More

  ತೈಲ ಬೆಲೆ ಏರಿಕೆ ಖಂಡಿಸಿ ಸಂಚಾರ ತಡೆ

  ಕೊಳ್ಳೇಗಾಲ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ರೈತ ಸಂಘದ ಪದಾಧಿಕಾರಿಗಳು ಪಟ್ಟಣದ ಮುಡಿಗುಂಡದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆದು ಮಂಗಳವಾರ ಪ್ರತಿಭಟನೆ ನಡೆಸಿದರು.


  ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಗೌಡೇಗೌಡ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವುದು ಖಂಡನೀಯ. ಈಗಾಗಲೇ ರಾಜ್ಯದ ಜನರು ಬರಗಾಲ ಕಂಡಿದ್ದಾರೆ. ಇದೀಗ ಮಳೆ ಬಿದ್ದು ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ. ಅಲ್ಲದೆ ಬರಗಾಲದ ಬೆಳೆ ಪರಿಹಾರವನ್ನೇ ಸಮರ್ಪಕವಾಗಿ ಸರ್ಕಾರ ರೈತರಿಗೆ ನೀಡಿಲ್ಲ. ಅಲ್ಲದೆ, ಬಿತ್ತನೆ ಬೀಜಗಳ ಬೆಲೆಯೂ ಹೆಚ್ಚಾಗಿದೆ. ಇವೆಲ್ಲದರ ನಡುವೆ ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ತೀರ್ಮಾನ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
  ರೈತರು ತಮ್ಮ ಬೆಳೆಗಳನ್ನು ಸಾಗಿಸಲು ಗೂಡ್ಸ್ ವಾಹನಗಳನ್ನೇ ಅವಲಂಬಿಸಿದ್ದಾರೆ. ಇನ್ನು ಜಮೀನಿನಲ್ಲಿ ಕೃಷಿ ಮಾಡಲು ಟ್ರ್ಯಾಕ್ಟರ್, ಟಿಲ್ಲರ್ ಬೇಕು. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಗೂಡ್ಸ್ ವಾಹನಗಳ ಬಾಡಿಕೆ ಹೆಚ್ಚಾಗುತ್ತದೆ. ಇದ್ದರಿಂದ ರೈತರಿಗೆ ಖರ್ಚು ಹೆಚ್ಚಾಗುತ್ತದೆ. ಹೀಗಾಗಿ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಹಿಂಪಡೆಯಬೇಕೆಂದು ಆಗ್ರಹಿಸಿದರು.


  ಪ್ರತಿಭಟನೆಯಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಶಿವಮಲ್ಲು, ಕಾರ್ಯದರ್ಶಿ ಪೆರಿಯಾನಾಯಗಂ, ಸದಸ್ಯ ಬಸವರಾಜು, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜಾನ್, ಮುಖಂಡರಾದ ಪಿ.ಮಹದೇವ, ರಾಮೇಗೌಡ, ನಟೇಶ್, ಮಹದೇವಪ್ಪ, ಮಸಣ್ಣಶೆಟ್ಟಿ ಮತ್ತಿತರಿದ್ದರು.

  See also  ಚಾಮುಂಡಿ ಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸಿದ ಅಧಿದೇವತೆ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts