More

    ಪ್ರತಿ ಜಿಲ್ಲೆಯಲ್ಲೂ ಟ್ರಕ್ ಟರ್ಮಿನಲ್: ವೀರಯ್ಯ

    ಶಿವಮೊಗ್ಗ: ವಾಹನಗಳ ಸಂಚಾರ ದಟ್ಟಣೆ, ವಾಯುಮಾಲಿನ್ಯ ನಿಯಂತ್ರಣ ಹಾಗೂ ಅಪಘಾತ ತಡೆಗೆ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಟ್ರಕ್ ಟರ್ಮಿನಲ್ ಅವಶ್ಯಕತೆ ಇದ್ದು, ಪ್ರಸ್ತುತ ಟರ್ಮಿನಲ್‌ಗಳಿಲ್ಲದೆ ಎಲ್ಲೆಂದರಲ್ಲಿ ಲಾರಿ ನಿಲ್ಲಿಸುವುದನ್ನು ನಿಯಂತ್ರಿಸಲು ಸೂಕ್ತ ಕಾನೂನು ಜಾರಿಗೆ ತರುವ ಚಿಂತನೆ ನಡೆದಿದೆ ಎಂದು ಡಿ.ದೇವರಾಜ ಅರಸು ಟರ್ಮಿನಲ್ ಅಧ್ಯಕ್ಷ ಡಿ.ಎಸ್.ವೀರಯ್ಯ ತಿಳಿಸಿದರು.
    ಈಗಾಗಲೇ ಬೆಂಗಳೂರಿನ ಯಶವಂತಪುರದಲ್ಲಿ 15 ಎಕರೆ, ಮೈಸೂರಿನಲ್ಲಿ 15 ಎಕರೆ, ಧಾರವಾಡದಲ್ಲಿ 7.26 ಎಕರೆ ಮತ್ತು ಬೆಂಗಳೂರಿನ ಉತ್ತರ ತಾಲೂಕಿನಲ್ಲಿ 13 ಎಕರೆ ಜಾಗದಲ್ಲಿ ಸುಸಜ್ಜಿತ ಟ್ರಕ್ ಟರ್ಮಿನಲ್‌ಗೆ ನಿರ್ಮಿಸಿದ್ದು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಹುಬ್ಬಳ್ಳಿ, ದಾಂಡೇಲಿ, ಕೋಲಾರ ಸೇರಿ ರಾಜ್ಯದ 4 ಕಡೆ ಜಾಗ ಗುರುತಿಸಿದ್ದು ಟರ್ಮಿನಲ್ ನಿರ್ಮಾಣ ಮಾಡಲಾಗಿದೆ. ಗೋಮಾಳ, ಕಂದಾಯ ಭೂಮಿ ದೊರೆಯದಿದ್ದಲ್ಲಿ ಖಾಸಗಿ ವ್ಯಕ್ತಿಗಳಿಂದ ಭೂಮಿ ಖರೀದಿಸಿ ಪಿಪಿಪಿ ಮಾದರಿಯಲ್ಲಿ ಟರ್ಮಿನಲ್ ನಿರ್ಮಿಸಲಾಗುವುದು. ಅವಕಾಶವಿದ್ದಲ್ಲಿ ಖಾಸಗಿ ಮಾಲೀಕರು ಅಥವಾ ಹೂಡಿಕೆದಾರರ ನಡುವೆ ಒಪ್ಪಂದ ಮಾಡಿಕೊಂಡು ಟರ್ಮಿನಲ್ ನಿರ್ಮಿಸಲು ಅವಕಾಶ ಒದಗಿಸಲಾಗುವುದು ಎಂದು ಹೇಳಿದರು.
    ಶಿವಮೊಗ್ಗದಲ್ಲೂ ಸುಸಜ್ಜಿತ ಟರ್ಮಿನಲ್ ನಿರ್ಮಿಸುವ ಉದ್ದೇಶ ಹೊಂದಿದ್ದು ಅದಕ್ಕಾಗಿ 25ರಿಂದ 30 ಎಕರೆ ಜಾಗ ಗುರುತಿಸುವಂತೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಸೂಡಾ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಎಡಿಸಿ ಡಾ. ನಾಗೇಂದ್ರ ಹೊನ್ನಳ್ಳಿ, ಶಿವಮೊಗ್ಗ ಉಪ ವಿಭಾಗಾಧಿಕಾರಿ ಟಿ.ವಿ.ಪ್ರಕಾಶ್, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಗ್ರೇಡ್-2 ತಹಸೀಲ್ದಾರ್ ಗಣೇಶ್, ಕೆಐಎಡಿಬಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts