More

  ಪುಲ್ವಾಮಾ ಹುತಾತ್ಮ ಯೋಧರಿಗೆ ನಮನ

  ಬೇಲೂರು: ತಾಲೂಕಿನ ಅರೇಹಳ್ಳಿ ಮುಖ್ಯ ರಸ್ತೆಯಲ್ಲಿರುವ ವೀರ ಯೋಧ ಮಿಲಿಟರಿ ಚಂದ್ರಶೇಖರ್ ವೃತ್ತದಲ್ಲಿ ಮೇಣದ ಬತ್ತಿಗಳನ್ನು ಹಚ್ಚಿ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಬುಧವಾರ ಭಾವಪೂರ್ಣ ನಮನ ಸಲ್ಲಿಸಲಾಯಿತು.


  ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು, ಗ್ರಾಮದ ಮುಖಂಡರು, ಗ್ರಾಮ ಪಂಚಾಯಿತಿ ಸದಸ್ಯರು, ಪೊಲೀಸರು ಹಾಗೂ ಸಾರ್ವಜನಿಕರು ಹುತಾತ್ಮ ಯೋಧರನ್ನು ಸ್ಮರಿಸಿದರು.


  ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ನಿಂಗರಾಜು ಮಾತನಾಡಿ, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆ.14 ರಂದು ಭಾರತೀಯ ಸೇನೆಯ ಭದ್ರತಾ ಪಡೆಗಳ ಮೇಲೆ ನಡೆದ ಅತ್ಯಂತ ಭೀಕರ ದಾಳಿಗೆ 40 ಸಿಆರ್‌ಪಿಎಫ್ ವೀರ ಯೋಧರ ಬಲಿದಾನವಾಗಿತ್ತು. ಈ ದಿನ ಭಾರತದ ಪಾಲಿಗೆ ಕರಾಳ ದಿನ. ದೇಶಕ್ಕಾಗಿ ವೀರ ಯೋಧರು ತನ್ನ ಪ್ರಾಣವನ್ನು ಅರ್ಪಿಸಿದ ದಿನ. ಅವರು ನೀಡಿದ ಸೇವೆ ಮತ್ತು ತ್ಯಾಗವನ್ನು ಯಾವಾಗಲೂ ನೆನಪಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.

  ಗ್ರಾಮಸ್ಥರಾದ ದೇವರಾಜು, ಲಕ್ಷ್ಮಣ, ಸ್ವಾಮಿ, ಸಿದ್ದರಾಜು ಇತರರು ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts