ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ (ಅ.16) ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಕ್ರಿಕೆಟ್ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, ಈ ಹಿನ್ನೆಲೆ ವಾಹನಸವಾರರ ಅನುಕೂಲಕ್ಕಾಗಿ ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಸಂಚಾರ ವ್ಯವಸ್ಥೆ ಮಾರ್ಪಾಡು ಮಾಡಿ ಟ್ರಾಫಿಕ್ ಪೊಲೀಸರು ಆದೇಶಿಸಿದ್ದಾರೆ.
ಕ್ವೀನ್ಸ್ ರಸ್ತೆ, ಎಂ.ಜಿ. ರಸ್ತೆಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಬಾ ರಸ್ತೆ, ಅಂಬೇಡ್ಕರ್ ವೀಧಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ, ವಿಠ್ಠಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ ಮತ್ತು ನೃಪತುಂಗ ರಸ್ತೆಯಲ್ಲಿ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ.
ಸಾರ್ವಜನಿಕರು ಯುಬಿ ಸಿಟಿ ಪಾರ್ಕಿಂಗ್ ಸ್ಥಳ, ಬಿಎಂಟಿಸಿ ಬಸ್ ನಿಲ್ದಾಣದ ಮೊದಲ ಮಹಡಿ, ಕಿಂಗ್ಸ್ ರಸ್ತೆಯಲ್ಲಿ (ಕಬ್ಬನ್ ಪಾರ್ಕ್ ಒಳಭಾಗ) ಪಾರ್ಕಿಂಗ್ ಮಾಡಬಹುದು. ಕಬ್ಬನ್ ರಸ್ತೆಯ ಬಿ.ಆರ್.ವಿ. ಜಂಕ್ಷನ್‌ನಿಂದ ಸಿಟಿಒ ಸರ್ಕಲ್‌ವರೆಗೆ ಕ್ಯಾಬ್, ಆಟೋಗಳ ಪ್ರಯಾಣಿಕರನ್ನು ಇಳಿಸುವ ಮತ್ತು ಹತ್ತಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.