

ಬೆಂಗಳೂರು: ಪುನೀತ್ ರಾಜಕುಮಾರ್ ಮತ್ತು ಪವನ್ ಕುಮಾರ್ ಕಾಂಬಿನೇಷನ್ ‘ದ್ವಿತ್ವ’ ಸಿನಿಮಾಕ್ಕೆ ಬಹುಭಾಷಾ ನಟಿ ತ್ರಿಷಾ ಕೃಷ್ಣನ್ ನಾಯಕಿ ಎಂದು ಈ ಹಿಂದೆಯೇ ಸುದ್ದಿಯಾಗಿತ್ತು. ಆದರೆ, ಅಧಿಕೃತ ಘೋಷಣೆ ಆಗಿರಲಿಲ್ಲ. ಇದೀಗ ತ್ರಿಷಾ ನಟಿಸುವುದು ಪಕ್ಕಾ ಆಗಿದೆ.
ಇದನ್ನೂ ಓದಿ: ‘ಸರಕಾರು ವಾರಿ ಪಾಟ’ ಸಹ ಮುಂದಿನ ಸಂಕ್ರಾಂತಿಗೆ!
2014ರಲ್ಲಿ ಪುನೀತ್ ನಟನೆಯ ‘ಪವರ್’ ಚಿತ್ರದ ಮೂಲಕ ಚಂದನವನಕ್ಕೆ ಪದಾರ್ಪಣೆ ಮಾಡಿದ್ದ ತ್ರಿಷಾ, ಅದಾದ ಬಳಿಕ ಬೇರಾವ ಕನ್ನಡ ಸಿನಿಮಾದಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಸುದೀರ್ಘ ಏಳು ವರ್ಷಗಳ ಬಳಿಕ ಮತ್ತೆ ಕನ್ನಡಕ್ಕೆ ಬರುತ್ತಿದ್ದಾರೆ. ಹೊಂಬಾಳೆ ಫಿಲಂಸ್ ಬ್ಯಾನರ್‌ನಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದ್ದು, ಸೆಪ್ಟೆಂಬರ್‌ನಲ್ಲಿ ಶೂಟಿಂಗ್ ಶುರುವಾಗಲಿದೆ.
‘ದ್ವಿತ್ವ’ ಸೈಕಲಾಜಿಕಲ್ ಥ್ರಿಲ್ಲರ್ ಶೈಲಿಯ ಚಿತ್ರ. ಈ ಹಿಂದೆಂದೂ ಕಾಣಿಸದ ಹೊಸ ಅವತಾರದಲ್ಲಿ ಈ ಚಿತ್ರದ ಮೂಲಕ ಪುನೀತ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಪಾತ್ರವರ್ಗದ ಆಯ್ಕೆ ಶುರುವಾಗಿದ್ದು, ಇತ್ತ ‘ಜೇಮ್ಸ್’ ಚಿತ್ರದ ಚಿತ್ರೀಕರಣದಲ್ಲಿ ಪುನೀತ್ ಭಾಗವಹಿಸಿದರೆ, ತಮಿಳಿನ ನಾಲ್ಕು ಸಿನಿಮಾಗಳಲ್ಲಿ ತ್ರಿಷಾ ಬಿಜಿಯಾಗಿದ್ದಾರೆ.