More

    ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆ: ವೇಳಾಪಟ್ಟಿ ಪರಿಷ್ಕರಣೆ

    ಬೆಂಗಳೂರು ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು, ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪರಿಷ್ಕರಿಸಿ ಆದೇಶ ಹೊರಡಿಸಿದೆ.

    ವಲಯ ವರ್ಗಾವಣೆಗೆ ಅರ್ಹರಿರುವ ಶಿಕ್ಷಕರ ತಾತ್ಕಾಲಿಕ ಪಟ್ಟಿ ಬಿಡುಗಡೆಯಾಗಿತ್ತು. ಆದರೆ ವರ್ಗಾವಣೆಗೆ ಅರ್ಹರಿದ್ದ ಹಲವು ಶಿಕ್ಷಕರ ಹೆಸರು ಇಂದೀಕರಣ (ಅಪ್‌ಡೇಟ್) ಆಗದಿರುವುದನ್ನು ಗಮನಿಸಿ ವರ್ಗಾವಣೆ ಪ್ರಕ್ರಿಯೆಗೆ ಸಮಯ ವಿಸ್ತರಿಸಿ ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
    ಏ. 19ರ ರಾತ್ರಿ 10.30ರೊಳಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ವರ್ಗಾವಣೆಗೆ ಅರ್ಹರಿರುವ ಶಿಕ್ಷಕರ ಮಾಹಿತಿಯನ್ನು ಇಂದೀಕರಿಸಬೇಕು. ಆ ಬಳಿಕ ಅಪ್‌ಡೇಟ್ ಮಾಡಲು ಅವಕಾಶ ಇರುವುದಿಲ್ಲ ಎಂದು ಇಲಾಖೆ ತಿಳಿಸಿದೆ.

    ಏ. 20ಕ್ಕೆ ವಲಯ ವರ್ಗಾವಣೆಗೆ ಆರ್ಹರಿರುವ ಶಿಕ್ಷಕರ ತಾತ್ಕಾಲಿಕ ಕರಡು ಪಟ್ಟಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಿಸಬೇಕು. ಏ. 20 ರಿಂದ ಏ. 22ರವರೆಗೆ ಪ್ರಕಟಿತ ತಾತ್ಕಾಲಿಕ ಕರಡು ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಏ. 23ರಂದು ’ಎ’ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರು ಸಲ್ಲಿಸಿರುವ ಆಕ್ಷೇಪಣೆ, ದಾಖಲೆಗಳನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಿ ತೀರ್ಮಾನ ಪ್ರಕಟಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಉಪನಿರ್ದೇಶಕರಿಗೆ ಅವಕಾಶ ನೀಡಲಾಗಿದೆ.

    ಏ. 24ರಂದು ವಲಯ ವರ್ಗಾವಣೆಗೆ ಅರ್ಹರಿರುವ ಶಿಕ್ಷಕರ ಆದ್ಯತೆಯ ಕರಡು ಪಟ್ಟಿ ಪ್ರಕಟಿಸುವಂತೆ ಸೂಚಿಸಲಾಗಿದೆ. ವರ್ಗಾವಣಾ ಪ್ರಕ್ರಿಯೆಯನ್ನು ನಡೆಸುತ್ತಿರುವ ಸಕ್ಷಮ ಪ್ರಾಧಿಕಾರ ಅತ್ಯಂತ ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು. ತಪ್ಪಿದಲ್ಲಿ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಶಾಲಾ ಶಿಕ್ಷಣ ಆಯುಕ್ತರು ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts