More

    ದೇಶದ ಶಕ್ತಿಯಾದ ಯುವ ಸಮೂಹ: ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕ ಗಂಗಯ್ಯ ಅಭಿಮತ

    ಮಂಡ್ಯ: ಯುವಸಮೂಹ ದೇಶ ಮತ್ತು ಸಮಾಜದ ಶಕ್ತಿಯಾಗಿ ದೇಶ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕ ಗಂಗಯ್ಯ ಅಭಿಪ್ರಾಯಪಟ್ಟರು.
    ನಗರದ ವೆಬ್‌ಸೆಟಿಯಲ್ಲಿ ನೆಹರು ಯುವ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬ್ಯಾಂಕ್ ಆಫ್ ಬರೋಡ ಸ್ವ- ಉದ್ಯೋಗ ತರಬೇತಿ ಸಂಸ್ಥೆ, ವಾರ್ತಾ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ ಪದವಿ ಘಟಕ, ಮಹಿಳಾ ಸರ್ಕಾರಿ ಕಾಲೇಜು(ಸ್ವಾಯತ್ತ) ಸಹಯೋಗದಲ್ಲಿ ಆಯೋಜಿಸಿದ್ದ ‘ಯುವ ಮುಂದಾಳತ್ವ ಹಾಗೂ ಸಮುದಾಯ ಅಭಿವೃದ್ಧಿ ತರಬೇತಿ’ ಶಿಬಿರ ಉದ್ಘಾಟಿಸಿ ಮಾತನಾಡಿದರು.
    ಯುವ ಶಕ್ತಿಯಿಂದಲೇ ದೇಶದ ಪ್ರಗತಿ ಸಾಧ್ಯ. ಐಟಿ-ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೃಷಿ, ಕೈಗಾರಿಕಾ, ಕ್ರೀಡೆ ಸೇರಿದಂತೆ ಎಲ್ಲ ಕ್ಷೇತ್ರದಲ್ಲೂ ಸಹ ಯುವಸಮೂಹದ ಪಾತ್ರ ಬಹಳ ಪ್ರಮುಖವಾಗಿದೆ. ಇತಿಹಾಸದ ಮಹಾ ಪುರುಷರು ಸಮಾಜಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಇಂದಿನ ಯುವ ಶಕ್ತಿ ಇದನ್ನು ಅರಿತು ಅವರ ತತ್ವ ಆದರ್ಶಗಳನ್ನು ಜೀವನದಲ್ಲಿ ರೂಢಿಸಿಕೊಳ್ಳಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಭಿವೃದ್ಧಿ ಜತೆಗೆ ವಿವಿಧ ಸಮಸ್ಯೆಗಳು ಇದೆ. ಅದನ್ನು ಬಗೆಹರಿಸುವ ಹಾದಿಯಲ್ಲಿ ಯುವ ಶಕ್ತಿಯ ಮನಸ್ಥಿತಿ ಬದಲಾಗಬೇಕಿದೆ. ಶಿಕ್ಷಣ, ಸಂಘಟನೆ, ಹೋರಾಟ ಇದ್ದಾಗ ಮಾತ್ರ ಪ್ರಜಾಪ್ರಭುತ್ವ ಬಲಗೊಳ್ಳಲು ಸಾಧ್ಯ ಎಂದರು.
    ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಓಂ ಪ್ರಕಾಶ್ ಮಾತನಾಡಿ, ಯುವಕರು ಸಾಧನೆಗೆ ದೊಡ್ಡ ಗುರಿ ನಿಗದಿ ಮಾಡಿಕೊಳ್ಳಬೇಕು. ದುಶ್ಚಟಗಳಿಂದ ದೂರವಿರಿ, ಜೀವನವನ್ನು ಉತ್ತಮಗೊಳಿಸುವ ಹವ್ಯಾಸವನ್ನು ರೂಢಿಸಿಕೊಳ್ಳಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಭಿವೃದ್ಧಿಯಾಗಬೇಕಾದರೆ ವಿಶೇಷವಾಗಿ ಯುವ ಪೀಳಿಗೆ ಶಕ್ತಿಯಾಗಿ ನಿಲ್ಲಬೇಕಿದೆ. ಸಮಾಜ ನಮಗೆ ಏನು ಕೊಟ್ಟಿದೆ ಅನ್ನುವುದಕ್ಕಿಂತ ನಾವು ಸಮಾಜಕ್ಕೆ ಏನು ಕೊಡಬೇಕು ಎನ್ನುವ ನಿಟ್ಟಿನಲ್ಲಿ ಯೋಚಿಸಬೇಕಿದೆ ಎಂದರು.
    ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತೆ ಬಿ.ಎಸ್.ಅನುಪಮಾ, ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಎನ್.ಆರ್.ವೇಣುಗೋಪಾಲ್, ಕಾವೇರಿ ನೀರಾವರಿ ನಿಗಮದ ಕಿರಿಯ ಇಂಜಿನಿಯರ್ ಜಿ.ಎನ್.ಕೆಂಪರಾಜು, ವಿಕಸನ ಸಂಸ್ಥೆಯ ನಿರ್ದೇಶಕ ಮಹೇಶ್‌ಚಂದ್ರಗುರು, ವಿಶ್ರಾಂತ ಜಿಲ್ಲಾ ಸಮನ್ವಯಾಧಿಕಾರಿ ಬಿ.ಗೋವಿಂದ ಭಟ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts