ಸೇವಾ ನಿವೃತ್ತಿಗೊಂಡ ಜಲಜಾಗೆ ಸನ್ಮಾನ

sanmana
ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿಗೊಂಡ ಜಲಜಾ ಅವರಿಗೆ ಇತ್ತೀಚೆಗೆ ಸನ್ಮಾನ ನಡೆಯಿತು.
Published on

ಬೆಳ್ವೆ: ಇಲ್ಲಿನ ಸುರ‌್ಗೋಳಿ ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿಗೊಂಡ ಜಲಜಾ ಅವರಿಗೆ ಬೆಳ್ವೆ ಸಂದೇಶ್ ಕಿಣಿ ಮೆಮೋರಿಯಲ್ ಸಭಾಂಗಣದಲ್ಲಿ ಇತ್ತೀಚೆಗೆ ಸನ್ಮಾನ ನಡೆಯಿತು.

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಸ್ವತಂತ್ರ ಸಂಘಟನೆ ಉಡುಪಿ ಜಿಲ್ಲಾಧ್ಯಕ್ಷೆ ಫಿಲೋಮಿನಾ, ಬೆಳ್ವೆ ವಲಯ ಅಂಗನವಾಡಿ ಮೇಲ್ವಿಚಾರಕಿ ರೇವತಿ, ಗುಮ್ಮೋಲ ಅಂಗನವಾಡಿ ಕೇಂದ್ರ ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಶಶಿಕಲಾ ಅಲ್ಸೆ ಸೆಟ್ಟೋಳಿ, ಬೆಳ್ವೆ ವಲಯದ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net