More

    ಶಿಕ್ಷಕರ ವರ್ಗಾವಣೆಗೆ ಕೌನ್ಸಲಿಂಗ್ ವೇಳಾಪಟ್ಟಿ ಪ್ರಕಟ

    ಗದಗ: 2022-23ನೇ ಸಾಲಿನ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡAತೆ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢಶಾಲಾ ಶಿಕ್ಷಕರು/ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದದ ಶಿಕ್ಷಕರು/ಅಧಿಕಾರಿಗಳ ಅಂತರ ವಿಭಾಗ ಮಟ್ಟದ ಕೋರಿಕೆ/ಪರಸ್ಪರ ವರ್ಗಾವಣೆಯನ್ನು ಜುಲೈ 26 ರಿಂದ ಅಗಸ್ಟ 11 ರವರೆಗೆ ಬೆಳಿಗ್ಗೆ 9 ಗಂಟೆಯಿAದ ಆಧ್ಯತಾ ಪಟ್ಟಿಯಲ್ಲಿರುವ ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿರುವ ಆಯಾ ಜಿಲ್ಲಾ ಉಪನಿರ್ದೇಶಕರು (ಆಡಳಿತ) ಶಾಲಾ ಶಿಕ್ಷಣ ಇಲಾಖೆಯಲ್ಲಿ ನಡೆಯಲಿದೆ. ವರ್ಗಾವಣೆ ಕೌನ್ಸಲಿಂಗ್ ವೇಳಾಪಟ್ಟಿ  ಇಂತಿದೆ:

    ಜುಲೈ 26 ರಂದು ಪ್ರೌಢಶಾಲಾ ಮುಖ್ಯೋಪಾಧ್ಯಾಯರ ವೃಂದದ ಅಂತರ ವಿಭಾಗ ಕೋರಿಕೆ ವರ್ಗಾವಣೆ,  ಪ್ರೌಢಶಾಲಾ ಶಿಕ್ಷಕರ ವೃಂದ ಕೋರಿಕೆ ವರ್ಗಾವಣೆ  ಜುಲೈ 27 ರಿಂದ 31 ರವರೆಗೆ,  ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದ ಕೋರಿಕೆ ವರ್ಗಾವಣೆ ಜುಲೈ 31 ರಿಂದ ಅಗಸ್ಟ 10 ರವರೆಗೆ, ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವೃಂದ-ಪರಸ್ಪರ ವರ್ಗಾವಣೆ ಅಗಸ್ಟ 11 ರಂದು ಜರುಗಲಿವೆ. ಹೆಚ್ಚಿನ ಮಾಹಿತಿಗಾಗಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ, ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ 111, ಗದಗ ಇಲ್ಲಿ ಸಂಪಕಿಸಬಹುದಾಗಿದೆ.  

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts