ಶಾಲಾ ವಾಹನಗಳಿಗೆ ಬಿಸಿ ಮುಟ್ಟಿಸಿದ ಟ್ರಾಫಿಕ್ ಪೊಲೀಸ್; 994 ಕೇಸ್ ದಾಖಲು

school vas
Published on

ಬೆಂಗಳೂರು: ಸುಪ್ರೀಂ ಕೋರ್ಟ್ ಮಾರ್ಗಸೂಚಿ ಪಾಲಿಸದೆ ವಿದ್ಯಾರ್ಥಿಗಳನ್ನು ಕರೆದೊಯ್ದುತ್ತಿದ್ದ ಶಾಲಾ ವಾಹನಗಳ ವಿರುದ್ಧ ಮಂಗಳವಾರ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.

ಶಾಲಾ ಮಕ್ಕಳ ಸುರಕ್ಷತೆ ಹಿತದೃಷ್ಟಿಯಿಂದ ಮಧ್ಯಾಹ್ನ 2.30ರಿಂದ ಸಂಜೆ 4.30ರ ನಡುವೆ ನಗರದ ಎಲ್ಲೆಡೆ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು. ಶಾಲಾ ವಾಹನಗಳು, ಖಾಸಗಿ ವಾಹನಗಳಲ್ಲಿ ನಿಗದಿಪಡಿಸಿದ ಸಂಖ್ಯೆಗಿಂತ ಹೆಚ್ಚಿನ ಶಾಲಾ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಚಾಲಕರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ಮೋಟಾರು ವಾಹನ ಕಾಯಿದೆ ಅನ್ವಯ ನಿಯಮ ಉಲ್ಲಂಸಿದ 994 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಎಂ.ಎನ್. ಅನುಚೇತ್ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ಸೂಚನೆಯಂತೆ ರಾಜ್ಯ ಸರ್ಕಾರ ಶಾಲಾ ವಾಹನಗಳಿಗೆ ಪ್ರತ್ಯೇಕ ಮಾರ್ಗಸೂಚಿ ರೂಪಿಸಿದೆ. ಅದನ್ನು ಶಾಲಾ ಆಡಳಿತ ಮಂಡಳಿ, ಶಾಲಾ ವಾಹನ ಚಾಲಕರು ಮತ್ತು ವಿದ್ಯಾರ್ಥಿಗಳ ಪಾಲಕರು ಕಡ್ಡಾಯವಾಗಿ ಪಾಲನೆ ಮಾಡಬೇಕು. ಇಲ್ಲವಾದರೆ, ಶಾಲಾ ವಿದ್ಯಾರ್ಥಿಗಳ ಸುರಕ್ಷತೆಗೆ ಧಕ್ಕೆ ಉಂಟಾಗಲಿದೆ. ಆದರಿಂದ ಸಂಚಾರ ಪೊಲೀಸರು, ಕಾರ್ಯಾಚರಣೆ ಮುಂದುವರಿಸುತ್ತಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

2050 ವಾಹನಗಳ ತಪಾಸಣೆ :

2050 ಶಾಲಾ ವಾಹನಗಳನ್ನು ತಪಾಸಣೆ ನಡೆಸಿದ್ದು, ನಿಯಮ ಉಲ್ಲಂಸಿದ್ದ ವಾಹನಗಳ ವಿರುದ್ಧ 994 ಪ್ರಕರಣ ದಾಖಲು ಮಾಡಲಾಗಿದೆ. ಇದರಲ್ಲಿ 319 ಬಸ್‌ಗಳು, 122 ಆಟೋ ರಿಕ್ಷಾ, 133 ಓಮಿನಿ ಮತ್ತು 88 ಇತರ ವಾಹನಗಳು ಸೇರಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net