವಾಹನಗಳ ಸಂಚಾರಕ್ಕೆ ಅಡ್ಡಿಯುಂಟಾಗುತ್ತಿದೆ. ಅಡ್ಡಾದಿಡ್ಡಿ ಓಡಾಡುವ ಜಾನುವಾರುಗಳಿಂದ ಪದೇ ಪದೆ ಅಪಘಾತಗಳು ಸಂಭವಿಸುತ್ತಿವೆ.
ಆದ್ದರಿಂದ ಪುರಸಭೆಯವರು ಬೀದಿಬದಿಯ ವ್ಯಾಪಾರಸ್ಥರಿಗೆ ಪ್ರತ್ಯೇಕ ಸ್ಥಳ ನಿಗದಿಪಡಿಸಿ, ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಪಟ್ಟಣದ ನಿವಾಸಿ ಸುಂದರೇಶ್ ಒತ್ತಾಯಿಸಿದ್ದಾರೆ.

ವಾಹನ ಸಂಚಾರ ದುಸ್ತರ: ಪಟ್ಟಣದಲ್ಲಿ ಸಂಚಾರ ಪೊಲೀಸರಿಲ್ಲದೆ ವಾಹನ ಸಂಚಾರ ದುಸ್ತರವಾಗಿದೆ. ಹಳೇ ಬಸ್ ನಿಲ್ದಾಣ ಹಾಗೂ ಮಡಹಳ್ಳಿ ವೃತ್ತದಂತಹ ಜನನಿಬಿಡ ರಸ್ತೆಗಳಲ್ಲಿ ಸಂಚಾರ ಸುಗಮಗೊಳಿಸಲು ಪೊಲೀಸರು ರಬ್ಬರ್ ರಸ್ತೆ ವಿಭಜಕಗಳನ್ನು ಹಾಕಿದ್ದರೂ ಅವುಗಳ ಮೇಲೆಯೇ ಲಾರಿಗಳನ್ನು ಹರಿಸಲಾಗಿದೆ. ಪರಿಣಾಮ ಅವುಗಳು ಮುರಿದು ಹಾಳಾಗಿವೆ. ಅಲ್ಲದೆ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿ ಕೊರತೆ ಇರುವುದರಿಂದ ಸಂಚಾರ ನಿಯಂತ್ರಣ ಕಷ್ಟಸಾಧ್ಯವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಿಬ್ಬಂದಿಯ ಕೊರತೆಯಿಂದ ಫುಟ್‌ಪಾತ್ ವ್ಯಾಪಾರಿಗಳು ಹಾಗೂ ತಳ್ಳುಗಾಡಿಗಳಿಗೆ ಸ್ಥಳಾವಕಾಶ ಒದಗಿಸಲು ಸಾಧ್ಯವಾಗಿಲ್ಲ. ಅಲ್ಲದೆ ನೆಲಬಾಡಿಗೆ ವಸೂಲಿ ಕೆಲಸವನ್ನು ಟೆಂಡರ್ ಮೂಲಕ ಹರಾಜು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇವರಿಗೆ ಪ್ರತ್ಯೇಕ ಸ್ಥಳಾವಕಾಶ ನೀಡಲು ಕ್ರಮ ಕೈಗೊಳ್ಳಲಾಗುವುದು. ಪೊಲೀಸ್ ನೆರವಿನಿಂದ ಬಿಡಾಡಿ ದನಗಳನ್ನು ವಶಕ್ಕೆ ಪಡೆದು ಪಿಂಜ್ರಾಪೋಲ್‌ಗೆ ಕಳುಹಿಸಲಾಗುವುದು.
ಎ.ರಮೇಶ್, ಪುರಸಭೆ ಮುಖ್ಯಾಧಿಕಾರಿ, ಗುಂಡ್ಲುಪೇಟೆ

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....