ಹೆದ್ದಾರಿಯಲ್ಲಿ LPG ಸಿಲಿಂಡರ್‌ಗಳು ತುಂಬಿದ ಟ್ರಕ್‌ ಭಾರೀ ಸ್ಫೋಟ: ವಿಡಿಯೋ ವೈರಲ್​

Untitled design - 2025-10-08T072601.928
Published on

ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಎಲ್‌ಪಿಜಿ(LPG) ಸಿಲಿಂಡರ್‌ಗಳಿಂದ ತುಂಬಿದ ಟ್ರಕ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಭಾರಿ ಬೆಂಕಿ ಮತ್ತು ಸ್ಫೋಟಗಳು ಸಂಭವಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ಬೆಂಕಿ ಹೊತ್ತಿಕೊಂಡ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್​ ಆಗಿವೆ.

ಹೆದ್ದಾರಿಯಲ್ಲಿ ಮಂಗಳವಾರ ರಾತ್ರಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್ ಮತ್ತೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ನಂತರ ಈ ಭಾರೀ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಗ್ಯಾಸ್ ಸಿಲಿಂಡರ್‌ಗಳು ಸಿಡಿದು ಹಲವಾರು ಸ್ಫೋಟಗಳು ಸಂಭವಿಸಿದವು, ಇದು ಹತ್ತಿರದ ವಾಹನಗಳ ಮೇಲೆ ಪರಿಣಾಮ ಬೀರಿತು. ಜ್ವಾಲೆಗಳು ಮತ್ತು ಸ್ಫೋಟಗಳ ಶಬ್ದವು ಹಲವಾರು ಕಿಲೋಮೀಟರ್ ದೂರದಿಂದಲೂ ಗೋಚರಿಸುತ್ತಿತ್ತು ಮತ್ತು ಕೇಳಿಸುತ್ತಿತ್ತುವ ಎಂದು ಪೊಲೀಸರು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಅವರು ಉಪಮುಖ್ಯಮಂತ್ರಿ ಪ್ರೇಮ್ ಚಂದ್ ಬೈರ್ವಾ ಮತ್ತು ಶಾಸಕ ಕೈಲಾಶ್ ವರ್ಮಾ ಅವರನ್ನು ಪರಿಸ್ಥಿತಿಯನ್ನು ಅವಲೋಕಿಸಲು ಸ್ಥಳಕ್ಕೆ ತಲುಪುವಂತೆ ಸೂಚಿಸಿದ್ದಾರೆ. ಜೈಪುರ ಜಿಲ್ಲಾಧಿಕಾರಿ ಮತ್ತು ಇತರ ಹಿರಿಯ ಅಧಿಕಾರಿಗಳು ಸಹ ಸ್ಥಳಕ್ಕೆ ತೆರಳುತ್ತಿದ್ದಾರೆ. ಆದರೆ, ಈವರೆಗೂ ಸಾವಿನ ಬಗ್ಗೆ ಯಾವುದೇ ವರದಿಯಾಗಿಲ್ಲ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net