More

    ಪೋಲಿಂಗ್ ಅಧಿಕಾರಿಗಳಿಗೆ ಪ್ರಾತ್ಯಕ್ಷಿಕೆ ಮೂಲಕ ತರಬೇತಿ

    ಬೇಲೂರು: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ನಿರ್ದೇಶನದಂತೆ 85 ವರ್ಷ ಮೇಲ್ಪಟ್ಟ ಹಿರಿಯ ಮತ್ತು ಅಂಗವಿಕಲ ಮತದಾರರಿಗೆ ಮನೆಯಲ್ಲೇ ಮತದಾನಕ್ಕೆ ಅವಕಾಶ ಕಲ್ಪಿಸಿರುವುದರಿಂದ ಪೋಲಿಂಗ್ ಅಧಿಕಾರಿಗಳಿಗೆ ಸಹಾಯಕ ಚುನಾವಣಾಧಿಕಾರಿ ಎಂ.ಎನ್.ಮಂಜುನಾಥ್ ಹಾಗೂ ತಹಸೀಲ್ದಾರ್ ಎಂ.ಮಮತಾ ಪ್ರಾತ್ಯಕ್ಷಿಕೆ ಮೂಲಕ ಸೋಮವಾರ ಮಾಹಿತಿ ನೀಡಿದರು.

    ಬೇಲೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 85 ವರ್ಷ ಮೇಲ್ಪಟ್ಟ ಹಾಗೂ ಅಂಗವಿಕಲ 629 ಜನ ಮತದಾರರನ್ನು ಗುರುತಿಸಿದ್ದು, ಚುನಾವಣೆ ಅಧಿಕಾರಿಗಳು ಅವರ ಮನೆಗಳಿಗೆ ತೆರಳಿ ಮತದಾನ ಮಾಡಲು ಕ್ರಮ ಕೈಗೊಳ್ಳಬೇಕೆಂದು ಮಂಜುನಾಥ್ ತಿಳಿಸಿದರು.

    ತಹಸೀಲ್ದಾರ್ ಎಂ.ಮಮತಾ ಮಾತನಾಡಿ, 85 ವರ್ಷ ಮೇಲ್ಪಟ್ಟ ವೃದ್ಧರು, ಅಂಗವಿಕಲರು ಮತಗಟ್ಟೆಗೆ ಬರಲು ಆಗದಿರುವ ಹಿನ್ನೆಲೆಯಲ್ಲಿ ಅವರ ಮನೆಗಳಿಗೆೆ ತೆರಳಿ ಮತಚಲಾವಣೆ ಮಾಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈಗಾಗಲೇ ಶೇಕಡ 90ರಷ್ಟು ಮತದಾನವಾಗಿದೆ. ದಾಖಲಾದ ಮತಗಳನ್ನು ಮತಪೆಟ್ಟಿಗೆಯಲ್ಲಿ ಇರಿಸಲಾಗಿದೆ. ಪೋಲಿಂಗ್ ಅಧಿಕಾರಿಗಳು ಸಾಕಷ್ಟು ಶ್ರಮವಹಿಸಿ ಗುಡ್ಡಗಾಡು ಪ್ರದೇಶ ಹಾಗೂ ಕಾಫಿ ಎಸ್ಟೇಟ್, ಗ್ರಾಮೀಣ ಪ್ರದೇಶದಲ್ಲಿ ಅರ್ಹ ಮತದಾರರನ್ನು ಗುರುತಿಸಿ ಮತ ಹಾಕಿಸುವಲ್ಲಿ ಸಫಲರಾಗಿದ್ದಾರೆ. ಮತದಾನ ಪ್ರಕ್ರಿಯೆ ಸಂದರ್ಭ ಪಿಆರ್‌ಒ, ಪಿಒ, ಸೆಕ್ಟರ್ ಅಧಿಕಾರಿಗಳು, ಸೂಕ್ಷ್ಮ ವೀಕ್ಷಕರು, ವಿಡಿಯೋಗ್ರಾಫರ್ ಮತ್ತು ಪೊಲೀಸ್ ಸಿಬ್ಬಂದಿ ಇರಲಿದ್ದು, 15 ಟೀಂ ಮಾಡಿದ್ದೇವೆ ಎಂದು ವಿವರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts