More

    ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ

    ಸೋಮವಾರಪೇಟೆ: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸ್ವೀಪ್ ಸಮಿತಿ ವತಿಯಿಂದ ತಾಲೂಕಿನ ಮತಗಟ್ಟೆ ಅಧಿಕಾರಿಗಳಿಗೆ ಬುಧವಾರ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ತರಬೇತಿ ಹಮ್ಮಿಕೊಳ್ಳಲಾಗಿತ್ತು.

    ಪ್ರಾಸ್ತಾವಿಕವಾಗಿ ಮಾತನಾಡಿದ ತಹಸೀಲ್ದಾರ್ ನವೀನ್‌ಕುಮಾರ್, ಎಲ್ಲ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಿದರೆ ಮಾತ್ರ ಚುನಾವಣೆ ಸುಸೂತ್ರವಾಗಿ ನಡೆಯುತ್ತದೆ. ಎಲ್ಲ ಮತಗಟ್ಟೆ ಕೇಂದ್ರಗಳು ಶುಚಿತ್ವಕ್ಕೆ ಆದ್ಯತೆ ನೀಡುವುದರೊಂದಿಗೆ ಮೂಲ ಅವಶ್ಯಕತೆಗಳಾದ ಕುಡಿಯುವ ನೀರು, ವಿದ್ಯುತ್, ಶೌಚಗೃಹ ವ್ಯವಸ್ಥೆಯನ್ನು ಸಮರ್ಪಕವಾಗಿ ಇರುವಂತೆ ನೋಡಿಕೊಳ್ಳಬೇಕು. ಕಳೆದ ಬಾರಿ ಕಡಿಮೆ ಮತದಾನ ಆಗಿರುವ ಮತಗಟ್ಟೆಗಳನ್ನು ಗುರುತಿಸಿ ಮತದಾನ ಹೆಚ್ಚಳಕ್ಕೆ ಮುಂದಾಗಬೇಕು ಎಂದು ಹೇಳಿದರು.

    ಸ್ವೀಪ್ ಸಮಿತಿ ಅಧ್ಯಕ್ಷ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಮಾತನಾಡಿ, ಏ.5 ರಂದು ಸೋಮವಾರಪೇಟೆ ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿದೆ. 13ರಂದು ಸೋಮವಾರಪೇಟೆಯಲ್ಲಿ ಕಾಲ್ನಡಿಗೆ ಜಾಥಾ ನಡೆಯಲಿದೆ. 19ರಂದು ಸೈಕಲ್ ಮತ್ತು ಬೈಕ್ ರ‌್ಯಾಲಿ ನಡೆಯಲಿದೆ. ಅಂಗವಿಕಲರಿಗೆ ಆದ್ಯತೆ ನೀಡುವ ಉದ್ದೇಶದಿಂದ ಏ.24ರಂದು ಮಡಿಕೇರಿಯಲ್ಲಿ ಜಿಲ್ಲಾಮಟ್ಟದ ತ್ರಿಚಕ್ರ ರ‌್ಯಾಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು.

    ಪಾಲಕರಿಗೆ ಪತ್ರ: ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಜಿಲ್ಲೆಯ ವಸತಿ ಶಾಲೆಗಳ ವಿದ್ಯಾರ್ಥಿಗಳು ತಮ್ಮ ಪಾಲಕರಿಗೆ ಮತದಾನದಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಲು ಪತ್ರವನ್ನು ಬರೆಯುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದರು.

    ಮತದಾನದ ಮಹತ್ವ ಕುರಿತು ಮತ್ತು ಮತದಾನದ ಹೆಚ್ಚಳಕ್ಕೆ ಪ್ರತಿಯೊಬ್ಬರೂ ಶ್ರಮಿಸಬೇಕೆಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕ್ಯಾನಾಯ್ಕಾ ಹೇಳಿದರು. ವೇದಿಕೆಯಲ್ಲಿ ಅಕ್ಷರ ದಾಸೋಹ ವಿಭಾಗದ ಸಹಾಯಕ ನಿರ್ದೇಶಕ ಕಾಳನಾಯಕ್, ಮತಗಟ್ಟೆ ತರಬೇತಿ ಅಧಿಕಾರಿಗಳಾದ ಕಿರಣ್, ಜಯಕುಮಾರ್, ಪೂವಯ್ಯ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts