More

  ಕಾಂಗ್ರೆಸ್​ ಕಾರ್ಯಕರ್ತರಿಂದ ಪಾಕಿಸ್ತಾನ್​ ಜಿಂದಾಬಾದ್​ ಎಂದು ದೇಶದ್ರೋಹಿ ಹೇಳಿಕೆ: ಆರ್.ಅಶೋಕ್​ ಆಕ್ರೋಶ

  ಬೆಂಗಳೂರು: ರಾಜ್ಯಸಭಾ ಚುನಾವಣೆ ಫಲಿತಾಂಶ ಘೋಷಣೆಯಾದ ಬೆನ್ನಲ್ಲೇ ವಿಧಾನಸೌಧದ ಪಡಸಾಲೆಯಲ್ಲಿ ರಾಜ್ಯಸಭೆಯ ಸಂಸದರಾಗಿ ಆಯ್ಕೆಯಾದ ಕಾಂಗ್ರೆಸ್​ನ ನಾಸಿರ್​ ಹುಸೇನ್​ ಬೆಂಬಲಿಗರು ಪಾಕಿಸ್ತಾನ್​ ಜಿಂದಾಬಾದ್​ ಎಂದು ದೇಶದ್ರೋಹದ ಘೋಷಣೆ ಕೂಗಿದ್ದು ಬಿಜೆಪಿ ಮತ್ತು ವಿಪಕ್ಷ ನಾಯಕ ಆರ್​.ಅಶೋಕ್​ ಕಿಡಿಕಾಡಿದ್ದಾರೆ.

  ಇದನ್ನೂ ಓದಿ:ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್​ ಘೋಷಣೆ ಕೂಗಿದ ಕಾಂಗ್ರೆಸ್​ ಅಭ್ಯರ್ಥಿ ನಾಸೀರ್​ ಹುಸೇನ್ ಬೆಂಬಲಿಗರು

  ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸೌಧದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು ಈ ಘಟನೆ ರಾಜ್ಯ ಕಾಂಗ್ರೆಸ್​ ಪಕ್ಷದ ವಿಕೃತ, ದೇಶದ್ರೋಹಿ ಮನಸ್ಥಿತಿಯನ್ನು ಪ್ರದರ್ಶನ ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

  ಎಕ್ಸ್​ ಖಾತೆಯಲ್ಲಿ ಟ್ಟೀಟ್ ಮಾಡಿರುವ ಅವರು, ಚುನಾವಣೆಯಲ್ಲಿ ಗೆದ್ದಿದ್ದರೆ ನಿಮ್ಮ ಅಭ್ಯರ್ಥಿಗಳಿಗೆ ಜೈಕಾರ ಹಾಕಿ, ನಿಮ್ಮ ಪಕ್ಷಕ್ಕೆ ಜೈಕಾರ ಹಾಕಿ, ನಿಮ್ಮ ನಾಯಕರಿಗೆ ಜೈಕಾರ ಹಾಕಿ, ಅದು ಬಿಟ್ಟು ಪಾಕಿಸ್ತಾನ ಜಿಂದಾಬಾದ್ ಎಂದು ನಿಮ್ಮ ಪಕ್ಷದ ಕಾರ್ಯಕರ್ತರು ಘೋಷಣೆ ಕೂಗುತ್ತಾರಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಮೂರು ರಾಜ್ಯಸಭೆ ಸ್ಥಾನ ಗೆದ್ದ ಮಾತ್ರಕ್ಕೆ ಮತೊಮ್ಮೆ ದೇಶ ವಿಭಜನೆ ಮಾಡಬಹುದು ಎಂದು ಕೊಂಡಿದ್ದೀರಾ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  ಪಾಕಿಸ್ತಾನ ಜಿಂದಾಬಾದ್ ಎಂಬುದೇ ಕಾಂಗ್ರೆಸ್ ಪಕ್ಷದ ಆತ್ಮಸಾಕ್ಷಿನಾ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ ಎಂದು ಆರ್. ಅಶೋಕ್ ಕಿಡಿಕಾರಿದ್ದಾರೆ.

  ರಾಜ್ಯಸಭೆಯ ಸಂಸದರಾಗಿ ನೂತನವಾಗಿ ಇಂದು ಆಯ್ಕೆಯಾದ ನಾಸೀರ್‌ ಹುಸೇನ್‌ ಅವರ ಬೆಂಬಲಿಗ ಅವರ ಪಕ್ಕದಲ್ಲೇ ಇದ್ದ ವ್ಯಕ್ತಿ ಪಾಕಿಸ್ತಾನ್‌ ಜಿಂದಾಬಾದ್‌, ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿದ್ದಾನೆ. ಇದೇ ವೇಳೆ ಪಕ್ಕದಲ್ಲಿದ್ದ ಕೆಲವರು ಆತನ ಬಾಯಿಮುಚ್ಚಿಸಿದ್ದಾರೆ. ಇದೀಗ ಪಾಕಿಸ್ತಾನ್ ಜಿಂದಾಬಾದ್​ ಎಂದು ಘೋಷಣೆ ಕೂಗಿರುವ ವಿಡಿಯೋ ವೈರಲ್ ಆಗಿದೆ.

  ಜರ್ಮನ್​ ಗಾಯಕಿ ಕ್ಯಾಸಂಡ್ರ ಮೇ ಸ್ಪಿಟ್‌ಮನ್​ರ ‘ಅಚ್ಯುತಂ ಕೇಶವಂ’ ಹಾಡು ಕೇಳಿ ಮನಸೋತ ಪ್ರಧಾನಿ ಮೋದಿ!

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts