

ಬೆಂಗಳೂರು: ಸಾಲು ಸಾಲು ಪೊಲೀಸರ ವರ್ಗಾವಣೆಯ ನಂತರ ಇದೀಗ ಆರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ನೂತನ ಆದೇಶ ಹೊರಡಿಸಿದೆ. ಕಳೆದ ಎರಡು ತಿಂಗಳಿನಿಂದ ಹಂತಹಂತವಾಗಿ ಐಪಿಎಸ್, ಡಿವೈಎಸ್ಪಿ, ಇನ್ಸ್ಪೆಕ್ಟರ್ ಶ್ರೇಣಿಯ ಪೊಲೀಸ್ ಆಧಿಕಾರಿಗಳನ್ನು ವರ್ಗಾವಣೆಗೊಳಿಸಲಾಗಿತ್ತು. ಇದೀಗ ಐಎಎಸ್ ಅಧಿಕಾರಿಗಳ ವರ್ಗವಾಣೆ ಮಾಡಲಾಗಿದೆ.
ಇದೀಗ 6 ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಸರ್ಕಾರ, ಕೂಡಲೇ ಸೂಚಿಸಿದಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಿದೆ. ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಈ ಕೆಳಗಿನ ಪಟ್ಟಿಯಲ್ಲಿ ವರ್ಗಾವಣೆ ಆಗಿರುವ ಐಎಎಸ್ ಅಧಿಕಾರಿಗಳು ಮತ್ತು ಅವರ ಹೊಸ ಕಾರ್ಯಸ್ಥಾನಗಳನ್ನು ನಮೂದಿಸಲಾಗಿದೆ.