

ಚಿಕ್ಕಬಳ್ಳಾಪುರ: ತಾಲೂಕಿನ ದೇವಸ್ಥಾನ ಹೊಸಹಳ್ಳಿ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಈ ದೃಶ್ಯ ಕಂಡ ಜನತೆ ಬೆಚ್ಚಿಬಿದ್ದಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ. ಮತ್ತೊಬ್ಬನ ಸ್ಥಿತಿ ಚಿಂತಾಜನಕವಾಗಿದೆ. ಲಾರಿಯ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಶವಗಳು ನೇತಾಡುತ್ತಿದ್ದವು. ಮೃತದೇಹಗಳನ್ನು ಕ್ರೇನ್ ಮೂಲಕ ಹೊರ ತೆಗೆದು ಶವಾಗಾರಕ್ಕೆ ರವಾನಿಸಲಾಗಿದೆ.
ಅಪಘಾತದಲ್ಲಿ ಸಾವಿಗೀಡಾದವರನ್ನು ಉತ್ತರ ಪ್ರದೇಶದ ಪ್ರಯಾಗ್ ಮೂಲದ ಮಹಮದ್ ಆಲಿ ಮತ್ತು ಮಹಮದ್ ರಿಯಾನ್ ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುರವಾರ ಮಹಾಲಯಅಮಾವಾಸ್ಯೆ. ಈ ದಿನವೇ ಸಂಭವಿಸಿದ ಭೀಕರ ಅಪಘಾತಕ್ಕೆ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.