

ಕಾರ್ಕಳ: ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಮತ್ತು ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ನೇತೃತ್ವದಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ರಜತ ಮಹೋತ್ಸವ ಸಭಾಂಗಣದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ನಂದಳಿಕೆ ಅಂಗನವಾಡಿ ಕೇಂದ್ರದಲ್ಲಿ 27 ವರ್ಷದಿಂದ ಅಂಗನವಾಡಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಪ್ರಭಾ ಎಂ.ಶರ್ಮಾ ಅವರನ್ನು ಸನ್ಮಾನಿಸಲಾಯಿತು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಬೀರೊಟ್ಟು ದಿನೇಶ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸಂಚಾಲಕ ಅಬ್ಬನಡ್ಕ ಸಂದೀಪ್ ವಿ.ಪೂಜಾರಿ, ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಲೀಲಾ ಪೂಜಾರಿ, ಉಪಾಧ್ಯಕ್ಷ ಸತೀಶ್ ಪೂಜಾರಿ, ಜತೆ ಕಾರ್ಯದರ್ಶಿ ಅನ್ನಪೂರ್ಣ ಕಾಮತ್, ಕೋಶಾಧಿಕಾರಿ ಆರತಿ, ಪೂರ್ವಾಧ್ಯಕ್ಷರಾದ ಆನಂದ ಪೂಜಾರಿ, ಸುರೇಶ್ ಕಾಸ್ರಬೈಲು, ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಅಧ್ಯಕ್ಷೆ ಸುಲೋಚನಾ ಕೋಟ್ಯಾನ್, ಕಾರ್ಯದರ್ಶಿ ಶ್ರದ್ಧಾ ಪೂಜಾರಿ, ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಸದಸ್ಯರಾದ ಹರೀಶ್ ಪೂಜಾರಿ, ಸುರೇಶ್ ಪೂಜಾರಿ, ಪುಷ್ಪಾ ಕುಲಾಲ್, ಲಲಿತಾ ಆಚಾರ್ಯ, ಪದ್ಮಶ್ರೀ ಪೂಜಾರಿ, ಅಶ್ವಿನಿ ಪ್ರಭಾಕರ್, ವೀಣಾ ಪೂಜಾರಿ, ವೀಣಾ ಆಚಾರ್ಯ, ಗೀತಾ ಶೆಟ್ಟಿ, ಹರಿಣಿ ಪೂಜಾರಿ ಉಪಸ್ಥಿತರಿದ್ದರು.