ಸಿದ್ಧಗಂಗಾ ಶ್ರೀಗಳಿಗೆ ಸಣ್ಣ ಪ್ರಮಾಣದ ಶಸ್ತ್ರಚಿಕಿತ್ಸೆ ಆರಂಭ

ಚೆನ್ನೈ: ಸಿದ್ಧಗಂಗಾ ಮಠದ ಡಾ. ಶಿವಕುಮಾರ ಶ್ರೀಗಳಿಗೆ ಶನಿವಾರ ಬೆಳಗ್ಗೆ ಚೆನ್ನೈನ ಡಾ. ರೇಲಾ ಇನ್​ಸ್ಟಿಟ್ಯೂಟ್ ಆಂಡ್ ಮೆಡಿಕಲ್ ಸೆಂಟರ್​ನಲ್ಲಿ ಪಿತ್ತನಾಳದ ಸಣ್ಣಪ್ರಮಾಣದ ಶಸ್ತ್ರಚಿಕಿತ್ಸೆಯನ್ನು ಆರಂಭಿಸಲಾಗಿದೆ.

ಬೆಳಗ್ಗೆ 8 ಕ್ಕೂ ಹೆಚ್ಚು ತಜ್ಞ ವೈದ್ಯರು ಶ್ರೀಗಳ ತಪಾಸಣೆ ನಡೆಸಿದರು. ನಂತರ ಡಾ. ಮೊಹಮ್ಮದ್​ ರೇಲಾ ಅವರ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗುತ್ತಿದೆ.

ಶಸ್ತ್ರಚಿಕಿತ್ಸೆಯ ಕಾರಣದಿಂದಾಗಿ ಶ್ರೀಗಳು ಬೆಳಗ್ಗೆ ಇಷ್ಟಲಿಂಗ ಪೂಜೆ ಮಾಡಲಿಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಆಸ್ಪತ್ರೆಗೆ ಕಿರಿಯ ಶ್ರೀಗಳಾದ ಸಿದ್ದಲಿಂಗ ಶ್ರೀಗಳು, ಸುತ್ತೂರು ಶ್ರೀಗಳು ಭೇಟಿ ನೀಡಿದ್ದು, ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ.

ಸಿದ್ಧಗಂಗಾ ಶ್ರೀ ಚೆನ್ನೈನಲ್ಲಿ ಕ್ಷೇಮ

Leave a Reply

Your email address will not be published. Required fields are marked *