ಯಲ್ಲಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ತಾಲೂಕಿನ ಅರಬೈಲ್ ಘಟ್ಟದ ಶಿರಲೆ ಕ್ರಾಸ್ ಬಳಿ ನಡೆದಿದೆ.
ಲಾರಿ ಚಾಲಕ ಜಾವಿದ್ ರೆಹಮತುಲ್ಲಾ ಹಳಿಯಾಳಕರ್ ಗಾಯಗೊಂಡಿದ್ದಾನೆ. ಈತ ಅಂಕೋಲಾ ಕಡೆಯಿಂದ ಯಲ್ಲಾಪುರ ಕಡೆಗೆ ಲಾರಿ ಚಲಾಯಿಸಿಕೊಂಡು ಬಂದಿದ್ದು ಶಿರಲೆ ಕ್ರಾಸ್ ಬಳಿ ಲಾರಿ ಪಲ್ಟಿಯಾಗಿದೆ. ಲಾರಿ ಜಖಂಗೊಂಡಿದ್ದು, ಲಾರಿಯಲ್ಲಿದ್ದ ಪೊಲ್ಸ್ ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.
ಗಾಯಾಳು ಚಾಲಕನಿಗೆ ಯಲ್ಲಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಘಟನೆ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
.