More

    ಸತ್ಯವೇ ನನ್ನ ಅಸ್ತ್ರ, ಸತ್ಯವೇ ನನ್ನ ಆಸರೆ; ರಾಹುಲ್​ ಗಾಂಧಿ

    ಗುಜರಾತ್​: ‘ಮೋದಿ ಉಪನಾಮ’ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್‌ನ ಸೂರತ್‌ನ ಸೆಷನ್ಸ್ ನ್ಯಾಯಾಲಯವು ಕಳೆದ ತಿಂಗಳು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಮೇಲ್ಮನವಿ ಸಲ್ಲಿಸಿದ್ದರು. ಸೋಮವಾರ ಅರ್ಜಿ ವಿಚಾರಣೆ ನಡೆಸಿದ ಸೂರತ್ ನ್ಯಾಯಾಲಯ ಜಾಮೀನು ವಿಸ್ತರಣೆ ಮಾಡಿದೆ . ಹಾಗೂ ಈ ವಿಚಾರಣೆಯನ್ನು ಏಪ್ರಿಲ್​​ 13ಕ್ಕೆ ಮುಂದೂಡಿದೆ.

    ರಾಹುಲ್ ಗಾಂಧಿಯ ಜಾಮೀನನ್ನು ಏಪ್ರಿಲ್ 13ರವರೆಗೆ ವಿಸ್ತರಿಸಿದ ನ್ಯಾಯಾಲಯವು ಮುಂದಿನ ವಿಚಾರಣೆಯ ದಿನಾಂಕ ಏಪ್ರಿಲ್ 13 ರಂದು ಅವರ ಮನವಿಯನ್ನು ಕೈಗೆತ್ತಿಕೊಳ್ಳಲಿದೆ. ಕ್ರಿಮಿನಲ್ ಮಾನನಷ್ಟ ಪ್ರಕರಣದಿಂದಾಗಿ ರಾಹುಲ್ ಗಾಂಧಿ ಅವರನ್ನು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಇದರ ಜೊತೆಗೆ ಅವರಿಗೆ ನೀಡಲಾದ ದೆಹಲಿ ಬಂಗಲೆಯನ್ನು ಕಿತ್ತುಕೊಳ್ಳಲಾಗಿದೆ.

     ಇದನ್ನೂ ಓದಿ:  VIDEO: ನಟಿ ನಯನತಾರಾ ಮಕ್ಕಳ ಪೂರ್ಣ ಹೆಸರೇನು ಗೊತ್ತಾ?

    ತೀರ್ಪಿನ ಬಳಿಕ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ” ‘ಮಿತ್ರಕಾಲ’ದ ವಿರುದ್ಧ ಪ್ರಜಾಪ್ರಭುತ್ವ ಉಳಿಸುವ ಹೋರಾಟ ಇದಾಗಿದೆ. ಈ ಹೋರಾಟದಲ್ಲಿ ಸತ್ಯವೇ ನನ್ನ ಅಸ್ತ್ರ, ಸತ್ಯವೇ ನನ್ನ ಆಸರೆ..!” ಎಂದು ಟ್ವೀಟ್ ಮಾಡಿದ್ದಾರೆ.

    ನಡೆದಿದ್ದೇನು?: 2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮೋದಿ ಉಪನಾಮದ ಕುರಿತು ವ್ಯಂಗ್ಯವಾಡಿದ್ದರು. ಈ ಸಂಬಂಧ ಸೂರತ್​​ ನ್ಯಾಯಾಲಯದಲ್ಲಿ ಬಿಜೆಪಿ ಶಾಸಕ ಪೂರ್ಣೇಶ್​ ಮೋದಿ ರಾಹುಲ್​ ಗಾಂಧಿ ವಿರುದ್ದ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಮಾರ್ಚ್​ 23ರಂದು ರಾಹುಲ್​ ಗಾಂಧಿ ಅವರನ್ನು ದೋಷಿ ಎಂದು ತೀರ್ಪು ನೀಡಿತ್ತು ಮತ್ತು 2 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಮೇಲ್ಮನವಿ ಸಲ್ಲಿಸಲು 30 ದಿನಗಳ ಕಾಲಾವಕಾಶ ನೀಡಿದೆ.

    ಕ್ಷಮಿಸಿ, ನಾನು ಅಷ್ಟೊಂದು ಒಳ್ಳೆಯವನಲ್ಲ..ವಾಟ್ಸ್​ಆ್ಯಪ್ ಸ್ಟೇಟಸ್ ಹಾಕಿ ಪ್ರಾಣ ಬಿಟ್ಟ ವಿದ್ಯಾರ್ಥಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts