More

    ಸಾರಿಗೆ ಸಿಬ್ಬಂದಿಗೆ ಪರಿಹಾರಕ್ಕೆ ಪ್ರಸ್ತಾವನೆ

    ಬೆಳಗಾವಿ: ಕೋವಿಡ್-19ನಿಂದಾಗಿ ಸಾರಿಗೆ ಇಲಾಖೆ ಆರ್ಥಿಕ ಸಮಸ್ಯೆ ಎದುರಿಸುತ್ತಿದೆ. ಸದ್ಯ ಬರುತ್ತಿರುವ ಆದಾಯ ಕೇವಲ ಬಸ್‌ಗಳ ಡಿಸೇಲ್‌ಗೆ ಮಾತ್ರ ಸಾಲುತ್ತಿದೆ. ಆದಾಯ ಇಲ್ಲ ಎಂಬ ಕಾರಣಕ್ಕೆ ಬಸ್‌ಗಳ ಸಂಚಾರ ಸ್ಥಗಿತಗೊಳಿಸಲು ಸಾಧ್ಯವಿಲ್ಲ. 3 ಸಾವಿರ ಕೋಟಿ ರೂ. ನಷ್ಟ ಎದುರಿಸುತ್ತಿರುವುದರಿಂದ 1.30 ಲಕ್ಷ ಸಿಬ್ಬಂದಿಗೆ ಸಮಯಕ್ಕೆ ಸರಿಯಾಗಿ ವೇತನ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಸವದಿ ತಿಳಿಸಿದರು.

    2019-20 ಸಾಲಿನಲ್ಲಿ ಉಂಟಾದ ನದಿಗಳ ಪ್ರವಾಹ ಮತ್ತು ಧಾರಾಕಾರ ಮಳೆಯಿಂದ ಉಂಟಾದ ಹಾನಿ ಮತ್ತು 2020-21ನೇ ಸಾಲಿನಲ್ಲಿ ಉಂಟಾದ ಅತಿವೃಷ್ಟಿಯ ಹಾನಿಯ ವಿವರವನ್ನು ಮುಖ್ಯಮಂತ್ರಿ ಗಮನಕ್ಕೆ ತರಲಾಗಿದೆ. ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸುತ್ತಿದ್ದಾರೆ. ಸರ್ಕಾರದ ಆದಾಯ ಬರುತ್ತಿರುವುದು ಕಡಿಮೆ ಆಗಿದ್ದರಿಂದ ಪರಿಹಾರ ನೀಡಲು ವಿಳಂಬವಾಗುತ್ತಿದೆ. ಈಗಾಗಲೇ ಕೇಂದ್ರ ಸರ್ಕಾರ ರಾಜ್ಯಕ್ಕೆ 33 ಸಾವಿರ ಕೋಟಿ ಸಾಲ ಕೊಡಲು ಮುಂದಾಗಿದೆ ಎಂದು ಮಾಹಿತಿ ನೀಡಿದರು.

    ಅಸಮರ್ಥರೆಂದು ಡಿಕೆಶಿಯನ್ನು ಕೈ ಬಿಟ್ಟಿದ್ರಾ?: ಸಚಿವ ಸಂಪುಟದಲ್ಲಿ ಖಾತೆಗಳನ್ನು ಬದಲಾಯಿಸುವ ಪರಮಾಧಿಕಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಇದೆ. ಪಕ್ಷದ ವರಿಷ್ಠರ ಜತೆ ಚರ್ಚಿಸಿಯೇ ಸಿಎಂ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಸವದಿ ಹೇಳಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪದಲ್ಲಿ ಹುರುಳಿಲ್ಲ. ಇಲಾಖೆ ಬದಲಾದರೆ ಅಸಮರ್ಥರು ಅಂತಲ್ಲ. ಸಿದ್ದರಾಮಯ್ಯ ಸರ್ಕಾರದಲ್ಲಿ ಎರಡು ವರ್ಷ ಡಿಕೆಶಿ ಅವರನ್ನು ಸಚಿವ ಸಂಪುಟಕ್ಕೆ ತೆಗೆದುಕೊಂಡಿರಲಿಲ್ಲ. ಡಿಕೆಶಿ ಅಸಮರ್ಥರು ಅನ್ನುವ ಕಾರಣಕ್ಕೆ ಬಿಟ್ಟಿದ್ರಾ ಎಂದು ಪ್ರಶ್ನಿಸಿದ ಅವರು, ಕೆಲ ಸಂದರ್ಭದಲ್ಲಿ ಅಗತ್ಯ ಬದಲಾವಣೆ ಮಾಡಬೇಕಾಗುತ್ತದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts