More

    ನಾಳೆ ಸಾರಿಗೆ ನೌಕರರ ಮುಷ್ಕರ: ಕೆಎಸ್​ಆರ್​ಟಿಸಿ, ಬಿಎಂಟಿಸಿ ರಸ್ತೆಗೆ ಇಳಿಯುವುದು ಅನುಮಾನ

    ಬೆಂಗಳೂರು: ಕೆಎಸ್​ಆರ್​ಟಿಸಿ, ಬಿಎಂಟಿಸಿ ಸೇರಿದಂತೆ 4 ಸಾರಿಗೆ ನಿಗಮಗಳ ಸಿಬ್ಬಂದಿಗಳನ್ನು ಸರ್ಕಾರಿ ನೌಕರರು ಎಂದು ಪರಿಗಣಿಸುವಂತೆ ಆಗ್ರಹಿಸಿ ನೌಕರರು ನಾಳೆ (ಫೆ.20) ಮುಷ್ಕರಕ್ಕೆ ಕರೆಕೊಟ್ಟಿದ್ದಾರೆ.

    ಪ್ರತಿಭಟನೆಯಲ್ಲಿ ಸಾರಿಗೆ ಸಂಸ್ಥೆ ನೌಕರರ ಜತೆ ಅವರ ಕುಟುಂಬದ ಸದಸ್ಯರು ಪ್ರತಿಭಟನೆ ನಡೆಸಲಿದ್ದಾರೆ. ಮುಷ್ಕರದ ಹಿನ್ನೆಲೆಯಲ್ಲಿ ಸರ್ಕಾರಿ ನಿಗಮಗಳ ಬಸ್​ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

    ಬೆಂಗಳೂರು ನಗರದಲ್ಲಿ ಕೆಎಸ್​ಆರ್​ಟಿಸಿ ಹಾಗೂ ಬಿಎಂಟಿಸಿ ಬಸ್​ಗಳು ನಾಳೆ ರಸ್ತೆ ಇಳಿಯುವುದು ಅನುಮಾನ.
    ಅಂದಾಜು 20 ಸಾವಿರ ಸಾರಿಗೆ ಸಿಬ್ಬಂದಿ ತಮ್ಮ ಕುಟುಂಬ ಸದಸ್ಯರೊಂದಿಗೆ ಸ್ವಾತಂತ್ರ್ಯ ಉದ್ಯಾನದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ.

    ನಾಡೋಜ ಪಾಟೀಲ ಪುಟ್ಟಪ್ಪ ಹಾಗೂ ಜಯ ಮೃತ್ಯುಂಜಯ ಸ್ವಾಮೀಜಿ ಸತ್ಯಾಗ್ರಹದ ನೇತೃತ್ವ ವಹಿಸಲಿದ್ದಾರೆ.
    ಸಾರಿಗೆ ಸಂಸ್ಥೆ ನೌಕರರರು ಹಾಗೂ ನಿಗಮ ಮಂಡಳಿಗಳ ನೌಕರರ ವೇತನದಲ್ಲಿ ಶೇ.60 ವ್ಯತ್ಯಾಸ ಇದೆ. ಸರ್ಕಾರಿ ನೌಕರರಿಗೆ ಸಿಗುತ್ತಿರುವ ಸೌಲಭ್ಯ ಸಿಗುತ್ತಿಲ್ಲ. ಸಿಬ್ಬಂದಿಯನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಕಾಲ್ನಡಿಗೆ ಜಾಥಾ ನಡೆಸಲಾಗಿದೆ. ಹಿಂದೆ ಹಲವು ಬಾರಿ ಪ್ರತಿಭಟನೆ ನಡೆಸಿದ್ದರೂ ಸರ್ಕಾರ ಬೇಡಿಕೆ ಈಡೇರಿಸಿಲ್ಲ. ಹೀಗಾಗಿ ಮತ್ತೆ ಮುಷ್ಕರ ನಡೆಸಬೇಕಾಗಿದೆ ಎಂದು ಸಿಐಟಿಯು ಜಂಟಿ ಕಾರ್ಯದರ್ಶಿ ಆನಂದ್​ ತಿಳಿಸಿದರು.

    ಬಜೆಟ್​ನಲ್ಲಿ ಸಿಎಂ ಯಡಿಯೂರಪ್ಪ ಅವರು ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂದು ಘೋಷಿಸಬೇಕು. ಇಲ್ಲದಿದ್ದರೇ ಹೋರಾಟ ತೀವ್ರಗೊಳ್ಳಲಿದೆ ಎಂದು ಅವರು ಎಚ್ಚರಿಕೆ ನೀಡಿದರು. (ದಿಗ್ವಿಜಯ ನ್ಯೂಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts