More

    ಜ. 26 ಗಣರಾಜ್ಯೋತ್ಸವ ಸಂಭ್ರಮ: ಸಂಚಾರ ಮಾರ್ಗ ಬದಲಾವಣೆ, ಪಾರ್ಕಿಂಗ್ ವ್ಯವಸ್ಥೆ ಕುರಿತ ಮಾಹಿತಿ ಇಲ್ಲಿದೆ…​

    ಬೆಂಗಳೂರು: ಜ.26ರಂದು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದಲ್ಲಿ ಗಣರಾಜ್ಯೋತ್ಸವ ಸಂಭ್ರಮ ನಡೆಯಲಿದ್ದು, ಇದರ ಅಂಗವಾಗಿ ಬೆಂಗಳೂರು ನಗರ ಸಂಚಾರ ಪೊಲೀಸರು ಮೈದಾನದ ಒಳಗಡೆ ಮತ್ತು ಸುತ್ತ ಮುತ್ತಲಿನ ರಸ್ತೆಗಳಲ್ಲಿ ಸಂಚಾರ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಿದ್ದಾರೆ. ಅಲ್ಲದೆ, ನಗರ ಪೊಲೀಸರು ಕೂಡ ಸೂಕ್ತ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ.

    ಸಂಚಾರ ಬಂದೋಬಸ್ತ್​ ವ್ಯವಸ್ಥೆ ಹೀಗಿದೆ…
    1. ಕಾರ್ ಪಾಸ್‌ಗಳನ್ನು ಹೊಂದಿರುವ ಎಲ್ಲಾ ಆಹ್ವಾನಿತರು ಅವರುಗಳ ಪಾಸ್‌ಗಳಲ್ಲಿ ನಿಗದಿಪಡಿಸಿದ ಗೇಟ್‌ಗಳಲ್ಲಿ ಇಳಿದುಕೊಳ್ಳುವುದು ಹಾಗೂ ಪಾಸ್‌ನಲ್ಲಿ ನಿಗದಿಪಡಿಸಿರುವ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡುವಂತೆ ಕೋರಲಾಗಿದೆ.

    2. ತುರ್ತು ಸೇವಾ ವಾಹನಗಳಾದ ಆಂಬುಲೆನ್ಸ್, ಅಗ್ನಿ ಶಾಮಕ ದಳದ ವಾಹನಗಳು, ನೀರಿನ ಟ್ಯಾಂಕರ್, ಕೆ.ಎಸ್.ಆರ್.ಪಿ., ಸಿ.ಆರ್.ಟಿ., ಬಿ.ಬಿ.ಎಂ.ಪಿ. ಹಾಗೂ ಪಿ.ಡಬ್ಲ್ಯೂ.ಡಿ, ವಾಹನಗಳು ಪ್ರವೇಶ ದ್ವಾರ-2 ರ ಮುಖಾಂತರ ಪರೇಡ್ ಮೈದಾನದ ಒಳಗೆ ಪ್ರವೇಶಿಸಿ ನಂತರ ಪೋರ್ಟ್ ವಾಲ್ ಹಿಂಭಾಗದಲ್ಲಿ (ದಕ್ಷಿಣದ ಕಡೆಗೆ) ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.

    3. ಕಾರ್ಯಕ್ರಮಕ್ಕೆ ಬರುವ ಎಲ್ಲಾ ಮಾಧ್ಯಮದವರ ವಾಹನಗಳು ಪ್ರವೇಶ ದ್ವಾರ 4 ರ ಮೂಲಕ ಒಳಪ್ರವೇಶಿಸಿ ಮೈದಾನದ ಪೂರ್ವ ಭಾಗದಲ್ಲಿ ನಿಗದಿತ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಬಹುದಾಗಿದೆ.

    4. ದಿನಾಂಕ 26ರಂದು ಬೆಳಗ್ಗೆ 08.30ರಿಂದ ಬೆಳಗ್ಗೆ 10.30ರ ವರೆಗೆ ಕಬ್ಬನ್‌ ರಸ್ತೆಯಲ್ಲಿ ಬಿ.ಆ‌ರ್.ವಿ ಜಂಕ್ಷನ್‌ನಿಂದ ಕಾಮರಾಜ ರಸ್ತೆ ಜಂಕ್ಷನ್‌ವರೆಗೆ ಎರಡೂ ದಿಕ್ಕುಗಳಲ್ಲಿನ ಸಂಚಾರವನ್ನು ನಿರ್ಬಂಧಿಸಿ ಈ ಕೆಳಕಂಡಂತೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸುವ ವ್ಯವಸ್ಥೆ ಮಾಡಲಾಗಿದೆ.

    * ಇನ್‌ಫೆಂಟ್ರಿ ರಸ್ತೆಯಲ್ಲಿ ಮಣಿಪಾಲ್ ಸೆಂಟರ್ ಕಡೆಗೆ ಸಂಚರಿಸುವ ವಾಹನಗಳು ನೇರವಾಗಿ ಇನ್ಫೆಂಟ್ರಿ ರಸ್ತೆ – ಸಫೀನಾ ಪ್ಲಾಜಾ – ಎಡ ತಿರುವು ಪಡೆದು ಮೈನ್ಗಾರ್ಡ್ ರಸ್ತೆ- ಆಲೀಸ್ ಸರ್ಕಲ್- ಡಿಸ್ಪೆನ್ಸರಿ ರಸ್ತೆ- ಕಾಮರಾಜ ರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್ ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ- ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್ ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬಹುದಾಗಿದೆ.

    * ಕಬ್ಬನ್‌ ರಸ್ತೆಯಲ್ಲಿ, ಮಣಿಪಾಲ್ ಸೆಂಟರ್ ಜಂಕ್ಷನ್‌ನಿಂದ ಬಿ.ಆರ್.ವಿ. ಜಂಕ್ಷನ್ ಕಡೆಗೆ ಬರುವ ವಾಹನಗಳ ಸಂಚಾರವನ್ನು ಮಣಿಪಾಲ್ ಸೆಂಟರ್ ಬಳಿ ನಿರ್ಭಂಧಿಸಿದ್ದು, ಸದರಿ ವಾಹನಗಳು ವೆಬ್ ಜಂಕ್ಷನ್ ಬಳಿ ಬಲ ತಿರುವು ಪಡೆದು ಎಂ.ಜಿ.ರಸ್ತೆಯ ಮುಖಾಂತರ ಮೆಯೋಹಾಲ್, ಕಾವೇರಿ ಎಂಪೋರಿಯಂ, ಅನಿಲ್ ಕುಂಬ್ಳೆ ವೃತ್ತದಲ್ಲಿ ಬಲ ತಿರುವು ಪಡೆದು ಮುಂದೆ ಸಾಗಬಹುದು.

    * ಅನಿಲ್​ ಕುಂಬ್ಳೆ ವೃತ್ತದಿಂದ ಕಬ್ಬನ್​ ರಸ್ತೆ ಕಡೆಗೆ ಬರುವ ವಾಹನಗಳು ನೇರವಾಗಿ ಸೆಂಟ್ರಲ್​ ಸ್ಟ್ರೀಟ್​ ರಸ್ತೆಯಲ್ಲಿ ಸಾಗಿ, ಬಲಕ್ಕೆ ತಿರುವು ಪಡೆದು-ಇನ್ ಫೆಂಟ್ರಿ ರಸ್ತೆ- ಸಫೀನಾ ಪ್ಲಾಜಾ ಎಡಕ್ಕೆ ತಿರುವು ಪಡೆದು ಮೈನ್‌ ಗಾರ್ಡ್ ರಸ್ತೆ- ಆಲಿ ಸರ್ಕಲ್- ಡಿಸ್ಪೆನ್ಸರಿ ರಸ್ತೆ- ಕಾಮರಾಜ ರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್ – ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ- ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್ ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬಹುದಾಗಿದೆ.

    5. ಭದ್ರತಾ ದೃಷ್ಟಿಯಿಂದ ಪೆರೇಡ್​ಗೆ ಬರುವ ಎಲ್ಲಾ ಆಹ್ವಾನಿತರು ಮೊಬೈಲ್ ಫೋನ್, ಹೆಲೈಟ್, ಕ್ಯಾಮೆರಾ, ರೇಡಿಯೋ, ಕೊಡೆ ಮುಂತಾದ ವಸ್ತುಗಳನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗದಂತೆ ಕೋರಲಾಗಿದೆ. ಇಂತಹ ವಸ್ತುಗಳನ್ನು ಹೊಂದಿರುವವರನ್ನು ಒಳಗೆ ಬಿಡಲಾಗುವುದಿಲ್ಲ. ಎಲ್ಲರೂ ಬೆಳಗ್ಗೆ 08-00 ಗಂಟೆಯ ಒಳಗೆ ಮೈದಾನದಲ್ಲಿ ಆಸೀನರಾಗುವಂತೆ ಕೋರಲಾಗಿದೆ.

    ವಾಹನ ನಿಲುಗಡೆ ನಿಷಿದ್ದ ರಸ್ತೆಗಳು:
    1. ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣದ ವರೆಗೆ
    2. ಕಬ್ಬನ್ ರಸ್ತೆ, ಸಿ.ಟಿ.ಓ. ವೃತ್ತದಿಂದ ಕೆ.ಆರ್.ರಸ್ತೆ & ಕಬ್ಬನ್ ರಸ್ತೆ ಜಂಕ್ಷನ್ ವರೆಗೆ
    3. ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ಲೀನ್ಸ್ ವೃತ್ತದ ವರೆಗೆ
    ವಿಶೇಷ ಮನವಿ
    1. ಯಾವುದೇ ಸಹಾಯಕ್ಕಾಗಿ ಪೊಲೀಸರು ಸದಾ ನಿಮ್ಮೊಂದಿಗಿರುತ್ತಾರೆ. ಸ್ಥಳದಲ್ಲಿರುವ ಪೊಲೀಸರನ್ನು ಸಂಪರ್ಕಿಸಿ, ಅಥವಾ 112ಗೆ ಕರೆಮಾಡಿ.
    2. ಗಣರಾಜ್ಯೋತ್ಸವ ದಿನಾಚರಣೆಯನ್ನು ಯಶಸ್ವಿಗೊಳಿಸಲು ತಮ್ಮ ಸಹಕಾರವನ್ನು ಬಯಸುತ್ತೇವೆ.

    ಭದ್ರತಾ ವ್ಯವಸ್ಥೆ ಹೀಗಿದೆ…
    ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ದಿನಾಂಕ 26ರಂದು ಗಣರಾಜ್ಯೋತ್ಸವದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿರುತ್ತದೆ. ಕಾರ್ಯಕ್ರಮದ ಆಚರಣೆಯು ಸುಲಲಿತವಾಗಿ ನಡೆಯಲು ಹಾಗೂ ಮೈದಾನದ ಭದ್ರತೆಯ ಸಲುವಾಗಿ ಮುಂಜಾಗರೂಕತಾ ಕ್ರಮಗಳಾಗಿ ಕಳೆದ 15 ದಿನಗಳಿಂದ ಮೈದಾನಕ್ಕೆ ಪೊಲೀಸರನ್ನು ಕಣ್ಣಾವಲು ಕರ್ತವ್ಯಕ್ಕೆ ನಿಯೋಜಿಸಲಾಗಿರುತ್ತದೆ ಹಾಗೂ ಬೆಂಗಳೂರು ನಗರದ ಎಲ್ಲಾ ಹೋಟೆಲ್, ಲಾಡ್ಜ್​ಗಳು ತಂಗುದಾಣಗಳು, ಇನ್ನಿತರೆ ಸ್ಥಳಗಳಲ್ಲಿ ಅನುಮಾನಾಸ್ಪದವಾಗಿ ವಾಸ್ತವ್ಯ ಹೂಡುವವರ ಮೇಲೆ ಸೂಕ್ತ ನಿಗಾವಹಿಸಲಾಗಿರುತ್ತದೆ.

    ದಿನಾಂಕ 26ರಂದು ನಡೆಯುವ ಧ್ವಜಾರೋಹಣ, ಕವಾಯತು ಹಾಗೂ ಸಾಂಸ್ಕೃತಿಕ ಸಮಾರಂಭದ ಉದ್ಘಾಟನೆಯನ್ನು ಗೌರವಾನ್ವಿತ ರಾಜ್ಯಪಾಲರು ನೆರವೇರಿಸಲಿದ್ದು, ಈ ಸಂಬಂಧ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ನಗರದ ಎಲ್ಲಾ ವಿಭಾಗಗಳಿಂದ 9 ಡಿಸಿಪಿ, 16 ಎಸಿಪಿ, 46 ಪೊಲೀಸ್​ ಇನ್ಸ್​ಪೆಕ್ಟರ್ಸ್​, 109-ಪಿಎಸ್​ಐ/ಮಹಿಳಾ ಪಿಎಸ್​ಐ, 77 ಎಎಸ್​ಐ, 594 ಹೆಡ್​ಕಾನ್ಸ್​ಟೆಬಲ್​/ ಪೊಲೀಸ್​ ಕಾನ್ಸ್​ಟೆಬಲ್​ 87 ಮಹಿಳಾ ಸಿಬ್ಬಂದಿಗಳೊಂದಿಗೆ 184 ಸಾದಾ ಉಡುಪಿನ ಅಧಿಕಾರಿ ಮತ್ತು ಸಿಬ್ಬಂದಿಗಳು ಮತ್ತು 56 ಜನ ಕ್ಯಾಮೆರಾ ಸಿಬ್ಬಂದಿಗಳನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿರುತ್ತದೆ.

    ಸಂಚಾರ ನಿರ್ವಹಣಗೆ 04 ಡಿಸಿಪಿ, 06 ಎಸಿಪಿ, 21 ಪೊಲೀಸ್​ ಇನ್ಸ್​ಪೆಕ್ಟರ್ಸ್​, 33 ಪೊಲೀಸ್​ ಸಬ್​ ಇನ್ಸ್​ಪೆಕ್ಟರ್ಸ್​, 97 ಎಎಸ್​ಐ 414 ಹೆಡ್​ಕಾನ್ಸ್​ಟೆಬಲ್​/ಪೊಲೀಸ್​ ಕಾನ್ಸ್​ಟೆಬಲ್​ ಸೇರಿ ಒಟ್ಟಾರೆ ಗಣರಾಜ್ಯೋತ್ಸವ ದಿನಾಚರಣೆಯ ಕಾರ್ಯಕ್ರಮದ ಪ್ರಯುಕ್ತ ಒಟ್ಟು 575 ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿರುತ್ತದೆ.

    ಇದಲ್ಲದೇ ಮೈದಾನದ ಬಂದೋಬಸ್ತ್ ಕರ್ತವ್ಯಕ್ಕೆ 10-ಕೆ.ಎಸ್.ಆರ್.ಪಿ/ಸಿ.ಎ.ಆರ್. ತುಕಡಿಗಳನ್ನು, 02-ಅಗ್ನಿಶಾಮಕ ವಾಹನಗಳು, 02-ಆಂಬುಲೆನ್ಸ್ ವಾಹನಗಳು, 4-ಖಾಲಿ ವಾಹನಗಳು, 1-ಕ್ಷಿಪ್ರ ಕಾರ್ಯಾಚರಣೆ ಪಡೆ, 01 ಡಿ ಸ್ಪಾಟ್​, 1 ಆರ್​ಐವಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿರುತ್ತದೆ. ಗರುಡ ಪಡೆಯನ್ನು ಸನ್ನದ್ಧ ಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಲಾಗಿದೆ.

    ಮೈದಾನದ ಸುತ್ತ ಎಲ್ಲಾ ಘಟನೆಗಳನ್ನು ಸೂಕ್ಷ್ಮವಾಗಿ ನಿಗಾವಹಿಸಲು 100 ಸಿ.ಸಿ.ಟಿ.ವಿ ಕ್ಯಾಮರಾಗಳನ್ನು ಮತ್ತು ಮೈದಾನದಲ್ಲಿ ಆಗಮಿಸುವವರ ತಪಾಸಣೆಗೆ 3 ಬ್ಯಾಗೇಜ್ ಸ್ಕ್ಯಾನರ್, 20-ಡಿಎಫ್‌ಎಂಡಿ ಮತ್ತು 40 ಎಚ್​ಎಚ್​ಎಂಡಿಗಳನ್ನು ಅಳವಡಿಸಲಾಗಿರುತ್ತದೆ.

    ಗಣರಾಜ್ಯೋತ್ಸವದ ಆಚರಣೆ ಸಂಬಂಧ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಗೇಟ್ ನಂ.2ರಲ್ಲಿ, ಬಿಳಿ ಬಣ್ಣದ ವಿ.ಐ.ಪಿ. ವಾಸ್ ಹೊಂದಿರುವವರಿಗೆ, ಗೇಟ್ ನಂ-03 ರಲ್ಲಿ ಗೌರವಾನ್ವಿತ ರಾಜ್ಯಪಾಲರು, ಮಾನ್ಯ ಮುಖ್ಯಮಂತ್ರಿಗಳು ಹಾಗೂ ವಿಶೇಷ ಆಹ್ವಾನಿತರಿಗೆ ಮಾತ್ರ ಪ್ರವೇಶವಿದ್ದು, ಗೇಟ್ ನಂ-04 ರಲ್ಲಿ ವಿ.ವಿ.ಐ.ಪಿ ಮತ್ತು ಪಿಂಕ್ ಕಲರ್ ಪಾಸ್ ಹೊಂದಿರುವವರಿಗೆ ಪ್ರವೇಶವಿದ್ದು, ಗೇಟ್ ನಂ-05 ರಲ್ಲಿ ಹಸಿರು ಬಣ್ಣದ ಸಾರ್ವಜನಿಕ ಪಾಸ ಹೊಂದಿರುವವರಿಗೆ ಪ್ರವೇಶವಿರುತ್ತದೆ, ಕಾರ್ಯಕ್ರಮದ ಭದ್ರತಾ ದೃಷ್ಟಿಯಿಂದ ಗೇಟ್‌ಗಳ ಬಳಿ ತಪಾಸಣೆಗೆ ಒಳಪಟ್ಟು ಪೊಲೀಸರೊಂದಿಗೆ ಸಹಕರಿಸುವಂತೆ ಕೋರಲಾಗಿದೆ.

    ಕಾರ್ಯಕ್ರಮಕ್ಕೆ ಆಗಮಿಸುವವರಲ್ಲಿ ಮನವಿ
    1. ಸಮಾರಂಭಕ್ಕೆ ಆಗಮಿಸುವವರು ಬೆಳಗ್ಗೆ 08-30 ರ ಒಳಗಾಗಿ ತಮ್ಮ ಆಸನಗಳಲ್ಲಿ ಆಸೀನರಾಗತಕ್ಕದ್ದು. ಯಾವುದೇ ಕಾರಣಕ್ಕೂ ಮೈದಾನದದೊಳಗೆ ಪ್ರವೇಶಿಸತಕ್ಕದ್ದಲ್ಲ.
    2. ಸಮಾರಂಭಕ್ಕೆ ಆಗಮಿಸುವ ಸಾರ್ವಜನಿಕರು ಮಣಿಪಾಲ್ ಸೆಂಟರ್ ಕಡೆಯಿಂದ ಕಬ್ಬನ್ ರಸ್ತೆ ಮೂಲಕ ಗೇಟ್ ನಂ.05ಕ್ಕೆ ಆಗಮಿಸಲು ಸೂಚಿಸಲಾಗಿದೆ.
    3. ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬರು ತಮ್ಮೊಂದಿಗೆ ಅನಗತ್ಯವಾದ ಲಗೇಜು ಹಾಗೂ ಇತರೆ ವಸುಗಳನ್ನು ತರುವಂತಿಲ್ಲ.
    4. ಯಾವುದಾದರೂ ಅನುಮಾನಾಸ್ಪದ ವಸ್ತುಗಳು ಹಾಗೂ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಕೂಡಲೇ ಸಮವಸ್ತ್ರದಲ್ಲಿರುವ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡುವುದು
    5. ಭದ್ರತೆಯ ಅಂಗವಾಗಿ ಮೈದಾನಕ್ಕೆ ಆಗಮಿಸುವವರು ಗೇಟ್‌ಗಳ ಬಳಿ ತಪಾಸಣೆಗೆ ಪೊಲೀಸರೊಂದಿಗೆ ಸಹಕರಿಸುವಂತೆ ಕೋರಲಾಗಿದೆ ಹಾಗೂ ಈ ಕೆಳಕಂಡ ವಸ್ತುಗಳನ್ನು ಮೈದಾನದೊಳಗೆ ನಿಷೇಧಿಸಲಾಗಿದೆ.

    ಗಣರಾಜ್ಯೋತ್ಸವ ಸಂಭ್ರಮಕ್ಕೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಹೇಗಿದೆ ಸಿದ್ಧತೆ? ಇಲ್ಲಿದೆ ಸಂಪೂರ್ಣ ಮಾಹಿತಿ…

    ತಂಗಿ ಲವ್​​ ಮಾಡಿದ್ದಕ್ಕೆ ಆಕೆಯ ಜತೆ ತಾಯಿಯನ್ನು ಕೆರೆಗೆ ತಳ್ಳಿ ಕೊಂದ ಯುವಕ: ಮೈಸೂರಿನಲ್ಲಿ ದುರ್ಘಟನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts