More

    ‘ಆಸೆ, ಆಮಿಷಕ್ಕೆ ಒಳಗಾಗದೆ ಮತದಾನ ಮಾಡಿ’

    ಮೈಸೂರು: ವಿಶ್ವದಲ್ಲಿಯೇ ಅತಿ ದೊಡ್ಡ ಚುನಾವಣೆಯೆಂದರೆ ಅದು ನಮ್ಮ ಲೋಕಸಭಾ ಚುನಾವಣೆ. ಇಂತಹ ಚುನಾವಣೆಯಲ್ಲಿ ಪ್ರತಿಯೊಬ್ಬ ಮತದಾರನು ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ನೈತಿಕ ಮತದಾನ ಮಾಡಲು ಮುಂದಾಗಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ದಿನೇಶ್ ಸಲಹೆ ನೀಡಿದರು.
    ಜಿಲ್ಲಾ ಸ್ವೀಪ್ ಸಮಿತಿಯಿಂದ ಶಾಹಿ ಎಕ್ಸ್‌ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಘಟಕ 37 ಮತ್ತು ಘಟಕ 42ರಲ್ಲಿ ನಡೆದ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
    ಸಂವಿಧಾನವು 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಭಾರತೀಯನಿಗೂ ಮತ ಚಲಾಯಿಸುವ ಹಕ್ಕನ್ನು ನೀಡಿದೆ. ಅದನ್ನು ಸರಿಯಾದ ಸಮಯದಲ್ಲಿ ಬಳಸಿಕೊಂಡು ಉತ್ತಮ ಪ್ರಜಾಪ್ರಭುತ್ವ ನಿರ್ಮಿಸಬೇಕು. ದೇಶದಾದ್ಯಂತ 96 ಕೋಟಿ ಮತದಾರರಿದ್ದು, 10 ಲಕ್ಷ ಮತಗಟ್ಟೆಗಳಲ್ಲಿ 57 ಲಕ್ಷ ಇವಿಎಂಗಳನ್ನು ಮತದಾನಕ್ಕಾಗಿ ಬಳಸಲಾಗುತ್ತಿದೆ. ಈ ಚುನಾವಣೆಯನ್ನು ಯಶಸ್ವಿಯಾಗಿ ಮುಗಿಸಲು ಚುನಾವಣಾ ಆಯೋಗ ವ್ಯಾಪಕವಾಗಿ ಪ್ರಚಾರ ಮಾಡುತ್ತಿದೆ. ಕಡ್ಡಾಯವಾಗಿ ಮತದಾನ ಮಾಡುವುದು ಪ್ರತಿಯೊಬ್ಬ ಮತದಾರನ ಕರ್ತವ್ಯ ಎಂದು ಹೇಳಿದರು.
    ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೇಕಡ 70ರಷ್ಟು ಮತದಾನವಾಗಿದ್ದು, ಈ ಚುನಾವಣೆಯಲ್ಲಿ ಅದಕ್ಕಿಂತ ಹೆಚ್ಚು ಮತದಾನ ಆಗುವ ನಿರೀಕ್ಷೆ ಇದೆ. ಮತದಾರರು ಚುನಾವಣೆಯ ಬಗ್ಗೆ ಯಾವುದೇ ಮಾಹಿತಿ ಬೇಕಿದ್ದರೂ ವೋಟರ್ ಹೆಲ್ಪಿಂಗ್ ಆ್ಯಪ್ ಡೌನ್‌ಲೋಡ್ ಮಾಡಿ ಅದರಿಂದ ಎಲ್ಲ ಮಾಹಿತಿಯನ್ನು ಪಡೆಯಬಹುದಾಗಿದೆ. ಎಲ್ಲರೂ ಮತದಾನ ಮಾಡಿ ಹಾಗೂ ಬೇರೆಯವರಿಗೂ ಮತ ಹಾಕುವಂತೆ ಪ್ರೇರೇಪಿಸಿ ಚುನಾವಣೆಯಲ್ಲಿ ಪಾಲ್ಗೊಳ್ಳಿ ಎಂದು ಹೇಳಿದರು.
    ಮತದಾರರಿಗೆ ಯಾವುದೇ ರೀತಿಯ ದೂರು ಹಾಗೂ ದುಷ್ಕೃತ್ಯಗಳು ಕಂಡುಬಂದಲ್ಲಿ ಸಿ-ವಿಜಿಲ್ ಆ್ಯಪ್ ಮೂಲಕ ಮಾಹಿತಿ ನೀಡಬಹುದು. 85ವರ್ಷ ಮೇಲ್ಪಟ್ಟ ವೃದ್ಧರು ಹಾಗೂ ಶೇಕಡ 40ರಷ್ಟು ಅಂಗವಿಕಲತೆ ಹೊಂದಿರುವ ಅಂಗವಿಕಲರಿಗೆ ಮತದಾರರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶವಿದ್ದು, ಅದನ್ನು ಬಳಸಿಕೊಂಡು ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದು ತಿಳಿಸಿದರು.
    ಶಾಹಿ ಎಕ್ಸ್‌ಪೋರ್ಟ್37ರ ಘಟಕ ಮುಖ್ಯಸ್ಥ ಜೆ.ಸಿ.ಗುರುಮೂರ್ತಿ, ಘಟಕ 42ರ ಮುಖ್ಯಸ್ಥ ಸಂತೋಷ್ ಕುಮಾರ್, ವ್ಯವಸ್ಥಾಪಕ ನಿರ್ದೇಶಕಿ ಶುಭಾ ದೇವರಾಜೇ ಅರಸ್, ಕಾರ್ಮಿಕ ಕಲ್ಯಾಣಾಧಿಕಾರಿ ಚೈತ್ರಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts