More

    ಆಕ್ಸಿಜನ್ ಕಾನ್ಸನ್​ಟ್ರೇಟರ್​ಗಳ ಹಸ್ತಾಂತರ

    ಹುಬ್ಬಳ್ಳಿ: ಕೇಂದ್ರ ಸರ್ಕಾರದ ಎಂ.ಇ.ಸಿ.ಎಲ್ ಕಂಪನಿಯ ಸಿಎಸ್​ಆರ್ ನಿಧಿಯಡಿ ನೀಡಲಾದ 80 ಆಕ್ಸಿಜನ್ ಕಾನ್ಸನ್​ಟ್ರೇಟರ್​ಗಳನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ನೇತೃತ್ವದಲ್ಲಿ ನಗರದ ಸರ್ಕ್ಯೂಟ್ ಹೌಸ್​ನಲ್ಲಿ ಶುಕ್ರವಾರ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು.
    ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, 53 ಸಾವಿರ ರೂ. ವೆಚ್ಚದ 5 ಲೀಟರ್ ಸಾಮರ್ಥ್ಯದ 80 ಆಕ್ಸಿಜನ್ ಕಾನ್ಸನ್​ಟ್ರೇಟರ್ ಜಿಲ್ಲಾಡಳಿತಕ್ಕೆ ಹಸ್ತಾಂತರಲಾಗಿದೆ. ಇವುಗಳನ್ನು ಅಗತ್ಯ ಇರುವೆಡೆ ಬಳಸಲಾಗುವುದು ಎಂದು ತಿಳಿಸಿದರು.
    4 ಪಿಎಸ್​ಎ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಜಿಲ್ಲೆಗೆ ನೀಡಲಾಗಿದೆ. ಇದರಿಂದ ಜಿಲ್ಲೆಯ ಆಮ್ಲಜನಕದ ಕೊರತೆ ನೀಗಲಿದೆ. ಸಾರ್ವಜನಿಕರು ಕೋವಿಡ್ ಬಗ್ಗೆ ಭಯ ಹಾಗೂ ಗಾಬರಿ ಪಡುವ ಅಗತ್ಯವಿಲ್ಲ. ಆದರೆ ನಿರ್ಲಕ್ಷ್ಯ ಮಾಡಬಾರದು. ಆಕ್ಸಿಜನ್ ಕೊರತೆ ಬಾರದಂತೆ ಪ್ರಯತ್ನಿಸಲಾಗುವುದು ಎಂದು ಹೇಳಿದರು.

    200 ಕೋಟಿ ಲಸಿಕೆ ಲಭ್ಯ: ಕೋವಿಡ್ 2ನೇ ಅಲೆಯ ಬಗ್ಗೆ ತಾಂತ್ರಿಕ ಸಮಿತಿ ಮುನ್ಸೂಚನೆ ನೀಡಿತ್ತು. ಆದರೆ ಈ ಪ್ರಮಾಣದಲ್ಲಿ ಆಕ್ಸಿಜನ್, ಅಗತ್ಯ ವೈದ್ಯಕೀಯ ಔಷಧಗಳ ಬೇಡಿಕೆ ಬರಲಿದೆ ಎಂಬುದನ್ನು ಹೇಳಿರಲಿಲ್ಲ. ಆಗಸ್ಟ್​ನಿಂದ ಡಿಸೆಂಬರ್ ಒಳಗೆ 200 ಕೋಟಿ ಲಸಿಕೆ ಲಭ್ಯವಾಗಲಿದೆ. ಕೋವಿಡ್ ವಿಚಾರದಲ್ಲಿ ರಾಜಕಾರಣ ಸಲ್ಲದು. ವಿರೋಧ ಪಕ್ಷಗಳು ಟೀಕಿಸುವ ಬದಲು ಸಹಕಾರ ನೀಡಲಿ ಎಂದು ಹೇಳಿದರು.
    ಜಿಲ್ಲಾಧಿಕಾರಿ ನಿತೇಶ ಪಾಟೀಲ, ತಹಶೀಲ್ದಾರ ಶಶಿಧರ ಮಾಡ್ಯಾಳ ಹಾಗೂ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts