ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು, ತಲೆ-ದೇಹ ಇಬ್ಭಾಗ!

Truck and car accident
Published on

ಚಿತ್ರದುರ್ಗ: ಹಿರಿಯೂರು ತಾಲೂಕಿನ ಹರ್ತಿಕೋಟೆ ಮತ್ತು ಬಾಲೇನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ-150ಎ ನಲ್ಲಿ ಶನಿವಾರ ಸಂಜೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಚಳ್ಳಕೆರೆ ತಾಲೂಕಿನ ಕರಿಕೆರೆ ಗ್ರಾಮದ ಕಾರು ಚಾಲಕ ಪ್ರಭಾಕರ್(38), ವೇಣು(20) ಮತ್ತು ನಾಗವೇಣಿ(45) ಮೃತ ದುರ್ದೈವಿಗಳು. ವಿಶಾಲಾಕ್ಷಮ್ಮ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಳ್ಳಕೆರೆಯಿಂದ ಬೆಂಗಳೂರು ಮಾರ್ಗವಾಗಿ ಪ್ರಭಾಕರ್, ವೇಣು, ನಾಗವೇಣಿ ಮತ್ತು ವಿಶಾಲಾಕ್ಷಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿದ ಕಾರು ಹಿರಿಯೂರು ಕಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಹೊಡೆದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಚ್ಚಾಗಿದ್ದು, ಚಾಲಕನ ತಲೆ ಮತ್ತು ದೇಹ ಬೇರ್ಪಟ್ಟಿದೆ. ಅಪಘಾತದ ದೃಶ್ಯ ಭೀಕರವಾಗಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net