22.8 C
Bengaluru
Saturday, January 18, 2020

ಹಾವೇರಿ ಜಿಲ್ಲೆಗೆ ಸಂಪುಟದಲ್ಲಿ ತ್ರಿಬಲ್ ಧಮಾಕಾ?!

Latest News

ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

PHOTOS| ಕೃಷ್ಣ ಮಠದಲ್ಲಿ ಅದಮಾರು ಪರ್ಯಾಯ ಪರ್ವ ಪ್ರಾರಂಭ ಈಶಪ್ರಿಯ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠಾರೋಹಣ

ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ಅದಮಾರು ಮಠದ ಪರ್ಯಾಯ ಪರ್ವ ಶನಿವಾರ ಪ್ರಾತಃ 5.57ರ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣದ ಮೂಲಕ ಪ್ರಾರಂಭವಾಗಿದೆ.ಜೋಡುಕಟ್ಟೆಯಿಂದ...

ನವದೆಹಲಿಯಲ್ಲಿ ಜನವರಿ 20ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಹಾವೇರಿ ವಿದ್ಯಾರ್ಥಿನಿ ವೇದಾ ಆಯ್ಕೆ

ಹಾವೇರಿ: ಪ್ರಧಾನಿ ನರೇಂದ್ರ ಮೋದಿಯವರೊಂದಿಗಿನ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಹಾವೇರಿ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾಳೆ. ಹಾವೇರಿ ಜಿಲ್ಲೆಯ ಬ್ಯಾಡಗಿ ವಿದ್ಯಾರ್ಥಿನಿ ಪಿ‌. ವೇದಾ ಆಯ್ಕೆಯಾಗಿದ್ದು, ಜನವರಿ 20...

ಹಾವೇರಿ: ಉಪಚುನಾವಣೆಯಲ್ಲಿ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಮತದಾರರು ಭರ್ಜರಿಯಾಗಿ ಗೆಲ್ಲಿಸಿದ್ದು, ಇದೀಗ ಸಂಪುಟದಲ್ಲಿ ಜಿಲ್ಲೆಗೆ ತ್ರಿಬಲ್ ಧಮಾಕಾದ ಅವಕಾಶಗಳು ಹೆಚ್ಚಿವೆ.

ಪೊಲೀಸ್ ಅಧಿಕಾರಿಯಾಗಿ ನಂತರ ಚಿತ್ರರಂಗ ಪ್ರವೇಶಿಸಿ ಅಲ್ಲಿಂದ ರಾಜಕೀಯ ರಂಗಕ್ಕೆ ಬಂದ ಬಿ.ಸಿ. ಪಾಟೀಲ ಅವರು ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುವ ಜೊತೆಗೆ ರಾಜ್ಯ ಸಂಪುಟದಲ್ಲಿ ಸಚಿವ ಸ್ಥಾನ ಸ್ವೀಕರಿಸುವುದು ಪಕ್ಕಾ ಆಗಿದೆ. ಇವರೊಂದಿಗೆ ರಾಣೆಬೆನ್ನೂರನಲ್ಲಿ ಶಾಸಕರಾಗಿ ಆಯ್ಕೆಯಾಗಿ ನಂತರ ಬಿಜೆಪಿ ಬೆಂಬಲಿಸಿ ಅನರ್ಹಗೊಂಡಿರುವ ಆರ್. ಶಂಕರಗೂ ಎಂಎಲ್​ಸಿ ಮಾಡಿ ಸಚಿವ ಸ್ಥಾನ ನೀಡುವುದಾಗಿ ಸಿಎಂ ಘೊಷಣೆ ಮಾಡಲಾಗಿದೆ. ಸಿಎಂ ಮಾತಿನಂತೆ ನಡೆದರೆ ಮುಂದಿನ ಸಂಪುಟ ವಿಸ್ತರಣೆಯಲ್ಲಿ ಬಿ.ಸಿ. ಪಾಟೀಲ ಜೊತೆಗೆ ಆರ್. ಶಂಕರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವುದು ಪಕ್ಕಾ ಆಗಲಿದೆ. ಇವರಲ್ಲದೆ, ಈಗಾಗಲೇ ಶಿಗ್ಗಾಂವಿ ಶಾಸಕ ಬಸವರಾಜ ಬೊಮ್ಮಾಯಿ ಗೃಹ ಸಚಿವರಾಗಿದ್ದಾರೆ. ಹೀಗಾಗಿ ಬಿಎಸ್​ವೈ ಸಂಪುಟದಲ್ಲಿ ಜಿಲ್ಲೆಯ ಮೂವರು ಸಚಿವ ಸ್ಥಾನ ಪಡೆದ ಗರಿಮೆ ಜಿಲ್ಲೆಗೆ ಲಭಿಸಲಿದೆ.

ಬಿಜೆಪಿ ಅಧಿಕಾರದಲ್ಲಿ ಜಿಲ್ಲೆಗೆ ಶುಕ್ರದೆಸೆ:

ಜಿಲ್ಲೆಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಲೊಮ್ಮೆ ಸಚಿವ ಸ್ಥಾನದ ವಿಷಯದಲ್ಲಿ ಶುಕ್ರದೆಸೆ ಬಂದಿದೆ. 2008ರಲ್ಲಿ ಬಸವರಾಜ ಬೊಮ್ಮಾಯಿ, ಸಿಎಂ ಉದಾಸಿ ಸಚಿವರಾಗಿದ್ದರು. 2013ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಸಮಯದಲ್ಲಿ ಜಿಲ್ಲೆಯ ಶಾಸಕರಿಗೆ ಆರಂಭದಲ್ಲಿ ಸಚಿವ ಸ್ಥಾನ ಸಿಗಲೇ ಇಲ್ಲ. ಹೊರ ಜಿಲ್ಲೆಯ ಇಬ್ಬರು ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಕೆಲಸ ನಿರ್ವಹಿಸಿದ್ದರು. ಎರಡು ವರ್ಷದ ನಂತರ ಜಿಲ್ಲೆಯ ಮನೋಹರ ತಹಸೀಲ್ದಾರ್​ಗೆ ಸಚಿವ ಸ್ಥಾನ ಸಿಕ್ಕಿತ್ತು. ಅವರ ನಂತರ ರುದ್ರಪ್ಪ ಲಮಾಣಿ ಸಚಿವರಾಗಿದ್ದರು. ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗಲೇ ಇಲ್ಲ. ಜಿಲ್ಲೆಯಲ್ಲಿ ಬಿ.ಸಿ. ಪಾಟೀಲ ಒಬ್ಬರೇ ಕಾಂಗ್ರೆಸ್ ಶಾಸಕರಾಗಿದ್ದರೂ ಸಚಿವ ಸ್ಥಾನ ಕೊಡಲಿಲ್ಲ. ಇದೇ ವಿಷಯ ಗಂಭೀರವಾಗಿ ಬಿ.ಸಿ. ಪಾಟೀಲರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತಾಯಿತು. ಇದರಿಂದ ಸಂಪೂರ್ಣ ಜಿಲ್ಲೆಯೇ ಇಂದು ಕಾಂಗ್ರೆಸ್ ಮುಕ್ತವಾಯಿತು. ಜುಲೈನಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆಯೇ ಬಸವರಾಜ ಬೊಮ್ಮಾಯಿಯವರು ಸಚಿವರಾಗಿದ್ದಾರೆ. ಉಪಚುನಾವಣೆ ಫಲಿತಾಂಶದ ನಂತರ ಇನ್ನೇನು ಸಂಪುಟ ವಿಸ್ತರಣೆಯಾಗಲಿದ್ದು, ಮತ್ತಿಬ್ಬರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆಗಳು ಹೆಚ್ಚಿದೆ.

ಮೂರು ಪಕ್ಷಗಳಲ್ಲಿ ಗೆಲುವು ಕಂಡ ಬಿಸಿಪಿ:

ಬಿ.ಸಿ. ಪಾಟೀಲರಿಗೆ ಹಿರೇಕೆರೂರ ಮತದಾರರು ವೈಯಕ್ತಿಕ ವರ್ಚಸ್ಸಿನ ಮೇಲೆಯೇ ಕೈ ಹಿಡಿಯುತ್ತ ಬಂದಿರುವುದು ಮತ್ತೊಮ್ಮೆ ಸಾಬೀತಾಗಿದೆ. 2004ರಲ್ಲಿ ಹಿರೇಕೆರೂರ ಕ್ಷೇತ್ರದಲ್ಲಿ ಜೆಡಿಎಸ್​ನಿಂದ ಮೊದಲ ಬಾರಿಗೆ ಅಖಾಡಕ್ಕಿಳಿದು ಗೆಲುವು ಸಾಧಿಸಿದರು. 2008ರಲ್ಲಿ ಕಾಂಗ್ರೆಸ್ ಸೇರಿ ಅಲ್ಲಿಯೂ ಜಯಭೇರಿ ಬಾರಿಸಿದರು. 2013ರಲ್ಲಿ ಕಾಂಗ್ರೆಸ್​ನಿಂದ ಸೋಲು ಕಂಡರೂ, 2018ರಲ್ಲಿ ಮೂರನೇ ಬಾರಿಗೆ ಕಾಂಗ್ರೆಸ್​ನಿಂದ ಆಯ್ಕೆಯಾದರು. ಇದೀಗ ನಾಲ್ಕನೇ ಬಾರಿ ಬಿಜೆಪಿಯಿಂದ ಆಯ್ಕೆಯಾಗಿದ್ದಾರೆ. ಹೀಗಾಗಿ, 15 ವರ್ಷಗಳ ಅವಧಿಯಲ್ಲಿ ಮೂರು ಪಕ್ಷಗಳನ್ನು ಸುತ್ತಿ ಬಂದು ಮೂರು ಪಕ್ಷಗಳಿಂದಲೂ ಶಾಸಕರಾಗಿ ಆಯ್ಕೆಯಾದ ಗರಿಮೆ ಬಿ.ಸಿ. ಪಾಟೀಲರ ಮುಡಿಗೇರಿದೆ.

ಮಹತ್ವದ ಖಾತೆ ಮೇಲೆ ಕೌರವನ ಕಣ್ಣು

ಬಿ.ಸಿ. ಪಾಟೀಲರು ಸಂಪುಟದಲ್ಲಿ ಮಹತ್ವದ ಖಾತೆಯ ಜೊತೆಗೆ ಜಿಲ್ಲೆಯ ಉಸ್ತುವಾರಿ ವಹಿಸಿಕೊಳ್ಳುವ ಲಕ್ಷಣಗಳು ದಟ್ಟವಾಗಿವೆ. ಇದಕ್ಕೆ ಪುಷ್ಟಿ ಎನ್ನುವಂತೆ ಬಸವರಾಜ ಬೊಮ್ಮಾಯಿಯವರಿಗೆ ಉಡುಪಿ ಜಿಲ್ಲೆಯ ಕಾಯಂ ಉಸ್ತುವಾರಿ ವಹಿಸಿ, ಹಾವೇರಿ ಜಿಲ್ಲೆಯ ಪ್ರಭಾರ ಉಸ್ತುವಾರಿ ವಹಿಸಲಾಗಿದೆ. ಬಿ.ಸಿ. ಪಾಟೀಲರು ಲೋಕೋಪಯೋಗಿ, ಗೃಹ, ಜಲಸಂಪನ್ಮೂಲ ಇಲ್ಲವೇ ಇಂಧನ ಖಾತೆಯ ಮೇಲೆ ಕಣ್ಣಿಟ್ಟಿದ್ದಾರೆ.

ಮರಳಿ ಗೂಡು ಸೇರುವರೇ ಆರ್. ಶಂಕರ?

ಆರ್. ಶಂಕರ ಸದ್ಯ ರಾಣೆಬೆನ್ನೂರನಲ್ಲಿಯೇ ವಾಸವಾಗಿದ್ದಾರೆ, ಅವರು 2018ರಲ್ಲಿ ಶಾಸಕರಾಗಿ ಆಯ್ಕೆಯಾದ ನಂತರ ಸರಿಯಾಗಿ ಕ್ಷೇತ್ರಕ್ಕೆ ಭೇಟಿ ನೀಡಲಿಲ್ಲ ಹಾಗೂ ಜನರ ವಿಶ್ವಾಸ ಗಳಿಸಿರಲಿಲ್ಲ ಎಂಬ ಆಪಾದನೆಗಳು ಕೇಳಿಬಂದವು. ಇದೇ ಕಾರಣಕ್ಕೆ ಅವರು ಈ ಬಾರಿಯ ಉಪಚುನಾವಣೆಯ ಸ್ಪರ್ಧೆಯಿಂದಲೂ ಹಿಂದೆ ಸರಿದರು ಎನ್ನಲಾಗಿದೆ. ಈಗ ವಿಧಾನ ಪರಿಷತ್​ಗೆ ಶಂಕರ ಅವರು ಆಯ್ಕೆಯಾಗಿ ಸಚಿವರಾಗುವ ಸಾಧ್ಯತೆಗಳಿವೆ. ಈಗಾಗಲೇ ರಾಣೆಬೆನ್ನೂರ ಕ್ಷೇತ್ರದಲ್ಲಿ ಅರುಣಕುಮಾರ ಸಾಕಷ್ಟು ಮತಗಳ ಅಂತರದಿಂದ ಜಯಭೇರಿ ಬಾರಿಸಿರುವುದರಿಂದ ಮುಂದಿನ ಸಾರಿ ವಿಧಾನಸಭೆ ಚುನಾವಣೆಗೆ ಶಂಕರ ಅವರಿಗೆ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ಸಿಗುವ ಸಾಧ್ಯತೆಗಳು ತೀರ ವಿರಳ. ಒಂದು ವೇಳೆ ಈಗ ವಿಧಾನ ಪರಿಷತ್ ಸದಸ್ಯರಾಗಿ ಸಚಿವರಾದರೆ ಶಂಕರ ಅವರು ತಮ್ಮ ಮೂಲ ಕಾರ್ಯಕ್ಷೇತ್ರವಾದ ಬೆಂಗಳೂರಿಗೆ ಮರಳುತ್ತಾರೋ ಅಥವಾ ರಾಣೆಬೆನ್ನೂರಿನಲ್ಲಿ ಇದ್ದುಕೊಂಡು ರಾಜಕಾರಣ ಮಾಡುತ್ತಾರೋ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ತಲೆದೋರಿದೆ.

ಇಂತಹುದೇ ಸಚಿವ ಸ್ಥಾನ ಬೇಕು ಎಂದು ನಾನೆಲ್ಲಿಯೂ ಬೇಡಿಕೆಯಿಟ್ಟಿಲ್ಲ. ಗೃಹ, ನೀರಾವರಿ, ಲೋಕೋಪಯೋಗಿ, ಇಂಧನ, ಕೃಷಿ ಸೇರಿ ಯಾವುದೇ ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ. ಅಭಿವೃದ್ಧಿಯೇ ನಮ್ಮ ಗುರಿ ಅಷ್ಟೆ.

| ಬಿ.ಸಿ. ಪಾಟೀಲ, ಹಿರೇಕೆರೂರ ಬಿಜೆಪಿ, ಶಾಸಕ

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...