16 C
Bangalore
Thursday, December 12, 2019

ಡಿ.29ರ ನಂತರ ಯಾವ ಟಿವಿ ಚಾನೆಲ್​ಗಳೂ ಬಂದ್​ ಆಗುವುದಿಲ್ಲ ಎಂದು ಸ್ಪಷ್ಟನೆ ಕೊಟ್ಟ ಟ್ರಾಯ್​

Latest News

ಮಣ್ಣು ಮಾಲಿನ್ಯದಿಂದ ಜೀವಸಂಕುಲಕ್ಕೆ ಸಂಕಟ

ಮಣ್ಣಿನ ಮಾಲಿನ್ಯವನ್ನು ನಿರ್ಲಕ್ಷಿಸುತ್ತಿದ್ದೇವೆ. ಲಕ್ಷಾಂತರ ವರ್ಷಗಳ ನೈಸರ್ಗಿಕ ಪ್ರಕ್ರಿಯೆಯಿಂದ ಮಣ್ಣು ರೂಪುಗೊಳ್ಳುತ್ತದೆ. ಆದರೆ, ಅದಕ್ಕೆ ಹೇಗೆ ಹಾನಿ ಮಾಡುತ್ತಿದ್ದೇವೆ ಎಂದರೆ ಮುಂದಿನ ದಿನಗಳಲ್ಲಿ ದೊಡ್ಡ ಗಂಡಾಂತರ...

ರೌಡಿ ಕಾಲಿಗೆ ಗುಂಡೇಟು

ಬೆಂಗಳೂರು: ಆರು ತಿಂಗಳ ಹಿಂದೆ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ತಲೆಮರೆಸಿಕೊಂಡು ತಿರುಗುತ್ತಿದ್ದ ಶಾರ್ಪ್​ಶೂಟರ್ ರೌಡಿಶೀಟರ್ ಕಾಲಿಗೆ ಕೆ.ಜಿ. ಹಳ್ಳಿ ಪೊಲೀಸರು...

ಸುಗಮ ಸಾರಿಗೆಗೆ ಬೇಕು 2 ಲಕ್ಷ ಕೋಟಿ ರೂಪಾಯಿ

ಬೆಂಗಳೂರು: ನಗರದ ಸಂಚಾರದಟ್ಟಣೆ ನಿವಾರಿಸುವ ಜತೆಗೆ ವಾಯುಮಾಲಿನ್ಯ ಸಮಸ್ಯೆ ಉಲ್ಬಣಿಸದಂತೆ ತಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲು 2.30 ಲಕ್ಷ ಕೋಟಿ ರೂ. ಬೇಕಿದೆ. ಮುಂದಿನ 20...

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಕಿಡಿ

ಬೆಂಗಳೂರು: ಸ್ಥಿರಾಸ್ತಿ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಲು ಖುದ್ದು ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿ ವಕೀಲರೊಬ್ಬರಿಗೆ ನೋಟಿಸ್ ನೀಡಿದ ಪ್ರಕರಣದಲ್ಲಿ ವಿಜಯನಗರ ಠಾಣೆ ಇನ್​ಸ್ಪೆಕ್ಟರ್...

ನವದೆಹಲಿ: ಹೊಸ ಕೇಬಲ್​ ನೀತಿ ಜಾರಿಯಾದರೆ ಡಿ.29ರ ನಂತರ ಟಿ.ವಿ. ಚಾನೆಲ್​ಗಳ ಲಭ್ಯತೆಯಲ್ಲಿ ಭಾರಿ ಬದಲಾವಣೆಗಳಾಗಲಿವೆ. ಹಲವು ಚಾಲನೆಗಳು ವೀಕ್ಷಣೆಗೆ ಸಿಗದೇ ಹೋಗುತ್ತವೆ ಎಂಬ ಊಹಾಪೋಹಗಳನ್ನು ಭಾರತೀಯ ಟೆಲಿಕಾಂ ನಿಯಂತ್ರಣಾ ಸಂಸ್ಥೆ ಟ್ರಾಯ್​ ಅಲ್ಲಗೆಳೆದಿದೆ.

ಗೊಂದಲಗಳ ಕುರಿತು ಇಂದು ಸರಣಿ ಟ್ವೀಟ್​ ಮಾಡಿರುವ ಟ್ರಾಯ್​, ಟಿ.ವಿ. ಸೇವೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ. ಯಾವ ವಾಹಿನಿಗಳೂ ಬಂದ್​ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಅಲ್ಲದೆ, ಹೊಸ ವ್ಯವಸ್ಥೆಗೆ ಹೊಂದಿಕೊಳ್ಳಲು ಗ್ರಾಹಕರಿಗೆ ಸೂಕ್ತ ಸಮಯ, ಪೂರಕ ಮಾಹಿತಿಯನ್ನು ಒದಗಿಸಲಾಗುತ್ತದೆ,”ಎಂದು ಹೇಳಿದೆ.

“ಡಿ.29ರ ನಂತರ ಹಲವು ಟಿ.ವಿ. ಚಾನೆಲ್​ಗಳು ಕಣ್ಮರೆಯಾಗಲಿವೆ ಎಂಬ ಕುರಿತು ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ತಾಣಗಳಲ್ಲಿ ಸುದ್ದಿಗಳು ಹರಿದಾಡುತ್ತಿವೆ. ಆದರೆ, ಹೊಸ ನೀತಿಯಿಂದಾಗಿ ಟಿ.ವಿ. ಸೇವೆಯಲ್ಲಿ ಯಾವುದೇ ಸಮಸ್ಯೆಗಳೂ ಆಗುವುದಿಲ್ಲ. ಯಾವ ಚಾನೆಲ್​ಗಳೂ ರದ್ದಾಗುವುದಿಲ್ಲ ಎಂದು ನಾವು ಸ್ಪಷ್ಟಪಡಿಸುತ್ತಿದ್ದೇವೆ,” ಎಂದು ಟ್ರಾಯ್​ ಹೇಳಿದೆ.

ಅಲ್ಲದೆ, ಅತ್ಯಂತ ಸರಳವಾಗಿ ಹೊಸ ನೀತಿಗೆ ಗ್ರಾಹಕರನ್ನು ವರ್ಗಾಯಿಸಲಾಗುತ್ತದೆ. ಗ್ರಾಹಕರು ಈ ಬಗ್ಗೆ ಯಾವುದೇ ಆತಂಕ ಪಡುವುದು ಬೇಡ. ತಮಗೆ ಬೇಕಾದ ಚಾನೆಲ್​ಗಳನ್ನು ಆಯ್ಕೆ ಮಾಡಿಕೊಳ್ಳಲು ಗ್ರಾಹಕರಿಗೆ ಸಾಕಷ್ಟು ಸಮಯ ಮತ್ತು ಮಾಹಿತಿಗಳನ್ನು ನಾವು ಒದಗಿಸಲಿದ್ದೇವೆ. ಹೆಚ್ಚಿನ ಮತ್ತು ನಿಖರ ಮಾಹಿತಿಗಾಗಿ ಟ್ರಾಯ್​ನ ವೆಬ್​ಸೈಟ್​ trai.gov.in/ ಗೆ ಭೇಟಿ ನೀಡಿ ಎಂದು ಟ್ರಾಯ್​ ಟ್ವೀಟ್​ ಮಾಡಿದೆ.

ಏನು ಹೇಳುತ್ತದೆ ಹೊಸ ನೀತಿ?

  • ಈ ಹೊಸ ನೀತಿಯ ಪ್ರಕಾರ, ಕೇಬಲ್, ಡಿಟಿಎಚ್ ಆಪರೇಟರ್‌ಗಳು ಗ್ರಾಹಕರು ಕೇಳಿದ, ಅವರು ಆಯ್ಕೆ ಮಾಡಿಕೊಂಡ ಚಾನೆಲ್‌ಗಳನ್ನು ಮಾತ್ರ ನೀಡಬೇಕು. ಅಂದರೆ, ತಾವು ವೀಕ್ಷಿಸುವ ಚಾನೆಲ್‌ಗಳಿಗೆ ಮಾತ್ರ ಗ್ರಾಹಕರು ಹಣ ಪಾವತಿ ಮಾಡಿದರೆ ಸಾಕು.
  • ಡಿಡಿ (ದೂರದರ್ಶನದ) 26 ಚಾನೆಲ್‌ಗಳು ಸೇರಿದಂತೆ 100 ಚಾನೆಲ್‌ಗಳು ವೀಕ್ಷಣೆಗೆ ಲಭ್ಯವಾಗಲಿವೆ. ಉಚಿತವಾಗಿರುವ 74 ಚಾನೆಲ್‌ಗಳನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶವೂ ಇದೆ. ಇದಕ್ಕೆ ಶುಲ್ಕ 130ರೂ. ಮಾತ್ರ. ಜತೆಗೆ ಶೇ 18ರಷ್ಟು ಜಿಎಸ್‌ಟಿ ಪಾವತಿಸಬೇಕು. ಒಟ್ಟಾರೆ 154 ರೂ.ಗೆ 100 ಚಾನೆಲ್‌ಗಳು ವೀಕ್ಷಣೆಗೆ ಲಭ್ಯವಾಗಲಿವೆ.
  • ನೂರು ಚಾನೆಲ್​ಗಳ ನಂತರವೂ ಉಚಿತವಾಗಿ ಲಭ್ಯವಿರುವ ಚಾನೆಲ್‌ಗಳನ್ನೂ ವೀಕ್ಷಿಸಬಹುದು. ಆದರೆ ಪ್ರತಿ 25 ಉಚಿತ ಚಾನೆಲ್‌ಗಳಿಗೆ ಜಿಎಸ್‌ಟಿ ಸೇರಿ ಒಟ್ಟು 25ರೂ. ಪಾವತಿಸಬೇಕಾಗುತ್ತದೆ.
  • ಹೆಚ್ಚಿನ ಚಾನೆಲ್​ಗಳು ವೀಕ್ಷಣೆಗೆ ಲಭ್ಯವಾಗುವುದಿಲ್ಲ ಎಂದು ಚಿಂತೆ ಪಡಬೇಕಿಲ್ಲ. ಈಗಾಗಲೇ ಪ್ರತಿಯೊಂದು ಚಾನೆಲ್‌ಗೂ ದರ ನಿಗದಿಯಾಗಿದೆ. ಈ ದರವು ಕನಿಷ್ಠ 1 ಪೈಸೆಯಿಂದ ಗರಿಷ್ಠ 19ರೂ. ಇರಬೇಕು ಎಂದೂ ಟ್ರಾಯ್ ಹೇಳಿದೆ.

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...