

ಸುಳ್ಯ: ಕನ್ನಡ ರಾಜ್ಯೋತ್ಸವ ಸಾಹಿತ್ಯ ಸಂಭ್ರಮ ಪ್ರಯುಕ್ತ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸುವಿಚಾರ ಸಾಹಿತ್ಯ ವೇದಿಕೆ ವತಿಯಿಂದ ಮಲೆನಾಡ ಗಾಂಧಿ ದಿ.ಗೋವಿಂದೇಗೌಡ ಸ್ಮರಣಾರ್ಥ ನೀಡುವ ಅತ್ಯುತ್ತಮ ಶಾಲೆ ಪುರಸ್ಕಾರ ಪಡೆದ ಕೋಲ್ಚಾರು ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಸದಸ್ಯರನ್ನು ಹಾಗೂ ಶಿಕ್ಷಕರನ್ನು ಕೋಲ್ಚಾರು ಶಾಲೆಯಲ್ಲಿ ಗೌರವಿಸಲಾಯಿತು.
ಹಳೇ ವಿದ್ಯಾರ್ಥಿ ಕೃಷ್ಣಪ್ಪ ಗೌಡ ಪರಮಂಡಲ ಉದ್ಘಾಟಿಸಿದರು. ಕಸಾಪ ಅಧ್ಯಕ್ಷ ಚಂದ್ರಶೇಖರ ಪೇರಾಲು ಅಧ್ಯಕ್ಷತೆ ವಹಿಸಿದ್ದರು. ಶಾಲಾ ಪಾಲನಾ ಸಮಿತಿ ಅಧ್ಯಕ್ಷ ಕರುಣಾಕರ ಹಾಸ್ಪಾರೆ ಹಾಗೂ ಶಿಕ್ಷಕಿ ಜಲಜಾಕ್ಷಿ ಸನ್ಮಾನ ಸ್ವೀಕರಿಸಿದರು.
ಕಸಾಪ ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ, ಕೇಶವ ಸಿ. ಉಪಸ್ಥಿತರಿದ್ದರು. ಸಾಹಿತ್ಯ ಸ್ಪರ್ಧೆಯ ವಿಜೇತ ವಿದ್ಯಾರ್ಥಿಗಳಿಗೆ ಬಹುವಾನ ವಿತರಿಸಲಾಯಿತು. ಶಾಲೆಗೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರಗಳನ್ನು ಹಸ್ತಾಂತರಿಸಲಾಯಿತು.
ಮುಖ್ಯ ಶಿಕ್ಷಕ ಚಿನ್ನಸ್ವಾಮಿ ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಳ್ಳತ್ತಡ್ಕ ಪ್ರಸ್ತಾವಿಸಿದರು. ಚಂದ್ರಾವತಿ ಬಡ್ಡಡ್ಕ ನಿರೂಪಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಗಾಯಕ ಭೀಮ ರಾವ್ ವಾಷ್ಟರ್ ಬಳಗದಿಂದ ಗೀತ ಗಾಯನ ನಡೆಯಿತು.