

ಸುಬ್ರಹ್ಮಣ್ಯ: ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್, ರೋಟರಿ ಕ್ಲಬ್ ಸುಬ್ರಹ್ಮಣ್ಯ ಹಾಗೂ ಸೀನಿಯರ್ ಚೇಂಬರ್ ಸುಬ್ರಹ್ಮಣ್ಯ ವತಿಯಿಂದ ಅಖಿಲ ಭಾರತ ಬಿಲ್ಲವ ಮಹಾಮಂಡಲ ಮೂಲ್ಕಿ ಘಟಕ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ಅವರನ್ನು ಸನ್ಮಾನಿಸಲಾಯಿತು.
ರಕ್ತದಾನಿ ನೆತ್ತರ ಗೋಪಾಲಕೃಷ್ಣ ಶೆಟ್ಟಿ, ಆಪತ್ ರಕ್ಷಕ ಅಶೋಕ ಕುಲಾಲ್ ಅವರನ್ನು ಅಭಿನಂದಿಸಲಾಯಿತು. ಕಲಾವಿದ ಕೆ.ಯಜ್ಞೇಶ್ ಆಚಾರ್, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯ ಅಶೋಕ್ ನೆಕ್ರಾಜೆ, ಟ್ರಸ್ಟ್ ಅಧ್ಯಕ್ಷ ರವಿ ಕಕ್ಕೆಪದವು, ಪದಾಧಿಕಾರಿ ಗೀತಾ ರವಿ ಕಕ್ಕೆಪದವು, ರೋಟರಿ ಕ್ಲಬ್ ಅಧ್ಯಕ್ಷ ಜಯಪ್ರಕಾಶ್ ಆರ್., ಸೀನಿಯರ್ ಚೇಂಬರ್ ಅಧ್ಯಕ್ಷ ವೆಂಕಟೇಶ್ ಎಚ್.ಎಲ್., ಸ್ಥಾಪಕಾಧ್ಯಕ್ಷ ವಿಶ್ವನಾಥ ನಡುತೋಟ, ಕಾರ್ಯದರ್ಶಿ ಗೋಪಾಲ್ ಎಣ್ಣೆಮಜಲ್, ಪುತ್ತೂರು ಅಕ್ಷಯ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಜಯಂತ ನಡುಬೈಲು, ಮೂಲ್ಕಿ ಬಿಲ್ಲವ ಸಂಘದ ಪದಾಧಿಕಾರಿಗಳಾದ ಸಂತೋಷ, ದಿನೇಶ್, ಪ್ರಮುಖರಾದ ಚಂದ್ರಶೇಖರ ನಾಯರ್, ದುಗ್ಗಪ್ಪ ಎಚ್., ಮೋಹನದಾಸ ರೈ, ಸುರೇಶ್ ಕಕ್ಕೆಪದವು ಮೊದಲಾದವರು ಉಪಸ್ಥಿತರಿದ್ದರು.