More

    ವೀರ ಯೋಧರಿಗೆ ಶ್ರದ್ಧಾಂಜಲಿ

    ವಿಜಯವಾಣಿ ಸುದ್ದಿಜಾಲ ಧಾರವಾಡ
    ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಉಗ್ರರು ಹಾಗೂ ಯೋಧರ ನಡುವೆ ನಡೆದ ಕಾದಾಟದಲ್ಲಿ ಹುತಾತ್ಮರಾದ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಹಾಗೂ ವೀರಯೋಧರಿಗೆ ನಗರದಲ್ಲಿ ಭಾನುವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು.
    ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಾರ್ಗಿಲ್ ಸ್ತೂಪದ ಬಳಿ ಏರ್ಪಡಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ವೀರ ಯೋಧರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ನಮನ ಸಲ್ಲಿಸಲಾಯಿತು.
    ಮುಖಂಡ ಸದಾನಂದ ಡಂಗನವರ ಮಾತನಾಡಿ, ದೇಶದಲ್ಲಿ ಶಾಂತಿ, ಸುರಕ್ಷತೆ ಕಾಪಾಡಲು ನಮ್ಮ ದೇಶದ ಸೈನಿಕರು 24 ಗಂಟೆ ಜಾಗೃತರಾಗಿ ಕಾರ್ಯ ನಿರ್ವಸಹಿಸುತ್ತಿದ್ದಾರೆ. ನಾಗರಿಕರ ರಕ್ಷಣೆ ಮತ್ತು ಶಾಂತಿ ನೆಲೆಸುವಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ. ಸೈನಿಕರ ಸೇವೆಯನ್ನು ಸದಾ ಸ್ಮರಿಸುವ ಕೆಲಸ ನಮ್ಮದಾಗಬೇಕು ಎಂದರು.
    ಸಾಮಾಜಿಕ ಕಾರ್ಯಕರ್ತ ಉದಯ ಯಂಡಿಗೇರಿ ಮಾತನಾಡಿ, ನಾಗರಿಕರ ರಕ್ಷಣೆಗಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ ರಾಜ್ಯದ ಎಂ.ವಿ. ಪ್ರಾಂಜಲ್ ಹಾಗೂ ಇತರ ಸೈನಿಕರ ತ್ಯಾಗ, ಬಲಿದಾನ ಮರೆಯಬಾರದು. ಉಗ್ರಗಾಮಿಗಳನ್ನು ಮಟ್ಟ ಹಾಕಲು ನಮ್ಮ ಗುಪ್ತಚರ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಬೇಕಲ್ಲದೆ, ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಒದಗಿಸಬೇಕು ಎಂದರು.
    ಧಾರವಾಡ ಜಿಲ್ಲಾ ಪೋಲೀಸ್ ಬ್ಯಾಂಡ್ ವಾದ್ಯ ನುಡಿಸುವ ಮೂಲಕ ಗೌರವ ಸೂಚಿಸಿದರು. ಕರ್ನಾಟಕ ಸೇನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಅಮೀನಗಡ, ಬಸವರಾಜ ತಾಳಿಕೋಟಿ, ಪಾರ್ವತಿ ಹಾಲಭಾವಿ, ಪಾಟೀಲ, ಸುರೇಶ ಹಾಲಭಾವಿ, ಮಡಿವಾಳಪ್ಪ ಶಿರೆಣ್ಣವರ, ಮಾಜಿ ಸೈನಿಕರು, ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts