ಮಹಾಮಂಡಲೇಶ್ವರ ಕನ್ಯಾಡಿ ಸ್ವಾಮೀಜಿಗೆ ಗೌರವಾರ್ಪಣೆ

012
Published on

ಬೆಳ್ತಂಗಡಿ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರನ್ನು ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ವತಿಯಿಂದ ಕನ್ಯಾಡಿ ಕ್ಷೇತ್ರದಲ್ಲಿ ಗೌರವಿಸಲಾಯಿತು.

ಬಳಿಕ ಸ್ವಾಮೀಜಿ ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ವತಿಯಿಂದ ಸೆ.28ರಂದು ನಡೆಯುವ ಮೂರನೇ ವರ್ಷದ ಶ್ರೀ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ.ಕೋಟ್ಯಾನ್ ಬಳಂಜ, ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ ಬೊಂಟ್ರೋಟ್ಟು, ಕಾರ್ಯದರ್ಶಿ ರಂಜಿತ್ ಪೂಜಾರಿ ಮಜಲಡ್ಡ, ಕೋಶಾಧಿಕಾರಿ ಪ್ರವೀಣ್ ಕುಮಾರ್ ಎಚ್.ಎಸ್., ಜತೆ ಕಾರ್ಯದರ್ಶಿ ದಿನೇಶ್ ಪೂಜಾರಿ ನಿಟ್ಟಡ್ಕ, ನಿರ್ದೇಶಕರಾದ ಸಂತೋಷ್ ಕುಮಾರ್ ಕಾಪಿನಡ್ಕ, ಜಗದೀಶ್ ಪೂಜಾರಿ ಬಳ್ಳಿದಡ್ಡ, ದಿನೇಶ್ ಪೂಜಾರಿ ಅಂತರ, ಮನೋಹರ್ ಬಳಂಜ, ಯತೀಶ್ ವೈ.ಎಲ್.ಬಳಂಜ, ದೀಪಕ್ ಎಚ್.ಡಿ., ಸಂಧ್ಯಾದೀಪ, ಸಂತೋಷ್ ಕುಮಾರ್ ಹಿಮರಡ್ಡ, ವಿಜಯ್ ಪೂಜಾರಿ ಯೈಕುರಿ, ರತ್ನಾಕರ ಪೂಜಾರಿ ಕೆಂಪುಂರ್ಜ, ಪ್ರದೀಪ್ ಕಾಪಿನಡ್ಕ, ಯೋಗೀಶ್ ಕೊಂಗುಳ, ಪ್ರವೀಣ್ ಡಿ.ಕೋಟ್ಯಾನ್ ದರ್ಖಾಸು, ಸಂತೋಷ್ ಕಡೆಂಗಾಲು, ಸಂಘ ಮಾಜಿ ಕಾರ್ಯದರ್ಶಿ ಸದಾನಂದ ಸಾಲ್ಯಾನ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್ ಬಾಕ್ಯರಡ್ಡ ಮೊದಲಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net