ಬೆಳಗಾವಿ: ಬುಡಕಟ್ಟು ಜನಾಂಗದವರನ್ನು ಮುಖ್ಯ ವಾಹಿನಿಗೆ ತರಲು ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿವೆ. ಈ ಯೋಜನೆಗಳ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ, ಶೈಕ್ಷಣಿಕವಾಗಿ ಮುಂದೆ ಬರಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.
ನಗರದ ಕುಮಾರ ರಂಗ ಮಂದಿರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಧರ್ತಿ ಅಲಾ ಭಗವಾನ ಬಿರ್ಸಾ ಮುಂದಾರಿ ಅವರ 150ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಿರ್ಸಾ ಮುಂಡಾರಿ ಅವರನ್ನು ಬುಡಕಟ್ಟು ಜನಾಂಗದವರು ಭಗವಾನ್ ಎಂದು ಪೂಜಿಸುತ್ತಾರೆ. ಸಮಾಜದ ಮುಖ್ಯ ವಾಹಿನಿಗಳಿಗೆ ಯಾವ ಜನಾಂಗದವರು ಬಂದಿಲ್ಲ ಅಂತ ಜನಾಂಗದವರಿಗೆ ಮುಖ್ಯವಾಹಿನಿಗೆ ಬರುವಂತೆ 17 ಇಲಾಖೆಗಳಿಂದ 15 ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಇದು ಜನರು ಒಳ್ಳೇ ಜೀವನ ನಡೆಸಲು ಸಹಾಯವಾಗುತ್ತದೆ ಎಂದು ತಿಳಿಸಿದರು.
ಜಿಪಂ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಮಾತನಾಡಿ, ಬುಡಕಟ್ಟು ಸಮುದಾಯದ ನಾಯಕ, ಸ್ವಾತಂತ್ರ್ಯ ಹೋರಾಟಗಾರ, ಭಗವಾನ್ ಬಿರ್ಸಾ ಮುಂಡಾ ಅವರ 150ನೇ ವರ್ಷದ ಜನ್ಮದಿನಾಚರಣೆಯನ್ನು ಜನಜಾತಿಯ ಗೌರವ ದಿನವನ್ನಾಗಿ ದೇಶಾದ್ಯಂತ ಅತ್ಯಂತ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಭಾರತ ಬುಡಕಟ್ಟು ಸಮುದಾಯದ ಶ್ರೀಮಂತ ಸಾಂಸ್ಕೃತಿಕ ಪರಂಪರೆ, ಸಾಂಪ್ರದಾಯಿಕ ಕಲಾಕೃತಿಗಳು ಕರಕುಶಲ ಸಂಪನ್ಮೂಲಗಳನ್ನು ಇವತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರ್ತಿಸಿ ಗೌರವಿಸಲಾಗುತ್ತಿದೆ ಎಂದರು. ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೋಳಿ ಮಾತನಾಡಿದರು.ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಬಸವರಾಜ ಕುರಿಹೊಳಿ, ಕೃಷಿ ಇಲಾಖೆ ಉಪ ನಿರ್ದೇಶಕ ಸಲೀಂ ಅಹ್ಮದ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಗಿರಿಧರ ಜಾಧವ, ಜಿಪಂ ಯೋಜನಾ ನಿರ್ದೇಶಕ ಬಂಗಾರಪ್ಪನವರ, ತಾಲೂಕು ಆರೋಗ್ಯ ಅಧಿಕಾರಿ ರಾಜಶ್ರೀ ಪಾಟೀಲ, ಕರ್ನಾಟಕ ಆದಿ ಜಾಂಭವ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕ ಬಸವರಾಜ ಚನ್ನನವರ ಇತರರಿದ್ದರು.