ಮಹಿಳಾ ಸಬಲೀಕರಣದಿಂದ ದೇಶದ ಸುಭದ್ರತೆ

UDP-13-9-Training
ಉಡುಪಿ ಪರಂಪಳ್ಳಿಯ ಬಿವಿಟಿಯಲ್ಲಿ ಆಯೋಜಿಸಿದ್ದ ಕೌಶಲಾಭಿವೃದ್ಧಿ ತರಬೇತಿ ಶಿಬಿರವನ್ನು ಸಿ.ಜಗದೀಶ ಪೈ ಉದ್ಘಾಟಿಸಿದರು. ವೀಣಾ ವಿವೇಕಾನಂದ, ಮೀರಾ ಜೆ. ಅಮೂಲ್ಯ, ಅನುರಾಧಾ ಬಿ. ಇದ್ದರು.
Published on

ಸಿ.ಜಗದೀಶ ಪೈ ಅನಿಸಿಕೆ | ಕೌಶಲಾಭಿವೃದ್ಧಿ ತರಬೇತಿ ಶಿಬಿರ ಉದ್ಘಾಟನೆ

ಉಡುಪಿ: ದೇಶದ ಸುಭದ್ರತೆಯಲ್ಲಿ ಮಹಿಳಾ ಸಬಲೀಕರಣ ಮಹತ್ತರ ಪಾತ್ರ ವಹಿಸುತ್ತದೆ. ಸ್ತ್ರೀ ಶಕ್ತಿ ದೇಶದ ಶಕ್ತಿಯಾಗಿದ್ದು, ಸದಸ್ಯರಿಗೆ ಕಾಲಕಾಲಕ್ಕೆ ಕೌಶಲ ತರಬೇತಿ ನೀಡುವುದರಿಂದ ಇನ್ನಷ್ಟು ಕ್ರಿಯಾಶೀಲರಾಗಿ ಗುಂಪು ಚಟುವಟಿಕೆಯಲ್ಲಿ ಪಾಲ್ಗೊಳ್ಳಲು ಸಹಕಾರಿಯಾಗುತ್ತದೆ ಎಂದು ಬಿವಿಟಿ ಸಲಹೆಗಾರ ಸಿ.ಜಗದೀಶ ಪೈ ಹೇಳಿದರು.

ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಹಾಗೂ ಭಾರತೀಯ ವಿಕಾಸ ಟ್ರಸ್ಟ್​ ಪೆರಂಪಳ್ಳಿ ಆಶ್ರಯದಲ್ಲಿ ಬಿವಿಟಿಯಲ್ಲಿ ಬುಧವಾರ ಆಯೋಜಿಸಿದ್ದ ಸ್ತ್ರೀಶಕ್ತಿ ಗುಂಪಿನ ಮಹಿಳೆಯರಿಗೆ ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತಾ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ತರಬೇತಿಯಿಂದ ಜ್ಞಾನ ಹೆಚ್ಚಳ

ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ವೀಣಾ ವಿವೇಕಾನಂದ ಮಾತನಾಡಿ, ತರಬೇತಿಯಿಂದ ಜ್ಞಾನ ಮತ್ತು ಕೌಶಲ ಹೆಚ್ಚಿಸಿಕೊಳ್ಳಲು ಸಹಕಾರಿಯಾಗುತ್ತದೆ. ಮಹಿಳೆಯರು ಮನೆ, ಮಕ್ಕಳ ಜವಾಬ್ದಾರಿಯೊಂದಿಗೆ ಸಮಾಜದ ಅಭಿವೃದ್ಧಿಯಲ್ಲೂ ಮಹತ್ವದ ಪಾತ್ರ ವಹಿಸುತ್ತಾರೆ ಎಂದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಸಾಕ್ಷರತಾ ಸಂಸ್ಥೆಯ ಮೀರಾ ಜೆ. ಅಮೂಲ್ಯ, ಶಿಶು ಅಭಿವೃದ್ಧಿ ಯೋಜನೆಗಳ ಮೇಲ್ವಿಚಾರಕಿಯರು, ಸ್ತ್ರೀಶಕ್ತಿ ಗುಂಪುಗಳ ಸದಸ್ಯರು ಉಪಸ್ಥಿತರಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಅನುರಾಧಾ ಬಿ. ಹಾದಿಮನಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಪೂರ್ಣಿಮಾ ವಂದಿಸಿದರು. ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಜೆಂಟರ್​ ಸ್ಪೆಷಲಿಸ್ಟ್​ ದೀಪಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net