ಬೆಂಗಳೂರು: ಬಿಎಂಟಿಸಿ ಬಸ್ ಟಿಕೆಟ್ ದರ ಏರಿಸುವಂತೆ ಸಲ್ಲಿಕೆಯಾಗಿದ್ದ ಪ್ರಸ್ತಾವನೆಯನ್ನು ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ತಿರಸ್ಕರಿಸಿದ್ದಾರೆ ಎನ್ನಲಾಗಿದೆ.
ಬಿಎಂಟಿಸಿ ಬಸ್ ಟಿಕೆಟ್ ದರವನ್ನು ಶೇ. 15 ರಿಂದ 20 ರಷ್ಟು ಏರಿಕೆ ಮಾಡುವಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪೊನ್ನುರಾಜು ಅವರು ಸಚಿವರಿಗೆ ಮನವಿ ಸಲ್ಲಿಸದ್ದರು. ಡೀಸೆಲ್ ದರ ಹೆಚ್ಚಳ್ಳವಾಗುತ್ತಿರುವ ಹಿನ್ನೆಲೆಯಲ್ಲಿ ನಿಗಮವು ನಿತ್ಯ ಕೋಟ್ಯಾಂತರ ರೂಪಾಯಿಗಳ ನಷ್ಟ ಅನುಭವಿಸುತ್ತಿದೆ. ಹೀಗಾಗಿ ಬಸ್ ಪ್ರಯಾಣ ದರ ಏರಿಸಬೇಕು ಎಂದು ಕೋರಲಾಗಿತ್ತು.
ಆದರೆ, ನಿಗಮದ ಪ್ರಸ್ತಾವನೆಯನ್ನು ತಿರಸ್ಕರಿಸಿರುವ ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ, ಟಿಕೆಟ್ ದರ ಏರಿಸಲು ನಿರಾಕರಿಸಿದ್ದಾರೆ. ಸರ್ಕಾರಕ್ಕೆ ಕೆಟ್ಟ ಹೆಸರು ಬಾರದೇ ಇರಲು ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ, ದರ ಹೆಚ್ಚಳ ನಿರ್ಧಾರವನ್ನು ಮುಖ್ಯಮಂತ್ರಿಗಳ ವಿವೇಚನೆಗೆ ಬಿಡಲು ಅವರು ತೀರ್ಮಾನಿಸಿದ್ದಾರೆ ಎಂದು ಗೊತ್ತಾಗಿದೆ.
Alliance GovernmentBMTCDC TammannaTicket RateTransportation Departmentಟಿಕೆಟ್ ದರಡಿ.ಸಿ.ತಮ್ಮಣ್ಣಬಿಎಂಟಿಸಿಮೈತ್ರಿ ಸರ್ಕಾರಸಾರಿಗೆ ಇಲಾಖೆ