More

    ನಮ್ಮದೆಂಬ ಭಾವನೆ ತಾಳಿದರೆ ಪ್ರಗತಿ ಸಾಧ್ಯ

    ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
    ಗ್ರಾಮ ಪಂಚಾಯಿತಿ ನಮ್ಮದೆಂಬ ಭಾವನೆಯಿಂದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಒಗ್ಗೂಡಿ ಶ್ರಮಿಸಿದರೆ ಗ್ರಾಪಂಗಳ ಪ್ರಗತಿ ಸಾಧ್ಯವಾಗಲಿದೆ ಎಂದು ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
    ಜಿಲ್ಲಾ ಪಂಚಾಯಿತಿಯಿಂದ ದೊಡ್ಡಬಳ್ಳಾಪುರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಗ್ರಾಪಂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮಾನತೆ ಸಿಗುವಂತಾಗಬೇಕು. ಇದಕ್ಕೆ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು ಎಂದರು.
    ಜನಪ್ರತಿನಿಧಿಗಳ ಪಾತ್ರ ಮುಖ್ಯ: ಮೂಲ ಸೌಕರ್ಯಗಳೊಂದಿಗೆ ಗ್ರಾಮಗಳು ಅಭಿವೃದ್ಧಿಯಾಗಲು ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ ಪಾತ್ರ ಪ್ರಮುಖ. ಮಹಾತ್ಮ ಗಾಂಧಿ ಗ್ರಾಮಸ್ವರಾಜ್ಯ ಘೋಷಿಸಿದರು. ಆಹಾರ, ಉಡುಪುಗಳನ್ನು ಸ್ವತಃ ತಾವೇ ತಯಾರಿಸಿ ಸ್ವಾವಲಂಬಿಗಳಾಗಿ ಬದುಕಬೇಕು ಎಂದರು. ಪಂಡಿತ್ ಜವಾಹರ್‌ಲಾಲ್ ನೆಹರು, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಂಥ ಮಹಾನ್ ಚೇತನರು ಅನೇಕ ಹೋರಾಟಗಳನ್ನು ನಡೆಸಿದ್ದಾರೆ. ಎಷ್ಟೋ ಹೋರಾಟಗಾರರು ಪ್ರಾಣ ಬಲಿದಾನ ನೀಡಿ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ ಇವೆಲ್ಲರ ಮಾರ್ಗದರ್ಶನ ತತ್ಪಾದರ್ಶಗಳನ್ನು ಪಾಲಿಸಬೇಕು ಎಂದು ಸಚಿವರು ಹೇಳಿದರು.
    ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ: ಸ್ವಾತಂತ್ರ್ಯ ಎಂದರೆ ಯಾರ ಮೇಲೂ ಅವಲಂಬನೆಯಾಗದೆ ಬದುಕುವುದು ಎಂದರ್ಥ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾನತೆ ಸಿಗಬೇಕು. ಆಗಲೇ ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ ಬರುತ್ತದೆ ಎಂದ ಸಚಿವರು, ಗ್ರಾಮಗಳಲ್ಲಿನ ಕೆರೆಗಳ ಅಭಿವೃದ್ಧಿಗೆ ಶ್ರಮಿಸಬೇಕು. ನರೇಗಾ ಕೆಲಸಗಳು ಪ್ರಾಮಾಣಿಕವಾಗಿ ಆಗಬೇಕು. ಗ್ರಾಪಂ ಅಧ್ಯಕ್ಷರು, ಸದಸ್ಯರು ಹೇಳಿದ್ದನ್ನು ಅಧಿಕಾರಿಗಳು ಎಚ್ಚರಿಕೆಯಿಂದ ಕೇಳಿ ಪಾಲಿಸಬೇಕು ಎಂದ ಅವರು, ಪಂಚಾಯಿತಿಗಳಿಗೆ ಖುದ್ದು ಭೇಟಿ ನೀಡಿ ಅಭಿವೃದ್ಧಿ ಪರಿಶೀಲನೆ ಮಾಡುತ್ತೇನೆ. ಲೋಪದೋಷ ಕಂಡು ಬಂದರೆ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts