More

    ಖಲಿಸ್ತಾನಿ ಭಯೋತ್ಪಾದಕನ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ: ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ

    ಕೆನಡಾ: ಕೆನಡಾದ ಗುರುದ್ವಾರದ ಪಾರ್ಕಿಂಗ್ ಸ್ಥಳದಲ್ಲಿ ಖಾಲಿಸ್ತಾನ್ ಟೈಗರ್ ಫೋರ್ಸ್ (KTf) ಮುಖ್ಯಸ್ಥ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಹಿಂದೆ ಭಾರತ ಸರ್ಕಾರದ ಕೈವಾಡವಿರುವ ಬಗ್ಗೆ ದೇಶದ ಭದ್ರತಾ ಏಜೆನ್ಸಿಗಳು ತನಿಖೆ ನಡೆಸುತ್ತಿವೆ ಎಂದು ಕೆನೆಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ್ದಾರೆ.

    ಭಾರತ ಸರ್ಕಾರಕ್ಕೆ ಬೇಕಾಗಿದ್ದ ಹರ್ದೀಪ್ ಸಿಂಗ್ ನಿಜ್ಜರ್​ನನ್ನು ಈ ವರ್ಷ ಜೂನ್ 18ರಂದು ಗುಂಡಿನ ದಾಳಿಯಲ್ಲಿ ಹತ್ಯೆ ಮಾಡಲಾಗಿತ್ತು. ಸರ್ರೆಯ ಗುರುದ್ವಾರದ ಹೊರಗೆ ನಿಜ್ಜರ್‌ನನ್ನು ಗುಂಡಿಕ್ಕಿ ಕೊಲೆ ಮಾಡಲಾಗಿತ್ತು.

    ಒಟ್ಟಾವಾದಲ್ಲಿ ಹೌಸ್ ಆಫ್ ಕಾಮನ್ಸ್‌ನಲ್ಲಿ ಮಾತನಾಡಿದ ಟ್ರುಡೊ ಕೆನಡಾದ ಪ್ರಜೆ ಹರ್ದೀಪ್ ಸಿಂಗ್ ನಿಜ್ಜರ್ ಅವರ ಹತ್ಯೆಯ ಹಿಂದೆ ಭಾರತ ಸರ್ಕಾರದ ಏಜೆಂಟ್​ಗಳ ಕೈವಾಡವಿರುವ ಬಗ್ಗೆ ತನಿಖೆ ನಡೆಸುತ್ತಿವೆ ಎಂದು ಸದನಕ್ಕೆ ಮಾಹಿತಿ ನೀಡಿದ್ದಾರೆ.

    ಸ್ಪಷ್ಟನೆ ನೀಡಬೇಕು

    ಭಾರತದ ಆತಿಥ್ಯದಲ್ಲಿ ನಡೆದ ಜಿ-20 ಶೃಂಗಸಭೆಯಲ್ಲಿ ನಾನು ಈ ವಿಚಾರವನ್ನು ಭಾರತದ ಪ್ರಧಾನಿ ಮೋದಿ ಅವರ ಗಮನಕ್ಕೆ ತಂದಿದ್ದೇನೆ. ಹತ್ಯೆ ಸಂಬಂಧ ತನಿಖೆ ಪ್ರಗತಿಯಲ್ಲಿದ್ದು, ಭಾರತ ಸರ್ಕಾರವು ಕೆನಡಾ ತನಿಖೆಗೆ ಸಹಕರಿಸಬೇಕು. ವಿದೇಶಗಳಲ್ಲಿ ಈ ರೀತಿಯ ಕಾರ್ಯಾಚರಣೆಗಳ ಕುರಿತು ಸ್ಪಷ್ಟನೆ ನೀಡಬೇಕು ಎಂದಿದ್ದಾರೆ.

    hardeep singh nijjar

    ಇದನ್ನೂ ಓದಿ: ತೆಲಂಗಾಣದಲ್ಲಿ ಕಾಂಗ್ರೆಸ್​ ಸರ್ಕಾರ ನೋಡುವುದೇ ನನ್ನ ಕನಸು: ಸೋನಿಯಾ ಗಾಂಧಿ

    ಉಗ್ರಗಾಮಿ ಅಂಶಗಳು ನಡೆಸುತ್ತಿರುವ ದೇಶ ವಿರೋಧಿ ಚಟುವಟಿಕೆಗಳಿಗೆ ಪ್ರಧಾನಿ ಮೋದಿ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಖಲಿಸ್ತಾನಿಗಳು ಪ್ರತ್ಯೇಕವಾದವನ್ನು ಉತ್ತೇಜಿಸುತ್ತಿದ್ಧಾರೆ. ರಾಜತಾಂತ್ರಿಕ ಇಲಾಖೆ ಹಾಗೂ ಅಧಿಕಾರಿಗಳ ವಿರುದ್ಧ ಹಿಂಸೆಯನ್ನು ಪ್ರಚೋದಿಸುತ್ತಿದ್ದಾರೆ. ಕೆನಡಾದಲ್ಲಿ ಭಾರತೀಯರು ಹಾಗೂ ದೇವಾಲಯಗಳ ಮೇಲೆ ದಾಳಿ ಮಾಡಲಾಗುತ್ತಿದೆ. ಅಪೃಆಧ, ಡ್ರಗ್​ ಸಿಂಡಿಕೇಟ್​ ಮತ್ತು ಮಾನವ ಕಳ್ಳಸಾಗಾಣೆಯವರೊಂದಿಗೆ ಉಗ್ರಗಾಮಿ ಸಂಘಟನೆಗಳು ಭಾಗಿಯಾಗಿವೆ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ.

    ಸಾರ್ವಭೌಮತ್ವದ ಉಲ್ಲಂಘನೆಯಾಗುತ್ತದೆ

    ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಬಳಿಕ ಭಾರತೀಯ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಚಾಟನೆ ಮಾಡಲಾಗಿದೆ. ಒಂದು ವೇಳೆ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತ ಸರ್ಕಾರದ ಕೈವಾಡವಿದೆ ಎಂದು ಸಾಬೀತಾದಲ್ಲಿ ಸಾರ್ವಭೌಮತ್ವದ ಉಲ್ಲಂಘನೆಯಾಗುತ್ತದೆ. ಈ ನಿಟ್ಟಿನಲ್ಲಿ ನಾವು ಭಾರತೀಯ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಚಾಟಿಸಿದ್ದೇವೆ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ತಿಳಿಸಿದ್ದಾರೆ.

    2022ರಲ್ಲಿ ಜಲಂಧರ್​ನಲ್ಲಿ ಅರ್ಚಕರೊಬ್ಬರ ಹತ್ಯೆ ಪ್ರಕರಣ ಸಂಬಂಧ ಖಾಲಿಸ್ತಾನ್ ಟೈಗರ್ ಫೋರ್ಸ್ (KTf) ಮುಖ್ಯಸ್ಥ ಹರ್ದೀಪ್ ಸಿಂಗ್ ನಿಜ್ಜರ್ ಹುಡುಕಿಕೊಟ್ಟವರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) 10 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts