ಕೆ.ಬಿ.ಗಣಪತಿ ಪತ್ರಿಕೋದ್ಯಮದ ಭೀಷ್ಮ: ಸೌತ್ ಮಲ್ಟಿಪಲ್ ಕೌನ್ಸಿಲ್ ಅಧ್ಯಕ್ಷ ಕೆ.ಟಿ.ಹನುಮಂತು ಬಣ್ಣನೆ

Tribute to K.B.Ganapathy Mandya
Published on

ಮಂಡ್ಯ: ಹಿರಿಯ ಪತ್ರಕರ್ತ ಕೆ.ಬಿ.ಗಣಪತಿ ಅವರು ಪತ್ರಿಕೋದ್ಯಮದ ಭೀಷ್ಮನಂತಿದ್ದರು. ಅವರ ಅಗಲಿಕೆಯಿಂದ ಪತ್ರಿಕಾ ಕ್ಷೇತ್ರಕ್ಕೆ ಅಪಾರ ನಷ್ಟವಾಗಿದೆ ಎಂದು ಅಸೋಸಿಯೇಷನ್ ಆಫ್ ಅಲಯನ್ಸ್ ಇಂಟರ್‌ನ್ಯಾಷನಲ್ ಕ್ಲಬ್‌ನ ಸೌತ್ ಮಲ್ಟಿಪಲ್ ಕೌನ್ಸಿಲ್ ಅಧ್ಯಕ್ಷ ಕೆ.ಟಿ.ಹನುಮಂತು ವಿಷಾದಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕೃಷಿಕ ಅಲಯನ್ಸ್ ಸಂಸ್ಥೆ ಹಾಗೂ ಪ್ರತಿಭಾಂಜಲಿ ಸುಗಮ ಸಂಗೀತ ಅಕಾಡೆಮಿ ಸಹಯೋಗದಲ್ಲಿ ಆಯೋಜಿಸಿದ್ದ ಕೆ.ಬಿ.ಗಣಪತಿ ಅವರಿಗೆ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಣಪತಿ ಅವರು ಯುವ ಪತ್ರಕರ್ತರನ್ನು ತಯಾರು ಮಾಡುವ ಕಾರ್ಖಾನೆಯಾಗಿದ್ದರು. ಪತ್ರಿಕೋದ್ಯಮದ ಜತೆಗೆ ಸಾಹಿತ್ಯ ಕ್ಷೇತ್ರದಲ್ಲಿ ಅನೇಕ ಕಾದಂಬರಿ ಬರೆದಿದ್ದು, ಪ್ರವಾಸೋದ್ಯಮ ಕ್ಷೇತ್ರದಲ್ಲೂ ಹೆಸರು ಮಾಡಿದ್ದಾರೆ. ಮೈಸೂರು ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡಿದ್ದಾರೆ. ಮೈಸೂರು ಅಭಿವೃದ್ಧಿ, ನಾಡು, ನುಡಿ, ಜಲಕ್ಕಾಗಿ ತಮ್ಮ ಬರವಣಿಗೆ ಮೂಲಕ ಗಮನಸೆಳೆದಿದ್ದಾರೆ ಎಂದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಕೆ.ಎನ್.ರವಿ ಮಾತನಾಡಿದರು. ಸಂಘದ ಜಿಲ್ಲಾಧ್ಯಕ್ಷ ಕೆ.ಎನ್.ನವೀನ್‌ಕುಮಾರ್, ಮಾಜಿ ಅಧ್ಯಕ್ಷ ನವೀನ್ ಚಿಕ್ಕಮಂಡ್ಯ, ಖಜಾಂಚಿ ಆರ್.ಎನ್.ನಂಜುಂಡಸ್ವಾಮಿ, ಪ್ರತಿಭಾಂಜಲಿ ಸುಗಮ ಸಂಗೀತ ಅಕಾಡೆಮಿ ಅಧ್ಯಕ್ಷ ಡೇವಿಡ್, ಅಸೋಸಿಯೇಷನ್ ಆಫ್ ಅಲಯನ್ಸ್‌ನ ಉಪಪ್ರಾಂತಪಾಲ ಚಂದ್ರಶೇಖರ್, ಮೋಹನ್‌ಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net