More

    ಗ್ರಾಮೀಣ ಪ್ರದೇಶಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಿ

    ಮೈಸೂರು: ಗ್ರಾಮೀಣ ಪ್ರದೇಶಗಳಿಗೆ ಕೂಡಲೇ ಪೂರ್ಣ ಪ್ರಮಾಣದಲ್ಲಿ ಸರ್ಕಾರಿ ಹಾಗೂ ಖಾಸಗಿ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಪಟ್ಟವರಿಗೆ ಸೂಕ್ತ ಆದೇಶ ನೀಡಬೇಕೆಂದು ಒತ್ತಾಯಿಸಿ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅವರು ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷಣ ಸಂಗಪ್ಪ ಸವದಿಗೆ ಪತ್ರ ಬರೆದಿದ್ದಾರೆ.
    ಸೋಮವಾರದಿಂದಲೇ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಬೋಧಕ/ಬೋಧಕೇತರರು ಹಾಜರಾಗುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಅದರಂತೆ ಶಾಲಾ-ಕಾಲೇಜಿನ ಕಚೇರಿಗಳನ್ನು ತೆರೆಯಲಾಗಿದೆ. ಆದರೆ ರಸ್ತೆ ಸಾರಿಗೆ ಹಾಗೂ ಖಾಸಗಿ ಸಾರಿಗೆ ಸೌಲಭ್ಯಗಳು ಗ್ರಾಮೀಣ ಪ್ರದೇಶದಲ್ಲಿ ಶೇ.50ರಷ್ಟೂ ಪ್ರಾರಂಭವಾಗಿಲ್ಲ. ಬಹುತೇಕ ಶಿಕ್ಷಕರು ಹಾಗೂ ಶಿಕ್ಷಕಿಯರು ಸಾರಿಗೆ ಸೌಲಭ್ಯವನ್ನೇ ಅವಲಂಬಿಸಿದ್ದಾರೆ. ಹೀಗಾಗಿ ಈ ಹಿಂದಿನಂತೆ ರಸ್ತೆ ಸಾರಿಗೆ ಸಂಸ್ಥೆ ನಿಗದಿಗೊಳಿಸಿರುವಂತೆ ಎಲ್ಲ ನಿಲ್ದಾಣಗಳಲ್ಲೂ ಕಡ್ಡಾಯವಾಗಿ ಬಸ್ ನಿಲ್ಲಿಸುವಂತೆ ಮತ್ತು ಬಸ್ ಹತ್ತುವಲ್ಲಿ, ಇಳಿಯುವಲ್ಲಿ ಇರುವ ಕೆಲವು ನಿರ್ಬಂಧಗಳನ್ನು ಸಡಿಲಗೊಳಿಸುವಂತೆ ಪತ್ರದಲ್ಲಿ ಕೋರಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts