More

    ಸದ್ಯದಲ್ಲೇ ಆಲೂರಿನಲ್ಲಿ ರೈಲು ನಿಲುಗಡೆ

    ಆಲೂರು: ಇಲ್ಲಿನ ನಿಲ್ದಾಣದಲ್ಲಿ ರೈಲು ನಿಲುಗಡೆಗೆ ಅವಕಾಶ ಕಲ್ಪಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ರೈಲು ನಿಲುಗಡೆ ಕುರಿತು ಇಲಾಖೆ ಅಧಿಕಾರಿಗಳ ಜತೆಗೆ ಈಗಾಗಲೇ ಚರ್ಚಿಸಲಾಗಿದ್ದು, ಸದ್ಯದಲ್ಲೇ ಈ ಭಾಗದ ಜನರಿಗೆ ಅನುಕೂಲವಾಗಲಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದರು.

    ಪಟ್ಟಣದ ಹಂತನ ಮನೆ ಗ್ರಾಮದಲ್ಲಿರುವ ರೈಲು ನಿಲ್ದಾಣಕ್ಕೆ ಪಕ್ಷದ ಮುಖಂಡಗಳೊಂದಿಗೆ ಇತ್ತೀಚೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು. ನರೇಂದ್ರ ಮೋದಿ ಸರ್ಕಾರ ಗ್ರಾಮೀಣ ಭಾಗಗಳ ರೈಲು ನಿಲ್ದಾಣಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದೆ. ಈ ಹಿನ್ನೆಲೆಯಲ್ಲಿ ಆಲೂರು ಪಟ್ಟಣದಲ್ಲಿರುವ ನಿಲ್ದಾಣದಲ್ಲೂ ರೈಲು ನಿಲುಗಡೆ ಸಂಬಂಧಿಸಿದಂತೆ ಅಧಿಕಾರಿಗಳ ಜತೆಗೆ ಚರ್ಚಿಸಲಾಗಿದೆ. ತಾಂತ್ರಿಕ ತೊಂದರೆ ಮುಗಿದ ನಂತರ ರೈಲು ನಿಲುಗಡೆಗೆ ಅವಕಾಶ ಸಿಗಲಿದೆ ಎಂದರು.

    ಇದೇ ಸಂದರ್ಭದಲ್ಲಿ ಹಾಸನ-ಯಶವಂತಪುರಕ್ಕೆ ಓಡಾಡುವ ರೈಲನ್ನು ಸಕಲೇಶಪುರದವರೆಗೆ ವಿಸ್ತರಿಸುವಂತೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಸ್ಥಳೀಯರು ಸಂಸದರನ್ನು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಈ ಬಗ್ಗೆ ಹಲವು ಮನವಿ ಪತ್ರಗಳು ಬಂದಿವೆ. ಮೊದಲು ಬೆಂಗಳೂರು-ಮಂಗಳೂರು ರೈಲು ನಿಲುಗಡೆಯಾಗಲಿ, ನಂತರದ ದಿನಗಳಲ್ಲಿ ಈ ಮಾರ್ಗದಲ್ಲಿ ಸಂಚರಿಸುವ ಎಲ್ಲ ರೈಲುಗಳ ನಿಲುಗಡೆಗೆ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.

    ಈ ಸಂದರ್ಭದಲ್ಲಿ ತಾಲೂಕು ಜೆಡಿಎಸ್ ಅಧ್ಯಕ್ಷ ಕೆ.ಎಸ್.ಮಂಜೇಗೌಡ, ತಾಪಂ ಮಾಜಿ ಸದಸ್ಯ ನಟರಾಜ್ ನಾಕಲಗೂಡು, ಸಿ.ವಿ.ಲಿಂಗರಾಜು, ರಾಜಪ್ಪ ಕದಾಳು, ಹುಣಸವಳ್ಳಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಜೈಪಾಲ್, ಪಟ್ಟಣ ಪಂಚಾಯಿತಿ ಸದಸ್ಯ ತೌಫಿಕ್ ಅಹಮದ್, ಜೆಡಿಎಸ್ ಮುಖಂಡ ಮಲ್ಲಿಕಾರ್ಜುನ, ಕಾರ್ಯಕರ್ತರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts