More

    ಸಾರಿಗೆ ನೌಕರರು ಹಠ ಬಿಟ್ಟು ಬನ್ನಿ: ಡಿಸಿಎಂ ಡಾ.ಅಶ್ವತ್ಥ ನಾರಾಯಣ ಸಲಹೆ

    ಮಂಗಳೂರು: ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧ, ಈಗಾಗಲೇ 8 ಪ್ರಮುಖ ಬೇಡಿಕೆಗಳನ್ನು ಈಡೇರಿಸಲಾಗಿದೆ. ಆರನೇ ವೇತನ ಆಯೋಗ ಶಿಫಾರಸು ಜಾರಿ ಸಾಧ್ಯವಿಲ್ಲ ಎಂದು ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ. ಸಾರಿಗೆ ನೌಕರರು ಹಠ ಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದರು.

    ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಾರಿಗೆ ನೌಕರರಿಗೆ ನ್ಯಾಯಯುತವಾದ ನಿಗದಿತ ವೇತನವನ್ನು ಸರ್ಕಾರ ನೀಡಲು ಸಿದ್ದವಿದೆ. ಕೋವಿಡ್ ಅವಧಿಯಲ್ಲಿ ಸರ್ಕಾರ ಕೆಎಸ್‌ಆರ್‌ಟಿಸಿಗೆ 1200 ಕೋಟಿ ರೂ. ನೆರವು ನೀಡಿದೆ. ನಮ್ಮ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಎಲ್ಲರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ ಜನಪರ ಸರಕಾರ ಎನಿಸಿಕೊಂಡಿದೆ. ಇದೇ ರೀತಿ ಸಾರಿಗೆ ನೌಕರರಿಗೆ ನ್ಯಾಯ ಒದಗಿಸುತ್ತೇವೆ ಎಂದರು.

    ರಾಜ್ಯದಲ್ಲಿ ಕೋವಿಡ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಜಿಲ್ಲಾ ಕೇಂದ್ರಗಳಲ್ಲಿ ಶನಿವಾರದಿಂದ ಕರೊನಾ ಕರ್ಪ್ಯೂ ವಿಧಿಸಲಾಗುತ್ತಿದೆ. ರಾತ್ರಿ 10 ರಿಂದ ಬೆಳಗ್ಗೆ 5ರವರೆಗೆ ಜನರ ಓಡಾಟ ನಿಯಂತ್ರಿಸಿ ಕರೊನಾ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವುದು ಸರ್ಕಾರದ ಉದ್ದೇಶ, ಇದಕ್ಕೆ ಜನರು ಸಹಕಾರ ನೀಡಬೇಕು ಎಂದರು.

    ಇದನ್ನೂ ಓದಿ: ನಾಳೆಯಿಂದ ನೈಟ್​ ಕರ್ಫ್ಯೂ: ಸರ್ಕಾರದ ಈ ಅಧಿಕೃತ ಆದೇಶದಲ್ಲಿ ಎಲ್ಲ ಸಂದೇಹಗಳಿಗೆ ಪರಿಹಾರ…

    ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ನಡುವಿನ ಭಿನ್ನಾಭಿಪ್ರಾಯ ವಿಷಯಕ್ಕೆ ಸಂಬಂಧಿಸಿ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಪಕ್ಷದ ವಿರುದ್ಧ ಮಾತನಾಡುತ್ತಿರುವ ಶಾಸಕ ಬಸವರಾಜ ಪಾಟೀಲ್ ಯತ್ನಾಳ್ ಅವರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಉಳಿದ ವಿಚಾರವನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ. ಈ ಬಗ್ಗೆ ಪಕ್ಷದೊಳಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.

    ಕರೊನಾ ಲಸಿಕೆ ಹಾಕೊಂಡಿದ್ರೆ ಇಲ್ಲಿ ಬಿಯರ್ ಫ್ರೀ!; ಮಹಿಳೆಯರಿಗೆ ಚಿನ್ನದ ಮೂಗುತಿ​, ಲಸಿಕೆ ಅಭಿಯಾನಕ್ಕೆ ಶುರುವಾದ್ವು ಆಫರ್ಸ್​.

    ಐಪಿಎಲ್ 14ನೇ ಆವೃತ್ತಿಯಲ್ಲಿ ಹೊಸದೇನಿದೆ ಗೊತ್ತೇ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts