

ಗಂಗೊಳ್ಳಿ: ಕ್ರೀಡೆಯಲ್ಲಿ ಭಾಗವಹಿಸಲು ನಿರಂತರವಾದ ಅಭ್ಯಾಸ, ತರಬೇತಿ ಅವಶ್ಯ. ಪಾಠದ ಜತೆಗೆ ಪಾಠೇತರ ಚಟುವಟಿಕೆಗಳಲ್ಲಿ ಭಾಗವಹಿಸುವಂತಾಗಬೇಕು. ಎಂದು ಬೈಂದೂರು ವಲಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಹೇಳಿದರು.
ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಪ್ರಾಯೋಜಿತ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು, ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾಕೂಟ ಸೋಮವಾರ ಉದ್ಘಾಟಿಸಿ ಮಾತನಾಡಿದರು.
ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ಕವಿತಾ ಎಂ.ಸಿ. ಅಧ್ಯಕ್ಷತೆ ವಹಿಸಿದ್ದರು. ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಸದಸ್ಯ ಕೆ.ರಾಮನಾಥ ನಾಯಕ್ ಶುಭಾಶಂಸನೆಗೈದರು. ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ಪ್ರಾರ್ಥನಾ ಪೈ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾಲೇಜಿನ ಪ್ರೌಢಶಾಲಾ ವಿಭಾಗ ಉಪಪ್ರಾಂಶುಪಾಲ ಗೋಪಾಲ ದೇವಾಡಿಗ, ದೈಹಿಕ ಶಿಕ್ಷಣ ಶಿಕ್ಷಕರಾದ ದೀಕ್ಷಿತ್ ಮೇಸ್ತ, ಸೂರಜ್ ಸಾರಂಗ್, ಲಾವಣ್ಯ, ಸರಸ್ವತಿ ವಿದ್ಯಾಸಂಸ್ಥೆ ಉಪನ್ಯಾಸಕರು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಉಪನ್ಯಾಸಕ ನಾರಾಯಣ ಇ.ನಾಯ್ಕ ಸ್ವಾಗತಿಸಿದರು. ಸುಜಯೀಂದ್ರ ಹಂದೆ ಕಾರ್ಯಕ್ರಮ ನಿರೂಪಿಸಿದರು. ಆಂಗ್ಲ ಮಾಧ್ಯಮ ಶಾಲೆ ಮುಖ್ಯ ಶಿಕ್ಷಕ ರಾಘವೇಂದ್ರ ಶೇರುಗಾರ್ ವಂದಿಸಿದರು.