More

    ಸೋಂಕು ಶೂನ್ಯಕ್ಕಿಳಿಸಲು ಯತ್ನ



    ಹುಬ್ಬಳ್ಳಿ: ನಗರದ ಕಿಮ್್ಸ ಆಸ್ಪತ್ರೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರು ಸೋಮವಾರ ಕೋವಿಡ್ ವ್ಯಾಕ್ಸಿನ್ ಪಡೆದರು.

    60 ವರ್ಷ ಮೇಲ್ಪಟ್ಟವರು ಮತ್ತು 45ರಿಂದ 59ರ ವಯೋಸಹಜ ಕಾಯಿಲೆಯಿಂದ ಬಳುತ್ತಿರುವವರಿಗೆ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಬೇರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಕಡಿಮೆ ಇದೆ. ನಿತ್ಯ ಬೆಳಕಿಗೆ ಬರುತ್ತಿರುವ ಪ್ರಕರಣ ಪ್ರಮಾಣವೂ ಇಳಿಕೆಯಾಗಿದೆ. ಸರ್ಕಾರ ಇದನ್ನು ಶೂನ್ಯಕ್ಕಿಳಿಸಲು ಪ್ರಯತ್ನಿಸುತ್ತಿದೆ. ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮವಿಲ್ಲ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಲಸಿಕೆ ಪಡೆದು ಜನರಲ್ಲಿ ಆತ್ಮವಿಶ್ವಾಸ ಮೂಡಿಸಿದ್ದಾರೆ ಎಂದರು.

    ಆರಂಭದಲ್ಲಿ ಜನಪ್ರತಿನಿಧಿಗಳು ಲಸಿಕೆ ಪಡೆದುಕೊಳ್ಳುತ್ತಿಲ್ಲ ಏಕೆ ಎಂಬ ಪ್ರಶ್ನೆಗಳು ಕೇಳಿಬಂದಿದ್ದವು. ಆರೋಗ್ಯ ಸಿಬ್ಬಂದಿ, ಕೋವಿಡ್ ವಾರಿಯರ್​ಗಳಿಗೆ ಲಸಿಕೆ ನೀಡಿದ ಬಳಿಕ 60 ವರ್ಷ ಮೇಲ್ಪಟ್ಟವರಿಗೆ ನೀಡಲಾಗುತ್ತಿದೆ. ಸರತಿ ಪ್ರಕಾರ 60 ವರ್ಷ ಮೇಲ್ಪಟ್ಟ ಜನಪ್ರತಿನಿಧಿಗಳು ಲಸಿಕೆಯನ್ನು ಪಡೆದುಕೊಳ್ಳುತ್ತಿದ್ದೇವೆ. ಖಾಸಗಿ ಆಸ್ಪತ್ರೆಗಳಲ್ಲಿ 250 ರೂ. ಪಡೆಯಲಾಗುತ್ತದೆ ಎಂದರು.

    ಜಿಲ್ಲಾಧಿಕಾರಿ ನಿತೇಶ ಪಾಟೀಲ, ಕಿಮ್್ಸ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ, ಡಿಎಚ್​ಒ ಡಾ. ಯಶವಂತ ಮದೀನಕರ, ಬಿಜೆಪಿ ಮುಖಂಡರಾದ ಮಲ್ಲಿಕಾರ್ಜುನ ಸಾವಕಾರ, ಸಂತೋಷ ಚವ್ಹಾಣ, ಪ್ರಭು ನವಲಗುಂದಮಠ ಇತರರು ಇದ್ದರು.

    11 ಕೋವಿಡ್ ಪ್ರಕರಣ ಪತ್ತೆ: ಧಾರವಾಡ ಜಿಲ್ಲೆಯಲ್ಲಿ ಸೋಮವಾರ 11 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. 4 ಜನರು ಬಿಡುಗಡೆಯಾಗಿದ್ದು, 54 ಸಕ್ರಿಯ ಪ್ರಕರಣಗಳಿವೆ.

    ಲಸಿಕೆ ಪಡೆದ ಸಾಹಿತಿ ಪ್ರೊ. ಮಾಲತಿ ಪಟ್ಟಣಶೆಟ್ಟಿ

    ಧಾರವಾಡ: ಹಿರಿಯ ಸಾಹಿತಿ ಪ್ರೊ. ಮಾಲತಿ ಪಟ್ಟಣಶೆಟ್ಟಿ ಅವರು ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಸೋಮವಾರ ಕೋವ್ಯಾಕ್ಸಿನ್ ಲಸಿಕೆ ಪಡೆದರು.

    2ನೇ ಹಂತದಲ್ಲಿ 60 ವರ್ಷ ಮೇಲ್ಪಟ್ಟ ವರಿಗೆ ಸೋಮವಾರದಿಂದ ಕೋವ್ಯಾಕ್ಸಿನ್ ಲಸಿಕೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ 80 ವರ್ಷದ ಪ್ರೊ. ಮಾಲತಿ ಅವರು, ಜಿಲ್ಲಾ ಆಸ್ಪತ್ರೆಗೆ ತೆರಳಿ ಲಸಿಕೆ ಪಡೆದುಕೊಂಡರು.

    ಅವರಿಗೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಕುಮಾರ ಮಾನಕರ ಲಸಿಕಾಕರಣ ಪ್ರಮಾಣಪತ್ರ ವಿತರಿಸಿದರು.



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts