ಫ್ರೀಡಂ ಪಾರ್ಕ್ ಸುತ್ತ ಸಂಚಾರ ದಟ್ಟಣೆ; ಪರ್ಯಾಯ ಮಾರ್ಗ ಬಳಸಿ ಟ್ರಾಫಿಕ್ ಪೊಲೀಸರ ಸಲಹೆ

traffic
Published on

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿ ಸಂಯುಕ್ತ ಹೋರಾಟ ಸಮಿತಿ ಮತ್ತು ಕೆಲ ಸಂಘಟನೆಗಳು ಸೋಮವಾರ ಮತ್ತು ಮಂಗಳವಾರ ರಾಜಭವನ ಚಲೋ ಹಮ್ಮಿಕೊಂಡಿದ್ದಾರೆ. ಸಾರ್ವಜನಿಕರ ಸುಗಮ ಸಂಚಾರದ ಸಲುವಾಗಿ ಸಂಚಾರ ಪೊಲೀಸರು ಕೆಲ ಸಲಹೆ ನೀಡಿದ್ದಾರೆ.

ಫ್ರೀಡಂ ಪಾರ್ಕ್‌ನಿಂದ ರಾಜಭವನ ಚಲೋ ಹಮ್ಮಿಕೊಂಡಿದ್ದಾರೆ. ಆದರಿಂದ ಕೆ.ಜಿ. ರಸ್ತೆ ಮೂಲಕ ಮೈಸೂರು ಬ್ಯಾಂಕ್ ವೃತ್ತದಿಂದ ಬಲ ತಿರುವು ಪಡೆದು ಫ್ರೀಡಂ ಪಾರ್ಕ್ ಕಡೆಗೆ ಬರುವ ವಾಹನಗಳು ಕಡ್ಡಾಯವಾಗಿ ಅರಮನೆ ಕ್ರಾಸ್ ರಸ್ತೆಯ ಮಹಾರಾಣಿ ಅಂಡರ್ ಪಾಸ್ ರಸ್ತೆಯಲ್ಲಿ ಬಳಸಬೇಕು.

ಫ್ರೀಡಂ ಪಾರ್ಕ್ ಜಂಕ್ಷನ್‌ನಿಂದ ಕನಕದಾಸ ವೃತ್ತದ ಕಡೆಗೆ ಬರುವ ಮತ್ತು ಹೋಗುವ ವಾಹನಗಳು ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ವಾಹನ ಸವಾರರು ಈ ರಸ್ತೆ ಬಳಸಬೇಡಿ.

ಖೋಡೆ ಜಂಕ್ಷನ್ ಕಡೆಯಿಂದ ಕೆ.ಆರ್.ಸರ್ಕಲ್ ಕಡೆಗೆ ಹೋಗುವ ವಾಹನ ಸವಾರರು ಪ್ಲೈಓವರ್ ರಸ್ತೆಯಲ್ಲಿ ರೈಲ್ವೆ ನಿಲ್ದಾಣದಿಂದ ಪ್ರತಿಭಟನೆಗೆ ಬರುವಂತ ಜನರು ಕಾಲ್ನಡಿಗೆಯಲ್ಲಿ ಬರುವವರಿದ್ದು, ವಾಹನ ಸಂಚಾರ ದಟ್ಟಣೆಯಾದಲ್ಲಿ ವಾಹನ ಸವಾರರು ಹಳೆ ಜೆಡಿಎಸ್ ಕಚೇರಿ ರಸ್ತೆಯಲ್ಲಿ ಬಳಸುವಂತೆ ಕೋರಲಾಗಿದೆ. ಸುಬ್ಬಣ್ಣ ಜಂಕ್ಷನ್‌ನಿಂದ ಎಂಟಿಆರ್ ಜಂಕ್ಷನ್ ಕಡೆಗೆ ಬರುವ ರಸ್ತೆಯು ಹಾಲಿ ಏಕಮುಖ ಸಂಚಾರ ರಸ್ತೆಯಾಗಿದೆ. ತಾತ್ಕಾಲಿಕವಾಗಿ ದ್ವಿಮುಖ ಸಂಚಾರ ರಸ್ತೆಯನ್ನಾಗಿ ಪರಿವರ್ತಿಸಲಾಗಿದೆ. ಗಾಂಧಿನಗರ ಕಡೆಗೆ ಬರುವ ವಾಹನ ಸವಾರರು ಈ ರಸ್ತೆಯಲ್ಲಿ ಬಳಸುವಂತೆ ಸಂಚಾರ ಪೊಲೀಸರು ಸೂಚಿಸಿದ್ದಾರೆ.

ನೋ ಪಾರ್ಕಿಂಗ್ :

ಖೋಡೆ ಜಂಕ್ಷನ್‌ನಿಂದ ಮಹಾರಾಣಿ ಜಂಕ್ಷನ್ ವರೆಗೆ ವೈ.ರಾಮಚಂದ್ರ ರಸ್ತೆ, ಕಾಳಿದಾಸ ರಸ್ತೆ, ಅರಮನೆ ರಸ್ತೆ, ಕೆ.ಜಿ.ರಸ್ತೆಗಳಲ್ಲಿ ಪಾರ್ಕಿಂಗ್ ನಿರ್ಬಂಧಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net