ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

New Project (3)
Published on

ಸುಳ್ಯ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಶೇ.100 ಅಂಕ ಪಡೆದ ವಿದ್ಯಾರ್ಥಿಗಳಿಗೆ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಗೌರವಾರ್ಪಣೆ ಕನ್ನಡ ಭವನದಲ್ಲಿ ನಡೆಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಉದ್ಘಾಟಿಸಿದರು. ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ವಿದ್ಯಾರ್ಥಿಗಳನ್ನು ಗೌರವಿಸಿದರು. ಕಸಾಪ ಅಧ್ಯಕ್ಷ ಚಂದ್ರಶೇಖರ ಪೇರಾಲು ಅಧ್ಯಕ್ಷತೆ ವಹಿಸಿದ್ದರು. ಎನ್‌ಎಂಪಿಯು ಪ್ರಾಂಶುಪಾಲೆ ಮಿಥಾಲಿ ಪಿ. ರೈ ಅಭಿನಂದನಾ ಭಾಷಣ ಮಾತನಾಡಿದರು.

ಸುಡಾ ಅಧ್ಯಕ್ಷ ಕೆ.ಎಂ.ಮುಸ್ತಫಾ ಮುಖ್ಯ ಅತಿಥಿಗಳಾಗಿದ್ದರು. ಶೇ.100 ಅಂಕ ಪಡೆದ ಸುಳ್ಯ ತಾಲೂಕಿನ 14 ವಿದ್ಯಾಸಂಸ್ಥೆಗಳ 66 ವಿದ್ಯಾರ್ಥಿಗಳನ್ನು ಕನ್ನಡ ಶಿಕ್ಷಕರನ್ನು ಗೌರವಿಸಲಾಯಿತು. ಕಸಾಪ ಕೋಶಾಧಿಕಾರಿ ದಯಾನಂದ ಆಳ್ವ, ಕಾರ್ಯದರ್ಶಿಗಳಾದ ತೇಜಸ್ವಿ ಕಡಪಲ, ಚಂದ್ರಮತಿ ಕೆ., ಕಾರ್ಯಕ್ರಮ ಸಂಯೋಜಕಿ ಲತಾಶ್ರೀ ಸುಪ್ರೀತ್ ಮೋಂಟಡ್ಕ, ಸುಳ್ಯ ಹೋಬಳಿ ಟಕ ಅಧ್ಯಕ್ಷೆ ಚಂದ್ರಾವತಿ ಬಡ್ಡಡ್ಕ, ಪಂಜ ಹೋಬಳಿ ಟಕ ಅಧ್ಯಕ್ಷ ಬಾಬು ಗೌಡ ಅಚ್ರಪ್ಪಾಡಿ ಉಪಸ್ಥಿತರಿದ್ದರು. ಕೆ.ಆರ್.ಗೋಪಾಲಕೃಷ್ಣ ಆಶಯ ಗೀತೆ ಹಾಡಿದರು. ಲತಾಶ್ರೀ ಸುಪ್ರೀತ್ ಮೋಂಟಡ್ಕ ನಿರೂಪಿಸಿದರು. ರಮೇಶ್ ನೀರಬಿದಿರೆ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net