More

    ತ್ರಾಸಿ-ಮರವಂತೆ ಬೀಚ್ ಅಭಿವೃದ್ಧಿ

    ಗಂಗೊಳ್ಳಿ: ತ್ರಾಸಿ-ಮರವಂತೆ ಬೀಚ್ ಅಭಿವೃದ್ಧಿಗೆ ಪ್ರವಾಸೋದ್ಯಮ ಇಲಾಖೆಯಿಂದ 5 ಕೋಟಿ ರೂ. ಮಂಜೂರಾಗಿದ್ದು, ಈ ಅನುದಾನ ಬಳಸಿ ತ್ರಾಸಿ-ಮರವಂತೆ ಬೀಚ್‌ನಲ್ಲಿ ಅಗತ್ಯವಿರುವ ಮೂಲ ಸೌಲಭ್ಯ ಜತೆಗೆ ಬೀಚ್ ಅಭಿವೃದ್ಧಿಪಡಿಸಲಾಗುವುದು. ಈ ಕಾಮಗಾರಿಗಳ ನೀಲಿ ನಕಾಶೆ ಸಿದ್ಧಪಡಿಸಿ ಪ್ರವಾಸಿಗರ ಅನುಕೂಲಕ್ಕೆ ಬೇಕಾಗುವ ಸೌಲಭ್ಯಗಳನ್ನು ಒದಗಿಸಲು ಪ್ರಯತ್ನಿಸಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
    ತ್ರಾಸಿ-ಮರವಂತೆ ಕಡಲ ತೀರಕ್ಕೆ ಮಂಗಳವಾರ ಭೇಟಿ ನೀಡಿ ಪ್ರವಾಸೋದ್ಯಮ ಇಲಾಖೆ ಮೂಲಕ ಕೈಗೆತ್ತಿಕೊಳ್ಳಲಾಗುವ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿ ಮಾತನಾಡಿದರು.

    ಕಡಲ್ಕೊರೆತ ತಡೆಯುವ ಉದ್ದೇಶದಿಂದ ಎಡಿಬಿ ಮೂಲಕ ವಿನೂತನ ಮಾದರಿಯ ತಡೆಗೋಡೆ ರಚಿಸಲಾಗಿದೆ. ಪ್ರವಾಸೋದ್ಯಮ ಇಲಾಖೆಯ ಅನುದಾನ ಬಳಸಿ ಸುಂದರ ಕಡಲ ತೀರ ನಿರ್ಮಿಸುವಲ್ಲಿ ಯೋಜನೆ ಸಿದ್ಧಪಡಿಸಬೇಕು. ಪ್ರವಾಸಿಗರನ್ನು ಆಕರ್ಷಿಸಲು ಬೇಕಾಗುವ ಎಲ್ಲ ಸೌಕರ್ಯಗಳನ್ನು ಅಳವಡಿಸಲು ಪ್ರಯತ್ನಿಸಲಾಗುವುದು ಎಂದರು.

    ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಸಲಹೆ ಸೂಚನೆ ನೀಡಿದರು. ಉಡುಪಿ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸೋಮಶೇಖರ ಬಿ.ಕೆ., ಜಿಲ್ಲಾ ಪ್ರವಾಸೋದ್ಯಮ ಕನ್ಸಲ್ಟೆಂಟ್ ಅಮಿತ್ ಕುಮಾರ್, ಎಡಿಬಿ ಅಧಿಕಾರಿ ಗೋಪಾಲ ನಾಯ್ಕ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದರು. ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ರಾಜಪ್ಪ, ತಾಂತ್ರಿಕ ಸಲಹೆಗಾರ ರಮೇಶ, ಕುಂದಾಪುರ ಉಪವಿಭಾಗಾಧಿಕಾರಿ ರಾಜು ಕೆ., ಬೈಂದೂರು ತಹಸೀಲ್ದಾರ್ ಬಸಪ್ಪ ಪೂಜಾರ್, ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ್‌ಕುಮಾರ್ ಶೆಟ್ಟಿ, ಬೈಂದೂರು ತಾಪಂ ಅಧ್ಯಕ್ಷ ಮಹೇಂದ್ರ ಪೂಜಾರಿ, ಜಿಪಂ ಸದಸ್ಯರಾದ ಶೋಭಾ ಜಿ.ಪುತ್ರನ್, ಬಾಬು ಶೆಟ್ಟಿ, ಶಂಕರ ಪೂಜಾರಿ, ತಾಪಂ ಸದಸ್ಯರು, ಪಕ್ಷದ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts