ಉಡುಪಿಯಲ್ಲಿ 1700 ಫಲಾನುಭವಿಗಳಿಗೆ ತರಬೇತಿ

byn
Published on

ಬೈಂದೂರು: ಉಡುಪಿ ಜಿಲ್ಲೆಯಲ್ಲಿ ಪಿಎಂ ವಿಶ್ವಕರ್ಮ ಯೋಜನೆಯಡಿ 1700 ಫಲಾನುಭವಿಗಳಿಗೆ ಈಗಾಗಲೇ ತರಬೇತಿ ನೀಡಲಾಗಿದ್ದು, ಸ್ವಂತ ಉದ್ಯಮ ನಡೆಸಲು ಅನುಕೂಲವಾಗುವಂತೆ ಒಂದು ಲಕ್ಷ ರೂ. ಸಾಲ ಸೌಲಭ್ಯ ನೀಡಲಾಗಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ.ರಾವೇಂದ್ರ ಹೇಳಿದರು. ಬೈಂದೂರು ಪ್ರವಾಸಿ ಮಂದಿರದಲ್ಲಿ ಪಿಎಂ ವಿಶ್ವಕರ್ಮ ಯೋಜನೆ ಫಲಾನುಭವಿಗಳಿಗೆ ಕಿಟ್ ವಿತರಿಸಿ ವಾತನಾಡಿದರು. ಶಾಸಕ ಗುರುರಾಜ ಗಂಟಿಹೊಳೆ, ಕ್ಷೇತ್ರ ಬಿಜೆಪಿ ಅಧ್ಯಕ್ಷೆ ಅನಿತಾ ಆರ್.ಕೆ., ಪ್ರಧಾನ ಕಾರ್ಯದರ್ಶಿ ಕರಣ್ ಪೂಜಾರಿ, ಗೋಪಾಲ ಪೂಜಾರಿ, ಕ್ಷೇತ್ರ ಬಿಜೆಪಿ ವಾಜಿ ಅಧ್ಯಕ್ಷ ನೆಲ್ಯಾಡಿ ದೀಪಕ್‌ಕುವಾರ್ ಶೆಟ್ಟಿ, ಜಿಪಂ ವಾಜಿ ಸದಸ್ಯ ಸುರೇಶ ಬಟ್ವಾಡಿ, ಪ್ರಿಯದರ್ಶಿನಿ ಬೆಸ್ಕೂರ್ ಹಾಗೂ ದಿಶಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೋಗಲಾಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಪಿಎಂ ವಿಶ್ವಕರ್ಮ ಯೋಜನೆ ಜಾರಿಗೊಳಿಸಿ ಸ್ವಉದ್ಯೋಗಕ್ಕೆ ಉತ್ತೇಜನ ನೀಡುತ್ತಿದೆ. ಕೆಲವೊಂದು ತಾಂತ್ರಿಕ ಕಾರಣಗಳಿಂದಾಗಿ ನಿರೀಕ್ಷಿತ ಮಟ್ಟದಲ್ಲಿ ಜನರಿಗೆ ಈ ಯೋಜನೆಯ ಲಾಭ ದೊರಕಿಲ್ಲ. ಈಗಾಗಲೇ ಅದನ್ನು ಸರಿಪಡಿಸುವ ಕಾರ್ಯ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಜನರಿಗೆ ಈ ಯೋಜನೆ ದೊರಕಲಿದೆ. -ಬಿ.ವೈ.ರಾವೇಂದ್ರ, ಶಿವಮೊಗ್ಗ ಸಂಸದ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net